ಭಾನುವಾರ, ಏಪ್ರಿಲ್ 5, 2020
19 °C

ಕಲ್ಯಾಣ ಕರ್ನಾಟಕಕ್ಕೆ ಬಿಜೆಪಿ ಸರ್ಕಾರದ ಕೊಡುಗೆ ಶೂನ್ಯ: ಪ್ರಿಯಾಂಕ್ ಖರ್ಗೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಕಲ್ಯಾಣ ಕರ್ನಾಟಕಕ್ಕೆ ಬಿಜೆಪಿ ಸರ್ಕಾರದ ಕೊಡುಗೆ ಶೂನ್ಯ ಎಂದು ಶಾಸಕ ಪ್ರಿಯಾಂಕ್ ಖರ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. 

ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಗುರುವಾರ ಮಂಡಿಸಿರುವ ಬಜೆಟ್‌ ಕುರಿತು ಅವರುಯ ಸರಣಿ ಟ್ವೀಟ್‌ಗಳನ್ನು ಮಾಡಿದ್ದಾರೆ. 

‘ಕೇವಲ ಹೆಸರಿನ ಬದಲಾವಣೆಯಿಂದ ನಮ್ಮ ಭಾಗದ ಜನರ ಭವಿಷ್ಯ ಬದಲಾಗುವುದಿಲ್ಲ. ಬಿಜೆಪಿ ಈ ಮೊದಲು 371 (ಜೆ) ಕಾಲಂ ಅನ್ನು ತಿರಸ್ಕರಿಸಿತ್ತು. ಈಗ ಬಜೆಟ್‌ನಲ್ಲಿಯೂ ಈ ಪ್ರದೇಶವನ್ನು ಕಡೆಗಣಿಸಿದೆ. ಕಾಂಗ್ರೆಸ್ ಸರ್ಕಾರದಿಂದ ಅನ್ಯಾಯವಾಗುತ್ತಿದೆ ಎಂದು ರಾಜೀನಾಮೆ ನೀಡಿದ ರಾಜಕಾರಣಿಗಳು ಎಲ್ಲಿದ್ದಾರೆ? ಎಂದು ಪ್ರಶ್ನಿಸಿದ್ದಾರೆ. 

ಕೇಂದ್ರ ತೆರಿಗೆಯಲ್ಲಿ ರಾಜ್ಯದ ಪಾಲು ಕಡಿಮೆಯಾಗಿದ್ದು, ಅದನ್ನು ಸರಿದೂಗಿಸಲು ಪೆಟ್ರೋಲ್‌, ಡೀಸೆಲ್‌ ಮತ್ತು ಇತರ ತೆರಿಗೆಗಳನ್ನು ಹೆಚ್ಚಳ ಮಾಡುವ ಮೂಲಕ ನಾಗರಿಕರನ್ನು ತೊಂದರೆಗೆ ಸಿಲುಕಿಸುವ ಪ್ರಯತ್ನ ಮಾಡಿದ್ದಾರೆ ಎಂದು ಹೇಳಿದ್ದಾರೆ. 

ಉಪನಗರ ರೈಲು ಯೋಜನೆಗೆ ಕೇಂದ್ರ ಆರ್ಥಿಕ ವ್ಯವಹಾರಗಳ ಸಂಪುಟ ಸಮಿತಿಯ (ಸಿಸಿಇಎ) ಅನುಮೋದನೆ ಸಿಗದಿದ್ದರೂ ಅನುದಾನ ಮಿಸಲಿರಿಸಿರುವ ಉದ್ದೇಶ ತಿಳಿಯುತ್ತಿಲ್ಲ ಎಂದು ಮತ್ತೊಂದು ಟ್ವೀಟ್‌ ಮಾಡಿದ್ದಾರೆ. 

ಇದಕ್ಕೂ ಮುನ್ನ ವಿಧಾನಸೌಧದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಕಲ್ಯಾಣ ಕರ್ನಾಟಕ ಭಾಗಕ್ಕೆ ಘೋಷಿಸಿರುವ ಅನುದಾನದ ಬಗ್ಗೆ ಇಲಾಖಾವಾರು ಮಾಹಿತಿ ಇಲ್ಲ. ಜೊತೆಗೆ, ನಮ್ಮ ಭಾಗಕ್ಕೆ ಮೈ‌ತ್ರಿ ಸರ್ಕಾರದ ಅವಧಿಯಲ್ಲಿ ₹1500 ಕೋಟಿ ಅನುದಾನವನ್ನು ಬಿಡುಗಡೆ ಮಾಡಲಾಗಿತ್ತು. ಆದರೆ, ಈ ಬಾರಿಯ ಬಜೆಟ್‌ನಲ್ಲಿ ಯಡಿಯೂರಪ್ಪ ಆದ್ಯತೆ ನೀಡದೆ ಅನ್ಯಾಯ ಮಾಡಿದ್ದಾರೆ. ಮುಂದಿನ ದಿನಗಳಲ್ಲಿ ಹೋರಾಟ ನಡೆಸಲಾಗುವುದು’ ಎಂದು ತಿಳಿಸಿದರು. 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು