ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Punjab Budget: ಎಎಪಿ ಮೊದಲ ಬಜೆಟ್‌ನಲ್ಲೇ 300 ಯೂನಿಟ್ ಉಚಿತ ವಿದ್ಯುತ್ ಘೋಷಣೆ

Last Updated 27 ಜೂನ್ 2022, 11:12 IST
ಅಕ್ಷರ ಗಾತ್ರ

ಚಂಡೀಗಡ: ಪಂಜಾಬ್‌‌ನಲ್ಲಿ ಜುಲೈ 1ರಿಂದ ಗೃಹ ಬಳಕೆಗಾಗಿ ತಿಂಗಳಿಗೆ 300 ಯೂನಿಟ್‌ಗಳ ಉಚಿತ ವಿದ್ಯುತ್ ಪೂರೈಸುವುದಾಗಿ ಮುಖ್ಯಮಂತ್ರಿ ಭಗವಂತ ಮಾನ್ ನೇತೃತ್ವದ ಸರ್ಕಾರ ಸೋಮವಾರ ಘೋಷಿಸಿದೆ.

ಪಂಜಾಬ್‌ನಲ್ಲಿ ಮೊದಲ ಬಾರಿಗೆ ಅಧಿಕಾರಕ್ಕೆ ಬಂದಿರುವ ಆಮ್ ಆದ್ಮಿ ಪಕ್ಷ (ಎಎಪಿ) ನೇತೃತ್ವದ ಸರ್ಕಾರವು, ಚೊಚ್ಚಲ ಬಜೆಟ್‌ನಲ್ಲೇ ಈ ಕುರಿತು ಮಹತ್ವದ ಘೋಷಣೆ ಮಾಡಿದೆ.

ಪಂಜಾಬ್‌‌ನಲ್ಲಿ ಮುಖ್ಯಮಂತ್ರಿ ಭಗವಂತ ಮಾನ್ ಅವರ ಸರ್ಕಾರವು ಮಾರ್ಚ್‌ನಲ್ಲಿ ಅಧಿಕಾರ ವಹಿಸಿಕೊಂಡಿತ್ತು.

ಹಣಕಾಸು ಸಚಿವ ಹರಪಾಲ್ ಸಿಂಗ್ ಚೀಮಾ ಅವರು, ಸೋಮವಾರ 2022-23ನೇ ಸಾಲಿನ ಬಜೆಟ್‌ ಮಂಡಿಸಿದರು.

ಚುನಾವಣೆ ಪ್ರಣಾಳಿಕೆಯಲ್ಲಿ ಘೋಷಿಸಿದಂತೆ, ಕಾಗದ ರಹಿತ ಬಜೆಟ್‌ ಮಂಡಿಸಿದ ಸಚಿವರು, ಜುಲೈ 1ರಿಂದ ಪ್ರತಿ ಮನೆಗೂ ಗೃಹ ಬಳಕೆಗೆ ತಿಂಗಳಿಗೆ 300 ಯೂನಿಟ್ ಉಚಿತ ವಿದ್ಯುತ್ ಪೂರೈಸುವುದಾಗಿ ತಿಳಿಸಿದರು.

ಭ್ರಷ್ಟಾಚಾರದ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಸಚಿವರು ಪ್ರತಿಪಾದಿಸಿದರು. ಎಎಪಿ ಪಕ್ಷವು ಭ್ರಷ್ಟಾಚಾರ ವಿರೋಧಿ ಚಳವಳಿಯಿಂದ ಆರಂಭವಾಗಿದೆ. ಭ್ರಷ್ಟಾಚಾರದಲ್ಲಿ ತೊಡಗಿಸಿಕೊಳ್ಳುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು.

ಸರ್ಕಾರದ ವೆಬ್‌ಸೈಟ್‌ನಲ್ಲಿ ಹಾಗೂ ಇ-ಮೇಲ್ ಮೂಲಕ 20,384 ಸಲಹೆಗಳನ್ನು ಸ್ವೀಕರಿಸಿದ ಬಳಿಕ ಸಿದ್ಧಪಡಿಸಿದ ಜನತಾ ಬಜೆಟ್‌ನಲ್ಲಿ ಆರೋಗ್ಯ, ಶಿಕ್ಷಣ ಸೇರಿದಂತೆ ವಿವಿಧ ಕ್ಷೇತ್ರಗಳಿಗೆ ಒತ್ತು ನೀಡಲಾಗಿದೆ ಎಂದು ಹಣಕಾಸು ಸಚಿವರು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT