ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ದಾಖಲೆಯ 17ನೇ ಬಜೆಟ್ ಮಂಡಿಸಿದ್ದಾರೆ. ಬಜೆಟ್ ಕುರಿತು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ ಪ್ರತಿಕ್ರಿಯಿಸಿದ್ದು, ‘ಕರ್ನಾಟಕದ ಆರ್ಥಿಕತೆ ಅಧೋಗತಿಗೆ ತಲುಪಿದ್ದು, ಸಿದ್ದರಾಮಯ್ಯ ಸರ್ಕಾರದಿಂದ ರಾಜ್ಯದ ಭವಿಷ್ಯ ಅಡಮಾನ ಇಟ್ಟಂತಾಗಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.

ಬಜೆಟ್ ಕುರಿತು ‘ಎಕ್ಸ್’ನಲ್ಲಿ ಪೋಸ್ಟ್ ಹಂಚಿಕೊಂಡಿರುವ ಅವರು, ‘ಸರ್ವರಿಗೂ ಸಮಪಾಲು, ಸರ್ವರಿಗೂ ಸಮಬಾಳು’ ಕೊಡುತ್ತೇವೆ ಎಂದು ಬೊಗಳೆ ಬಿಟ್ಟು ಅಧಿಕಾರಕ್ಕೆ ಬಂದ ಸಿದ್ದರಾಮಯ್ಯ ಸರ್ಕಾರ ಇಂದು ಕರ್ನಾಟಕದಲ್ಲಿ ‘ಸರ್ವರಿಗೂ ತೆರಿಗೆ, ಸರ್ವರಿಗೂ ಸಾಲ’ ಎಂಬ ಸ್ಥಿತಿ ನಿರ್ಮಿಸಿದೆ ಎಂದು ಟೀಕಿಸಿದ್ದಾರೆ.

‘ಜನರ ಕೆಂಗಣ್ಣಿಗೆ ಗುರಿಯಾಗಿ ಮುಜುಗರಕ್ಕೀಡಾಗುವ ಪರಿಸ್ಥಿತಿ ಬಂದಾಗಲೆಲ್ಲ ಕೇಂದ್ರ ಸರ್ಕಾರದ ಮೇಲೆ ಗೂಬೆ ಕೂರಿಸಿ ಜನರನ್ನು ದಿಕ್ಕು ತಪ್ಪಿಸುವ ಚಳಿಯನ್ನು ಬಜೆಟ್ನಲ್ಲಿಯೂ ಮುಂದುವರೆಸಿರುವ ಸಿದ್ದರಾಮಯ್ಯನವರು ಬಜೆಟ್ ಭಾಷಣದಲ್ಲೂ ಅದೇ ಚಾಳಿ ಪ್ರದರ್ಶನ ಮಾಡಿದ್ದಾರೆ. ರಾಜ್ಯದ ಆರ್ಥಿಕ ಭವಿಷ್ಯಕ್ಕೆ ಸ್ಪಷ್ಟ ದಿಕ್ಕು ನೀಡಬೇಕಾದ ಬಜೆಟ್ನಲ್ಲಿ ವಾಸ್ತವ ಸ್ಥಿತಿಗತಿಗಳನ್ನು ಪ್ರಾಮಾಣಿಕವಾಗಿ ಹೇಳುವ ಬದಲು ಕಟ್ಟು ಕಥೆಗಳನ್ನು ಹೇಳುತ್ತಾ ಕಾಲಹರಣ ಮಾಡಲಾಗಿದೆ’ ಎಂದು ಗುಡುಗಿದ್ದಾರೆ.

‘ಕಾಂಗ್ರೆಸ್ ಸರ್ಕಾರದ ಸಾಲದ ಪ್ರಮಾಣವೇ ಅದರ ಆರ್ಥಿಕ ನಿರ್ವಹಣೆಯ ನಿಜ ಮುಖವನ್ನು ಬಯಲಿಗೆಳೆಯುತ್ತದೆ. 2023–24ರಲ್ಲಿ ಸುಮಾರು ₹82,000 ಕೋಟಿ, 2024–25ರಲ್ಲಿ ₹1.05 ಲಕ್ಷ ಕೋಟಿ, 2025–26ರಲ್ಲಿ ₹1.16 ಲಕ್ಷ ಕೋಟಿ, ಮತ್ತು ಈಗ 2026–27ರ ಬಜೆಟ್ ಅಂದಾಜಿನಲ್ಲಿ ₹1.32 ಲಕ್ಷ ಕೋಟಿ ಸಾಲ ಮಾಡಲು ಯೋಜನೆ ರೂಪಿಸಲಾಗಿದೆ. ಅಂದರೆ ಕೇವಲ ನಾಲ್ಕು ವರ್ಷಗಳಲ್ಲಿ ಈ ಸರ್ಕಾರವು ಸುಮಾರು ₹4.4 ಲಕ್ಷ ಕೋಟಿ ಹೊಸ ಸಾಲ ಮಾಡುವ ಪರಿಸ್ಥಿತಿ ಉಂಟುಮಾಡಿದೆ. ಇದು ಅಭಿವೃದ್ಧಿಗಾಗಿ ಮಾಡಿದ ಸಾಲವೇ? ಅಥವಾ ಚುನಾವಣಾ ಗ್ಯಾರಂಟಿಗಳಿಗಾಗಿ ರಾಜ್ಯದ ಭವಿಷ್ಯವನ್ನು ಗಿರವಿ ಇಟ್ಟ ಸಾಲವೇ ಎಂಬ ಪ್ರಶ್ನೆ ಇಂದು ಪ್ರತಿಯೊಬ್ಬ ಕನ್ನಡಿಗನ ಮನಸ್ಸಿನಲ್ಲಿ ಮೂಡಿದೆ’ ಎಂದು ಕುಟುಕಿದ್ದಾರೆ.

‘ರಾಜ್ಯದ ಹಣಕಾಸಿನ ವಾಸ್ತವ ಸ್ಥಿತಿ ಇನ್ನಷ್ಟು ಆತಂಕಕಾರಿಯಾಗಿದೆ. 2026–27ರಲ್ಲಿ ಕರ್ನಾಟಕದ ಒಟ್ಟು ರಾಜಸ್ವ ಆದಾಯ ಸುಮಾರು ₹3.15 ಲಕ್ಷ ಕೋಟಿ ಆಗಿದ್ದರೆ, ಕೇವಲ ಸಂಬಳ, ಪಿಂಚಣಿ ಮತ್ತು ಬಡ್ಡಿ ಪಾವತಿಗೆ ಹೋಗುತ್ತಿರುವ ಮೊತ್ತವೇ ಸುಮಾರು ₹2.77 ಲಕ್ಷ ಕೋಟಿ. ಅಂದರೆ ರಾಜ್ಯದ ಆದಾಯದ ಸುಮಾರು ಶೇಕಡ 88ರುಷ್ಟು ಕೇವಲ ಕಮಿಟೆಡ್ ವೆಚ್ಚಗಳಿಗೆ ಹೋಗುತ್ತಿದೆ. ಇದರ ಪರಿಣಾಮವಾಗಿ ಈ ವರ್ಷ ರಾಜಸ್ವ ಕೊರತೆ ₹22,957 ಕೋಟಿ, ಮತ್ತು ವಿತ್ತೀಯ ಕೊರತೆ ಸುಮಾರು ₹1,09,998 ಕೋಟಿ ತಲುಪಿದೆ. ಅಭಿವೃದ್ಧಿ ಯೋಜನೆಗಳಿಗೆ ಹಣ ಮೀಸಲಿಡುವ ಬದಲು ಸಾಲದ ಬಲೆಗೆ ರಾಜ್ಯವನ್ನು ತಳ್ಳುತ್ತಿರುವುದು ಈ ಬಜೆಟ್ನ ಕಹಿ ಸತ್ಯ’ ಎಂದಿದ್ದಾರೆ.

‘ಬಿಜೆಪಿ ಸರ್ಕಾರದ ಅವಧಿಯಲ್ಲಿ ರಾಜ್ಯದ ಹಣಕಾಸಿನ ಶಿಸ್ತನ್ನು ಕಟ್ಟುನಿಟ್ಟಾಗಿ ಕಾಪಾಡಲಾಗಿತ್ತು. ರಾಜ್ಯದ ಸಾಲವು ರಾಜ್ಯದ ಒಟ್ಟು ಆಂತರಿಕ ಉತ್ಪನ್ನ (ಜಿಎಸ್ಡಿಪಿ) ಶೇಕಡ 25ರ ಒಳಗೆ ಇತ್ತು. ಫಿಸ್ಕಲ್ ಡೆಫಿಸಿಟ್ ಶೇಕಡ 3ರೊಳಗೆ ಇತ್ತು ಮತ್ತು ಹಲವಾರು ವರ್ಷಗಳಲ್ಲಿ ರಾಜಸ್ವ ಉಳಿಕೆ ಕೂಡ ಇತ್ತು. ಆದರೆ ಇಂದು ಸ್ಥಿತಿ ಸಂಪೂರ್ಣ ಬದಲಾಗಿದೆ. ಸಾಲ ಮಾಡಿ ಸಂಬಳ ಕೊಡುವ ಮಟ್ಟಕ್ಕೆ ರಾಜ್ಯವನ್ನು ತಳ್ಳಿರುವುದು ಈ ಕಾಂಗ್ರೆಸ್ ಸರ್ಕಾರದ ಆರ್ಥಿಕ ದುರಾಡಳಿತದ ಸ್ಪಷ್ಟ ಉದಾಹರಣೆ. ಅಭಿವೃದ್ಧಿಯ ಬದಲು ಸಾಲ, ಆರ್ಥಿಕ ಶಿಸ್ತಿನ ಬದಲು ಅರಾಜಕತೆ, ದೂರದೃಷ್ಟಿಯ ಬದಲು ಕೇಂದ್ರ ಸರ್ಕಾರದತ್ತ ಬೊಟ್ಟು ಮಾಡುವ ಕ್ಷುಲ್ಲಕ ರಾಜಕೀಯ, ಇದೇ ಸಿದ್ದರಾಮಯ್ಯ ಅವರ ಬಜೆಟ್ನ ನಿಜ ಸ್ವರೂಪವಾಗಿದೆ’ ಎಂದು ಹೇಳಿದ್ದಾರೆ.
.Karnataka Budget 2026: ಬಜೆಟ್ ಮುಖ್ಯಾಂಶಗಳು .Karnataka Budget: ಉದ್ಯೋಗಾಕಾಂಕ್ಷಿಗಳಿಗೆ ಬಂಪರ್; ಇಲ್ಲಿದೆ ಉದ್ಯೋಗಗಳ ವಿವರ.Karnataka Budget: ಕುಕ್ಕೆ, ಕೊಲ್ಲೂರು ಕ್ಷೇತ್ರ ಅಭಿವೃದ್ಧಿಗೆ ‘ಪ್ರಾಧಿಕಾರ’.Karnataka Budget 2026: ಮೇಕೆದಾಟು ಯೋಜನೆಗೆ ಹೊಸ ಡಿಪಿಆರ್; ಸಿಎಂ ಸಿದ್ದರಾಮಯ್ಯ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.