ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎಸ್‌ಸಿ, ಎಸ್‌ಟಿ ಜನಾಂಗದವರ ಕಲ್ಯಾಣಕ್ಕೆ ₹26,930 ಕೋಟಿ ಅನುದಾನ 

Last Updated 5 ಮಾರ್ಚ್ 2020, 11:38 IST
ಅಕ್ಷರ ಗಾತ್ರ

ಬೆಂಗಳೂರು:ಶೋಷಿತ, ದುರ್ಬಲ ವರ್ಗಗಳ ಅಭಿವೃದ್ಧಿಗೆ ಸರ್ಕಾರ ವಿಶೇಷ ಆದ್ಯತೆ ನೀಡುತ್ತದೆ ಎಂದು ಹೇಳಿದ ಬಿಎಸ್ ಯಡಿಯೂರಪ್ಪ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಜನಾಂಗದವರ ಕಲ್ಯಾಣಕ್ಕೆ ಸರ್ಕಾರ ಒತ್ತು ನೀಡಿದೆಎಂದಿದ್ದಾರೆ.

ರಾಜ್ಯ ಬಜೆಟ್‌ನಲ್ಲಿ ಸಮಾಜ ಕಲ್ಯಾಣಕ್ಕಾಗಿ ಸಿಕ್ಕಿದ ಅನುದಾನಗಳು

* ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಜನಾಂಗದವರ ಕಲ್ಯಾಣಕ್ಕೆ ಎಸ್‍ಸಿಎಸ್‍ಪಿ/ ಟಿಎಸ್‍ಪಿ ಅಡಿ ₹26,930 ಕೋಟಿ ಅನುದಾನ ನಿಗದಿ.

* ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ ನಡೆಸುವ ವಸತಿ ಶಾಲೆಗಳಲ್ಲಿ ಆಯಾ ತಾಲ್ಲೂಕಿನ ವಿದ್ಯಾರ್ಥಿಗಳಿಗೆ ಕನಿಷ್ಠ ಶೇ. 25 ರಷ್ಟು ಸೀಟು ಹಂಚಿಕೆಗೆ ಕ್ರಮ. ಈ ವಸತಿ ಶಾಲೆಗಳಿಗೆ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಮೇಲ್ವಿಚಾರಣಾ ಸಮಿತಿ ರಚನೆ.

* ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ನಿರುದ್ಯೋಗಿ ಯುವಕ/ಯುವತಿಯರಿಗೆ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಮೂಲಕ ವಾಹನ ಚಾಲನಾ ತರಬೇತಿ, ವಿವಿಧ ಪ್ಯಾರಾಮೆಡಿಕಲ್ ಸರ್ಟಿಫಿಕೇಟ್ ಕೋರ್ಸುಗಳೊಂದಿಗೆ ಕೌಶಲ್ಯಾಭಿವೃದ್ಧಿ ತರಬೇತಿ ಹಾಗೂ ಸಣ್ಣ ಸರಕು ಸಾಗಾಣಿಕೆ ವಾಹನ ಖರೀದಿಗೆ ಸಾಲದ ಸೌಲಭ್ಯ ನೀಡಲು ಕ್ರಮ.

* ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಜನರು ನಿರ್ವಹಿಸುತ್ತಿರುವ ಸಹಕಾರ ಸಂಘಗಳಿಗೆ ಆರ್ಥಿಕ ಚಟುವಟಿಕೆಗಳಿಗಾಗಿ ನೀಡುವ ಷೇರು ಬಂಡವಾಳ ದ್ವಿಗುಣಗೊಳಿಸಿ 20 ಲಕ್ಷ ಗಳಿಗೆ ಹೆಚ್ಚಳ.

* ಪ್ರತಿ ಜಿಲ್ಲೆಯಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ, ಹಲಗಲಿ ಬೇಡರ ಬಂಡಾಯದಲ್ಲಿ ಹುತಾತ್ಮರಾದ ಜಡಗ ಮತ್ತು ಬಾಲ ಇವರ ಹೆಸರಿನಲ್ಲಿ ಒಂದು ಲಕ್ಷ ನಗದು ಪ್ರಶಸ್ತಿ ನೀಡಲು ಕ್ರಮ. ₹60 ಲಕ್ಷ ಅನುದಾನ.

* ಶಿವಮೊಗ್ಗ ಮತ್ತು ಮೈಸೂರು ಜಿಲ್ಲೆಗಳಲ್ಲಿ ಬುಡಕಟ್ಟು ಜನರ ಪಾರಂಪರಿಕ ವೈದ್ಯಪದ್ಧತಿ ಮತ್ತು ಆಚರಣೆಗಳ ದಾಖಲೀಕರಣ ಮತ್ತು ಆಯ್ದ ಔಷಧಿಗಳ ಸಂಸ್ಕರಣಾ ಘಟಕಗಳ ಸ್ಥಾಪನೆಗೆ ₹2 ಕೋಟಿ ಅನುದಾನ.

* 'ಚರ್ಮ ಶಿಲ್ಪ' ಎಂಬ ಯಂತ್ರಾಧಾರಿತ ಉತ್ಪಾದನಾ ಘಟಕಗಳ ಸ್ಥಾಪನೆಗೆ 250 ಚರ್ಮ ಕುಶಲಕರ್ಮಿಗಳಿಗೆ ಡಾ|| ಬಾಬು ಜಗಜೀವನ್‍ರಾಮ್ ಚರ್ಮ ಕೈಗಾರಿಕೆ ಅಭಿವೃದ್ಧಿ ನಿಗಮದ ಮೂಲಕ ಘಟಕ ವೆಚ್ಚ 10 ಲಕ್ಷದಲ್ಲಿ ₹5 ಲಕ್ಷ ಸಹಾಯಧನ. ₹12.50 ಕೋಟಿ ಅನುದಾನ.

* ಅಲೆಮಾರಿ/ಅರೆ ಅಲೆಮಾರಿ ಸಮುದಾಯಗಳ ಸಮಗ್ರ ಅಭಿವೃದ್ಧಿಗೆ 78 ಕೋಟಿ ಅನುದಾನ.

* ಹಿಂದುಳಿದ ಸಮುದಾಯಗಳ ಅಭಿವೃದ್ಧಿಗೆ ಹಾಗೂ ವಿವಿಧ ನಿಗಮಗಳಿಗೆ ₹125 ಕೋಟಿ ಅನುದಾನ.

* ಇ-ವಾಣಿಜ್ಯ ಉತ್ಪನ್ನಗಳನ್ನು ಸರಬರಾಜು ಮಾಡುವ ಯುವಕರಿಗೆ ಬೈಕ್ ಕೊಳ್ಳಲು ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದಿಂದ ಸಾವಿರ ಯುವಕರಿಗೆ ತಲಾ ₹25,000 ಗಳಂತೆ ₹2.5 ಕೋಟಿ ಆರ್ಥಿಕ ನೆರವು

* ಅಲ್ಪಸಂಖ್ಯಾತರು ಹೆಚ್ಚಿನ ಸಂಖ್ಯೆಯಲ್ಲಿ ವಾಸವಿರುವ ಅಧಿಸೂಚಿತವಲ್ಲದ ಕೊಳಚೆ ಪ್ರದೇಶಗಳ ಅಭಿವೃದ್ಧಿಗೆ ₹200 ಕೋಟಿ ಅನುದಾನ

* ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಐದು ಮೊರಾರ್ಜಿ ದೇಸಾಯಿ ವಸತಿ ಶಾಲೆಗಳನ್ನು ಪದವಿ ಪೂರ್ವ ಕಾಲೇಜನ್ನಾಗಿ ಉನ್ನತೀಕರಿಸಲು ಕ್ರಮ.

* ಕ್ರೈಸ್ತ ಸಮುದಾಯದವರ ಸರ್ವತೋಮುಖ ಅಭಿವೃದ್ಧಿಗೆ ₹200 ಕೋಟಿ ಅನುದಾನ.

* ಅಪೂರ್ಣ ಹಂತದ ಎರಡು ಲಕ್ಷ ಮನೆಗಳನ್ನು ಪೂರ್ಣಗೊಳಿಸಿ, ವಸತಿ ರಹಿತರಿಗೆ ಹಂಚಿಕೆ ಮಾಡಲು ₹2500 ಕೋಟಿ

* ಸರ್ಕಾರದ ವಸತಿ ಯೋಜನೆಗಳಡಿ ಮನೆಗಳನ್ನು ನಿರ್ಮಿಸಿಕೊಂಡು ಹತ್ತು ವರ್ಷವಾಗಿದ್ದಲ್ಲಿ, ರಾಜೀವ್ ಗಾಂಧಿ ವಸತಿ ನಿಗಮಕ್ಕೆ ಅಡಮಾನವಿಡಲಾದ ನಿವೇಶನವನ್ನು ಡೀಮ್ಡ್ ರಿಲೀಸ್ ಎಂದು ಪರಿಗಣಿಸಲು ಕ್ರಮ.

* ಒಂದೇ ಸೂರಿನಡಿ ಪೂರ್ವ ಪ್ರಾಥಮಿಕ ತರಗತಿಗಳಿಂದ ಪದವಿಪೂರ್ವ ತರಗತಿವರೆಗೆ ಶಿಕ್ಷಣ ನೀಡುವ 276 ಕರ್ನಾಟಕ ಪಬ್ಲಿಕ್ ಶಾಲೆಗಳ ಮೂಲಭೂತ ಸೌಕರ್ಯ ಅಭಿವೃದ್ಧಿಗೆ ₹100 ಕೋಟಿ ಅನುದಾನ.

* ನಬಾರ್ಡ್ ಸಹಯೋಗದಲ್ಲಿ ₹758 ಕೋಟಿ ವೆಚ್ಚದಲ್ಲಿ ಅತಿವೃಷ್ಟಿಯಿಂದ ಹಾನಿಗೊಳಗಾದ 26 ಜಿಲ್ಲೆಗಳ 3386 ಸರ್ಕಾರಿ ಶಾಲೆಗಳ 6469 ಶಾಲಾ ಕೊಠಡಿಗಳ ಪುನರ್ ನಿರ್ಮಾಣಕ್ಕೆ ಕ್ರಮ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT