ಬುಧವಾರ, ಫೆಬ್ರವರಿ 19, 2020
31 °C

ಜಮ್ಮು– ಕಾಶ್ಮೀರ, ಲಡಾಖ್‌ಗೆ ಪ್ರತ್ಯೇಕ ಅನುದಾನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹೊಸದಾಗಿ ರಚನೆಯಾಗಿರುವ ಕೇಂದ್ರಾಡಳಿತ ಪ್ರದೇಶಗಳಾದ ಜಮ್ಮು-ಕಾಶ್ಮೀರ ಮತ್ತು ಲಡಾಖ್‌ಗೆ 2020–21ನೇ ಸಾಲಿನ ಬಜೆಟ್‌ನಲ್ಲಿ ₹30,757 ಕೋಟಿ ಅನುದಾನ ನೀಡಲಾಗಿದೆ.

ಇದರಲ್ಲಿ ₹279 ಕೋಟಿಯನ್ನು ವಿಪತ್ತು ನಿರ್ವಹಣಾ ನಿಧಿಗೆ ದೇಣಿಗೆಯ ರೂಪದಲ್ಲಿ ಹಾಗೂ ₹30,478 ಕೋಟಿಯನ್ನು ರಾಜ್ಯಗಳ ಸಂಪನ್ಮೂಲ ಕೊರತೆಯನ್ನು ಸರಿದೂಗಿಸುವ ಉದ್ದೇಶದಿಂದ ನೀಡಲಾಗಿದೆ.

ಲಡಾಖ್‌ಗೆ ₹5958 ಕೋಟಿ ನೀಡಲಾಗಿದೆ. ಅದರಲ್ಲಿ ₹83.38 ಕೋಟಿ ಗ್ರಾಮೀಣಾಭಿವೃದ್ಧಿಗೆ, ₹80.69 ಕೋಟಿ ಲೋಕೋಪಯೋಗಿ ಕೆಲಸಗಳಿಗೆ, ₹54.07 ಕೋಟಿ ವಿದ್ಯುತ್‌ ಕ್ಷೇತ್ರಕ್ಕೆ, ₹52 ಕೋಟಿ ನಾಗರಿಕ ವಿಮಾನಯಾನ ಕ್ಷೇತ್ರಕ್ಕೆ ಹಾಗೂ ₹47.50 ಕೋಟಿ ಪ್ರವಾಸೋದ್ಯಮ ಕ್ಷೇತ್ರಕ್ಕೆ ನೀಡಲಾಗಿದೆ. ಜಮ್ಮು ಕಾಶ್ಮೀರಕ್ಕೆ ನೀಡಿದ್ದ ವಿಶೇಷ ಸ್ಥಾನಮಾನವನ್ನು ರದ್ದುಪಡಿಸಿ ಆ ರಾಜ್ಯವನ್ನು ಎರಡು ಕೇಂದ್ರಾಡಳಿತ ಪ್ರದೇಶಗಳಾಗಿ ವಿಭಜಿಸಲಾಗಿತ್ತು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು