ತರೀಕೆರೆ: ‘ಮದ್ಯದ ಬೆಲೆ ಏರಿಕೆಯಿಂದ ಬಡ ಹಾಗೂ ಮಧ್ಯಮ ವರ್ಗದ ಕುಟುಂಬಗಳ ಮೇಲೆ ಪರಿಣಾಮ ಉಂಟಾಗುತ್ತದೆ’ ಎಂದು ರೋಟರಿ ಸಂಸ್ಥೆ ಮಾಜಿ ಅಧ್ಯಕ್ಷ ಎಚ್.ಒ. ದಯಾನಂದ್ ಹೇಳಿದ್ದಾರೆ.

ಆರೋಗ್ಯದ ದೃಷ್ಟಿಯಿಂದ ಮದ್ಯಪಾನ ಕಡಿಮೆ ಮಾಡಬೇಕು ಎಂದು ಸರ್ಕಾರ ಹೇಳುತ್ತದೆ. ಆದರೆ, ಮತ್ತೊಂದೆಡೆ ಬೆಲೆ ಹೆಚ್ಚಿಸಿ ಹೆಚ್ಚಿನ ಆದಾಯ ಗಳಿಸುವ ಕ್ರಮ ಕೈಗೊಳ್ಳುತ್ತಿದೆ. ಇದರ ಪರಿಣಾಮ ದಿನಗೂಲಿ ಕಾರ್ಮಿಕರು ಮತ್ತು ಬಡ ಕುಟುಂಬಗಳ ಆರ್ಥಿಕ ಸ್ಥಿತಿ ಇನ್ನಷ್ಟು ಹದಗೆಡಬಹುದು ಎಂದಿದ್ದಾರೆ.

ಮದ್ಯದ ಬೆಲೆ ಏರಿಕೆಯಾದರೂ ವ್ಯಸನಿಗಳ ಖರ್ಚು ಕಡಿಮೆಯಾಗುವುದಿಲ್ಲ. ಬದಲಿಗೆ ಕುಟುಂಬದ ಅವಶ್ಯಕತೆಗಳಿಗೆ ಮೀಸಲಾದ ಹಣ ಕಡಿಮೆಯಾಗುತ್ತದೆ. ಆದ್ದರಿಂದ ಸರ್ಕಾರ ಮದ್ಯದಿಂದ ಆದಾಯ ಗಳಿಸುವುದಕ್ಕಿಂತ, ಜನರಲ್ಲಿ ವ್ಯಸನಮುಕ್ತಿಯ ಜಾಗೃತಿ ಮೂಡಿಸಿ, ಕುಟುಂಬಗಳ ಕಲ್ಯಾಣಕ್ಕೆ ಆದ್ಯತೆ ನೀಡಬೇಕು. ಬಡವರ ಕಷ್ಟದ ಹಣ ಸರ್ಕಾರದ ಆದಾಯವಾಗಬಾರದು, ಅದು ಮಕ್ಕಳ ಶಿಕ್ಷಣ, ಆರೋಗ್ಯ ಮತ್ತು ಸುಖೀ ಜೀವನಕ್ಕೆ ಬಳಕೆಯಾಗಬೇಕು ಎಂದು ಅವರು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260514-126-741181593

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.