Union Budget 2021: ಕೇಂದ್ರ ಬಜೆಟ್‌ನಲ್ಲಿ ಪ್ರಾಮುಖ್ಯತೆ ಪಡೆದುಕೊಂಡ 6 ಅಂಶಗಳು

ಬೆಂಗಳೂರು: ಈ ಬಾರಿಯ ಬಜೆಟ್ ವಿವಿಧ ಕ್ಷೇತ್ರದಲ್ಲಿ ಅನುದಾನ ಒದಗಿಸುವ ಮೂಲಕ ಆರ್ಥಿಕ ಪ್ರಗತಿಗೆ ಉತ್ತೇಜನ ನೀಡುವ ಕಾರ್ಯಕ್ರಮ ಹೊಂದಿದೆ. ಹಣಕಾಸು ಸಚಿವರಾಗಿರುವ ನಿರ್ಮಲಾ ಸೀತಾರಾಮನ್ ಈ ಆರ್ಥಿಕ ವರ್ಷದ ಬಜೆಟ್ ಮಂಡಿಸುತ್ತಿದ್ದು, ಕೋವಿಡ್ ಸಮಸ್ಯೆಯಿಂದ ಕುಗ್ಗಿಹೋಗಿರುವ ದೇಶದ ಆರ್ಥಿಕತೆಗೆ ಉತ್ತಮ ಅನುದಾನ ಒದಗಿಸುವ ಯೋಚನೆ ಹೊಂದಿದ್ದಾರೆ. ಅಲ್ಲದೆ, ಈ ಬಜೆಟ್‌ನಲ್ಲಿ ಯಾವ ಕ್ಷೇತ್ರಗಳಿಗೆ ಪ್ರಮುಖ ಆದ್ಯತೆ ನೀಡಲಾಗುತ್ತಿದೆ ಎನ್ನುವುದನ್ನು ವಿವರಿಸಿದ್ದಾರೆ.
ಆರೋಗ್ಯ ಮತ್ತು ಸೌಖ್ಯತೆ, ಭೌತಿಕ ಮತ್ತು ಆರ್ಥಿಕ ಬಂಡವಾಳ, ಮೂಲಸೌಕರ್ಯ, ಸಮಗ್ರ ಅಭಿವೃದ್ಧಿ ಯೋಜನೆ, ಮಾನವ ಬಂಡವಾಳ ಹೂಡಿಕೆ, ಅನ್ವೇಷಣೆ ಮತ್ತು ಆರ್ ಆ್ಯಂಡ್ ಡಿ, ಕನಿಷ್ಠ ಸರ್ಕಾರ ಮತ್ತು ಗರಿಷ್ಠ ಆಡಳಿತ ಎನ್ನುವ ಅಂಶಗಳನ್ನು ಈ ಬಜೆಟ್‌ನಲ್ಲಿ ಪ್ರಮುಖವಾಗಿ ಆದ್ಯತೆ ನೀಡಲಾಗುತ್ತದೆ ಎಂದು ನಿರ್ಮಲಾ ಸೀತಾರಾಮನ್ ತಿಳಿಸಿದ್ದಾರೆ.
ಹಣಕಾಸು ಹೂಡಿಕೆ ಹಾಗೂ ವಿವಿಧ ಕ್ಷೇತ್ರಗಳಲ್ಲಿ ಹೆಚ್ಚಿನ ಪ್ರಾಮುಖ್ಯತೆ ನೀಡುವ ಮೂಲಕ ಆರ್ಥಿಕ ಪ್ರಗತಿಗೆ ಉತ್ತೇಜನ ನೀಡುವ ಯೋಜನೆಯನ್ನು ನಿರ್ಮಲಾ ಸೀತಾರಾಮನ್ ಪ್ರಕಟಿಸಿದ್ದಾರೆ. ಕೋವಿಡ್ ಬಳಿಕ ಆರೋಗ್ಯ, ನೈರ್ಮಲ್ಯ ಹಾಗೂ ಮೂಲಸೌಕರ್ಯ ಯೋಜನೆಯನ್ನು ಆದ್ಯತೆಯಲ್ಲಿ ಪರಿಗಣಿಸಲಾಗುತ್ತಿದೆ.
ಇದನ್ನೂ ಓದಿ: ದೇಶದ ಮೊದಲ ಕಾಗದ ರಹಿತ ಡಿಜಿಟಲ್ ಬಜೆಟ್: ನಿರ್ಮಲಾ ಸೀತಾರಾಮನ್
ಜತೆಗೆ ಪ್ರಧಾನ ಮಂತ್ರಿ ಆತ್ಮನಿರ್ಭರ ಸ್ವಾಸ್ಥ ಭಾರತ ಯೋಜನೆ ಘೋಷಿಸಲಾಗಿದ್ದು, ₹64,180 ಕೋಟಿ ಮೀಸಲಿರಿಸಲಾಗಿದ್ದು, ಆರೋಗ್ಯ ಕ್ಷೇತ್ರದಲ್ಲಿ ಗರಿಷ್ಠ ಉತ್ತೇಜನ ನೀಡಲು ಮುಂದಾಗಿದ್ದಾರೆ.
ಇದನ್ನೂ ಓದಿ: ಬಜೆಟ್ 2021: ಕೋವಿಡ್ ಲಸಿಕೆಗೆ ₹35,000 ಕೋಟಿ, ಆರೋಗ್ಯಕ್ಕಾಗಿ ₹64,180 ಕೋಟಿ
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.