ಶುಕ್ರವಾರ, ಏಪ್ರಿಲ್ 3, 2020
19 °C

ರಾಜ್ಯದ ಪ್ರವಾಸಿ ಕ್ಷೇತ್ರಗಳಿಗೆ ಹೂಡಿಕೆದಾರರನ್ನು ಆಕರ್ಷಿಸಲು ಕ್ರಮ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

prajavani

ಬೆಂಗಳೂರು: ಪ್ರವಾಸೋದ್ಯಮ ಅಭಿವೃದ್ಧಿಗೆ ಬಜೆಟ್‌ನಲ್ಲಿ ಹಲವಾರು ಘೋಷಣೆಗಳನ್ನು ಮಾಡಿರುವ ಮುಖ್ಯಮಂತ್ರಿ ಯಡಿಯೂರಪ್ಪ ಅವರು, ಪ್ರವಾಸಿ ಕ್ಷೇತ್ರಗಳಲ್ಲಿ ಹೆಚ್ಚಿನ ಹೂಡಿಕೆದಾರರನ್ನು ಆಕರ್ಷಿಸಲು “ಜಾಗತಿಕ ಪ್ರವಾಸೋದ್ಯಮ ಹೂಡಿಕೆದಾರರ ಸಮಾವೇಶ” (Global Tourism Investors Meet) ಮಾಡುವುದಾಗಿ ತಿಳಿಸಿದ್ದಾರೆ. 

ಕರ್ನಾಟಕ ಪ್ರವಾಸೋದ್ಯಮ ಕಾರ್ಯಪಡೆಯ ಶಿಫಾರಸುಗಳಂತೆ ಪ್ರವಾಸೋದ್ಯಮಕ್ಕೆ ಉತ್ತೇಜನ ನೀಡಲು ಕ್ರಮ ಕೈಗೊಳ್ಳಲಾಗುವುದು. ಪ್ರವಾಸಿಗರನ್ನು ಹೆಚ್ಚಾಗಿ ಸೆಳೆಯುವ ಜಾಹೀರಾತು ಮತ್ತು ಇತರ ಚಟುವಟಿಕೆಗಳಿಗೆ ₹100 ಕೋಟಿ ಹಾಗೂ ರಾಜ್ಯದ ಪ್ರವಾಸೋದ್ಯಮದ ಸರ್ವತೋಮುಖ ಅಭಿವೃದ್ಧಿಗೆ ₹ 500 ಕೋಟಿ ಅನುದಾನ ಒದಗಿಸುವುದಾಗಿ ಅವರು ತಿಳಿಸಿದರು.

ಇದನ್ನೂ ಓದಿ: 

ವೀರ ಮದಕರಿ ನಾಯಕ ಹಾಗೂ ಒನಕೆ ಓಬವ್ವರ ನೆನಪಿಸುವ ಚಿತ್ರದುರ್ಗದ ಸಮಗ್ರ ಅಭಿವೃದ್ಧಿಗೆ ಕ್ರಮ ಕೈಗೊಳ್ಳಲಾಗುವುದು. ಐತಿಹಾಸಿಕ ಪ್ರವಾಸಿ ತಾಣವಾದ ಬಾದಾಮಿಯ ಸಮಗ್ರ ಅಭಿವೃದ್ಧಿಗೆ ₹ 25 ಕೋಟಿ ಅನುದಾನ ಒದಗಿಸಲಾಗುವುದು. ಇದರೊಂದಿಗೆ ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕಿನ ಜೋಗ ಜಲಪಾತ ಮತ್ತು ಇತರ ಪ್ರವಾಸಿ ತಾಣಗಳಲ್ಲಿ ಮೂಲಸೌಕರ್ಯ ಒದಗಿಸಿ, ಟೂರಿಸಂ ಸರ್ಕ್ಯೂಟ್ ಅಭಿವೃದ್ಧಿಗೆ ಕ್ರಮಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಇದನ್ನೂ ಓದಿ: 

ರಾಜ್ಯದಲ್ಲಿರುವ ಶೋಲಾ ಅರಣ್ಯಗಳ ಸರ್ವೇಕ್ಷಣೆ, ಜೀವ ವೈವಿಧ್ಯ ಸಂರಕ್ಷಣೆಗೆ ಐದು ಕೋಟಿ, ತ್ಯಾವರೆಕೊಪ್ಪ ಹುಲಿ ಸಿಂಹಧಾಮದಲ್ಲಿರುವ ಮಿನಿ ಮೃಗಾಲಯವನ್ನು ಉನ್ನತೀಕರಿಸಲು ಐದು ಕೋಟಿ ಅನುದಾನ ಮೀಸಲಿಡಲಾಗುವುದು. ರಾಮನಗರ ಜಿಲ್ಲೆಯ ರಣಹದ್ದು ಧಾಮದಲ್ಲಿ ಎರಡು ಕೋಟಿ ರೂ.ಗಳ ವೆಚ್ಚದಲ್ಲಿ ರಣಹದ್ದು ಸಂತಾನೋತ್ಪತ್ತಿ ಕೇಂದ್ರ ಸ್ಥಾಪನೆ ಮಾಡಲಾಗುವುದು ಎಂದು ಹೇಳಿದರು. 

* ಪ್ರವಾಸಿ ಸ್ನೇಹಿ ಯೋಜನೆಗಳನ್ನು ಒಳಗೊಂಡ ಹೊಸ ಪ್ರವಾಸೋದ್ಯಮ ನೀತಿ ಜಾರಿಗೆ ಕ್ರಮ.

* ಮಂಗಗಳ ಪುನರ್ವಸತಿಗೆ ಐದು ವರ್ಷಗಳಿಗೆ ಒಟ್ಟಾರೆ ₹ 6.25 ಕೋಟಿ ಅನುದಾನ. 2020-21ನೇ ಸಾಲಿನಲ್ಲಿ ₹ 1.25 ಕೋಟಿ ನೆರವು.

* ಉತ್ತರ ಕನ್ನಡ ಜಿಲ್ಲೆಯಲ್ಲಿ ₹1 ಕೋಟಿ ವೆಚ್ಚದಲ್ಲಿ ರಾಜ್ಯದ ಮೊದಲ ಕಡಲಧಾಮ (Marine Eco Park) ಸ್ಥಾಪನೆ.

ಇನ್ನಷ್ಟು: 

 

 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು