ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Budget 2021: 1 ಕೋಟಿಗೂ ಹೆಚ್ಚು ಫಲಾನುಭವಿಗಳಿಗೆ ಉಜ್ವಲಾ ಯೋಜನೆ ವಿಸ್ತರಣೆ

ಅನಿಲ ಆಧಾರಿತ ಆರ್ಥಿಕತೆ ಒತ್ತು: ನಿರ್ಮಲಾ ಸೀತಾರಾಮನ್
Last Updated 1 ಫೆಬ್ರುವರಿ 2021, 7:29 IST
ಅಕ್ಷರ ಗಾತ್ರ

ನವದೆಹಲಿ: ಸರ್ಕಾರದಿಂದ ಬಡವರಿಗೆ ಉಚಿತ ಅಡುಗೆ ಅನಿಲ ವಿತರಿಸುವ ‘ಉಜ್ವಲ‘ ಯೋಜನೆಯನ್ನು ಒಂದು ಕೋಟಿಗೂ ಹೆಚ್ಚು ಫಲಾನುಭವಿಗಳಿಗೆ ವಿಸ್ತರಿಸುತ್ತಿರುವುದಾಗಿ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ತಿಳಿಸಿದ್ದಾರೆ.

‘ವಾಹನಗಳಿಗೆ ಸಿಎನ್‌ಜಿ ಮತ್ತು ಕೊಳವೆ ಮೂಲಕ ಮನೆಗಳಿಗೆ ಅಡುಗೆ ಅನಿಲವನ್ನು ಪೂರೈಸುವ ನಗರ ಅನಿಲ ವಿತರಣಾ ಜಾಲವನ್ನು ಇನ್ನೂ 100 ಜಿಲ್ಲೆಗಳಿಗೆ ವಿಸ್ತರಿಸಲಾಗುವುದು‘ ಎಂದು ಹೇಳಿದ್ದಾರೆ.

ಅನಿಲ ಆಧಾರಿತ ಆರ್ಥಿಕತೆಯನ್ನು ಹೆಚ್ಚಿಸಲು ಕೊಳವೆಗಳ ಮೂಲಕ ಅನಿಲ ಪೂರೈಸುವ ಸಾಮರ್ಥ್ಯವನ್ನು ನಿಯಂತ್ರಿಸುವುದಕ್ಕಾಗಿ ಸಾಗಣೆ ವ್ಯವಸ್ಥೆ ಆಪರೇಟರ್ (ಟಿಎಸ್‌ಒ) ಅನ್ನು ಘೋಷಿಸಿದರು.

‘ದೇಶದಲ್ಲಿ ಕೊರೊನಾ ಸಾಂಕ್ರಾಮಿಕದ ಅವಧಿಯಲ್ಲೂ ಇಂಧನ ಪೂರೈಕೆಯಲ್ಲಿ ಯಾವುದೇ ವ್ಯತ್ಯಯ ಉಂಟಾಗಲಿಲ್ಲ‘ ಎಂದು ಉಲ್ಲೇಖಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT