ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Union Budget 2021: 42 ನಗರಗಳಲ್ಲಿ ವಾಯುಮಾಲಿನ್ಯ ನಿಯಂತ್ರಣಕ್ಕೆ ₹2,217 ಕೋಟಿ

Last Updated 1 ಫೆಬ್ರುವರಿ 2021, 19:31 IST
ಅಕ್ಷರ ಗಾತ್ರ

ನವದೆಹಲಿ: ದೇಶದ 42 ನಗರಗಳಲ್ಲಿ ವಾಯುಮಾಲಿನ್ಯ ನಿಯಂತ್ರಿಸುವ ಕಾರ್ಯಯೋಜನೆಗೆ ಕೇಂದ್ರ ಸರ್ಕಾರ ಬಜೆಟ್‌ನಲ್ಲಿ ₹ 2,217 ಕೋಟಿ ಮೀಸಲಿಟ್ಟಿದೆ.

‘10 ಲಕ್ಷಕ್ಕಿಂತಲೂ ಹೆಚ್ಚು ಜನಸಂಖ್ಯೆ ಇರುವ ನಗರಗಳಲ್ಲಿ ಹೆಚ್ಚುತ್ತಿರುವ ವಾಯುಮಾಲಿನ್ಯಕ್ಕೆ ಕಡಿವಾಣ ಹಾಕಲು ಒತ್ತು ನೀಡಲಾಗುವುದು’ ಎಂದು ಸಚಿವೆ ನಿರ್ಮಲಾ ಸೀತಾರಾಮನ್‌ ತಿಳಿಸಿದರು.

ಇದನ್ನು ಹೊರತುಪಡಿಸಿ ಪರಿಸರ ಸಚಿವಾಲಯಕ್ಕೆ ಈ ಬಜೆಟ್‌ನಲ್ಲಿ ₹ 2869.93 ಕೋಟಿ ನಿಗದಿಪಡಿಸಲಾಗಿದೆ. ಆದರೂ, ಕಳೆದ ಬಜೆಟ್‌ಗೆ ಹೋಲಿಸಿದರೆ 2021–22ರಲ್ಲಿ ಸಚಿವಾಲಯಕ್ಕೆ ನೀಡಿದ ಅನುದಾನದಲ್ಲಿ ಶೇ 8ರಷ್ಟು ಕಡಿಮೆಯಾಗಿದೆ.

ಅಲ್ಲದೆ, ರಾಷ್ಟ್ರ ರಾಜಧಾನಿ ಮತ್ತು ಆಸುಪಾಸಿನ ಪ್ರದೇಶಗಳಲ್ಲಿ ವಾಯು ಗುಣಮಟ್ಟ ನಿರ್ವಹಣೆಯ ಉದ್ದೇಶಕ್ಕಾಗಿ ಹೊಸದಾಗಿ ರಚಿಸಲಾಗಿರುವ ಆಯೋಗಕ್ಕೆ ಇದೇ ಮೊದಲ ಬಾರಿಗೆ ಬಜೆಟ್‌ನಲ್ಲಿ ₹ 20 ಕೋಟಿ ಅನುದಾನ ನಿಗದಿಪಡಿಸಲಾಗಿದೆ.

ಈ ಬಾರಿ ಹವಾಮಾನ ಬದಲಾವಣೆ ಕ್ರಿಯಾಯೋಜನೆಗೆ ಮೀಸಲಿಟ್ಟ ಅನುದಾನದಲ್ಲಿ ₹ 10 ಕೋಟಿ ಹಾಗೂ ಹುಲಿ ಸಂರಕ್ಷಣಾ ಯೋಜನೆಯ ಅನುದಾನದಲ್ಲಿ ₹ 50 ಕೋಟಿ ಕಳೆದ ಸಾಲಿಗೆ ಹೋಲಿಸಿದರೆ ಕಡಿತವಾಗಿದೆ. ಈ ವರ್ಷ ಕ್ರಿಯಾಯೋಜನೆಗೆ ₹30 ಕೋಟಿ ಘೋಷಿಸಲಾಗಿದೆ.

ಆದರೆ, ರಾಷ್ಟ್ರೀಯು ಕೋಸ್ಟಲ್ ಮಿಷನ್‌ಗೆ ಈ ಬಜೆಟ್‌ನಲ್ಲಿ ಮೊತ್ತವನ್ನು ದುಪ್ಪಟ್ಟುಗೊಳಿಸಿದ್ದು, ಒಟ್ಟಾರೆ ₹ 200 ಕೋಟಿ ನಿಗದಿಪಡಿಸಲಾಗಿದೆ. ಕಳೆದ ವರ್ಷ 103 ಕೋಟಿ ನಿಗದಿಪಡಿಸಲಾಗಿತ್ತು. ಮೀನುಗಾರರು, ಕರಾವರಿ ತೀರ ರಕ್ಷಣೆಯಲ್ಲಿ ತೊಡಗಿರುವ ಸಮುದಾಯಗಳಿಗೆ ಜೀವನಭದ್ರತೆಯನ್ನು ಈ ಮಿಷನ್‌ ನಡಿ ಒದಗಿಸಲಾಗುತ್ತದೆ.

‘ಹಳೆಯ ವಾಹನಗಳ ವಾಪಸ್‌ಗೆ ಕ್ರಮ‘: ಅಲ್ಲದೆ, ಹಳೆಯ ಹಾಗೂ ವಾಯುಮಾಲಿನ್ಯಕ್ಕೆ ಪ್ರಮುಖವಾಗಿ ಕಾರಣವಾಗುವ ವಾಹನಗಳನ್ನು ಹಂತ ಹಂತವಾಗಿ ಸ್ವಯಂಪ್ರೇರಿತವಾಗಿ ಬಳಕೆಯಿಂದ ಹಿಂಪಡೆಯುವ ಕಾರ್ಯಕ್ರಮವನ್ನೂ ಕೇಂದ್ರವು ಪ್ರಕಟಿಸಿದೆ. ಅದರಂತೆ, ವೈಯಕ್ತಿಕ ಬಳಕೆಯ ವಾಹನಗಳಿಗೆ 20 ವರ್ಷದ ನಂತರ ತಪಾಸಣೆಗೆ ಒಳಪಡಿಸಿ ಸುಸ್ಥಿತಿಯಲ್ಲಿದೆ ಎಂದು ಪ್ರಮಾಣಪತ್ರ ಪಡೆಯುವುದು ಅಗತ್ಯ. ವಾಣಿಜ್ಯ ಉದ್ದೇಶದ ವಾಹನಗಳನ್ನು 15 ವರ್ಷಗಳ ತರುವಾಯ ತಪಾಸಣೆಗೆ ಒಳಪಡಿಸಿ ಪ್ರಮಾಣಪತ್ರ ಪಡೆಯುವುದು ಅಗತ್ಯ.

ಈ ನೀತಿಯ ವ್ಯಾಪ್ತಿಗೆ ಸುಮಾರು 1 ಕೋಟಿಯಷ್ಟು ಹಳೆಯ ಹಗುರ, ಮಧ್ಯಮ ಮತ್ತು ಭಾರಿ ವಾಹನಗಳು ಒಳಪಡಲಿವೆ. ಈ ವಾಹನಗಳು ಹೊಸ ವಾಹನಗಳಿಗಿಂತಲೂ ಶೇ 10 ರಿಂದ 12 ಪಟ್ಟು ಹೆಚ್ಚು ಹೊಗೆಯನ್ನು ವಾತಾವರಣಕ್ಕೆ ಸೇರಿಸುತ್ತವೆ ಎಂದು ಈ ಬಗ್ಗೆ ಪ್ರತಿಕ್ರಿಯಿಸಿದ ಸಚಿವ ನಿತಿನ್ ಗಡ್ಕರಿ ಪ್ರತಿಕ್ರಿಯಿಸಿದರು.

ಇವುಗಳನ್ನೂ ಓದಿ...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT