ಭಾನುವಾರ, ಮೇ 22, 2022
21 °C

ಬಜೆಟ್ ದಿನ ಸಂಸತ್ತಿನಲ್ಲಿ ಕಪ್ಪು ಗೌನು ಧರಿಸಿ ಕಾಂಗ್ರೆಸ್ ಎಂಪಿಗಳ ಪ್ರತಿಭಟನೆ

ಏಜೆನ್ಸೀಸ್‌ Updated:

ಅಕ್ಷರ ಗಾತ್ರ : | |

ನವದೆಹಲಿ: ಕೇಂದ್ರ ಸರ್ಕಾರದ ನೂತನ ಮೂರು ವಿವಾದಿತ ಕೃಷಿ ಕಾಯ್ದೆಗಳನ್ನು ವಿರೋಧಿಸಿ ಕಾಂಗ್ರೆಸ್ ಸಂಸದರು ಬಜೆಟ್ ಮಂಡನೆಯ ದಿನದಂದು ಸಂಸತ್ತಿನಲ್ಲೂ ಪ್ರತಿಭಟಿಸಿದ್ದಾರೆ.

ಕಾಂಗ್ರೆಸ್ ಸಂಸದರಾದ ಜಸ್ಬೀರ್ ಸಿಂಗ್ ಗಿಲ್ ಮತ್ತು ಗುರ್ಜಿತ್ ಸಿಂಗ್ ಆಜ್ಲಾ ಅರು ಸಂಸತ್ತಿಗೆ ಕಪ್ಪು ಬಣ್ಣದ ಗೌನು ಧರಿಸಿ ಆಗಮಿಸಿದರು.

ಕೇಂದ್ರ ಬಜೆಟ್ 2021 ಲೈವ್ ಅಪ್‌ಡೇಟ್‌ಗಾಗಿ ಇಲ್ಲಿ ಕ್ಲಿಕ್ಕಿಸಿ

ಕೇಂದ್ರ ಸರ್ಕಾರ ಹಾಗೂ ಕೃಷಿ ಕಾಯ್ದೆಗಳ ವಿರುದ್ಧ ಭಿತ್ತಿಪತ್ರಗಳನ್ನು ತಮ್ಮ ಕೊರಳಿಗೆ ಹಾಕಿಸಿಕೊಂಡಿರುವ ಕಾಂಗ್ರೆಸ್ ಸಂಸದರು ಪ್ರತಿಭಟನೆ ನಡೆಸಿದರು.

 

 

 

ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಕೇಂದ್ರ ಬಜೆಟ್ 2021 ಮಂಡಿಸುತ್ತಿದ್ದಾರೆ. ಇದೇ ಮೊದಲ ಬಾರಿಗೆ ಕಾಗದರಹಿತ ಡಿಜಿಟಲ್ ಬಜೆಟ್ ಮಂಡಿಸಲಾಗುತ್ತಿದೆ.
 

 

ಅತ್ತ ಕೇಂದ್ರ ಸರ್ಕಾರದ ಮೂರು ನೂತನ ಕೃಷಿ ಕಾಯ್ದೆಗಳನ್ನು ರದ್ದುಗೊಳಿಸುವಂತೆ ಆಗ್ರಹಿಸಿದ ದೆಹಲಿ ಗಡಿ ಪ್ರದೇಶಗಳಲ್ಲಿ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ಬಜೆಟ್ ಹಿನ್ನಲೆಯಲ್ಲಿ ಪ್ರತಿಭಟನಾ ನಿರತ ಸ್ಥಳಗಳಲ್ಲಿ ಗರಿಷ್ಠ ಭದ್ರತೆ ಒದಗಿಸಲಾಗಿದೆ. 

ನವೆಂಬರ್ 26ರಿಂದಲೇ ದೆಹಲಿ ಗಡಿ ಪ್ರದೇಶಗಳಲ್ಲಿ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ಏತನ್ಮಧ್ಯೆ ಜನವರಿ 26 ಗಣರಾಜ್ಯೋತ್ಸವ ದಿನದಂದು ನಡೆದ ಟ್ರ್ಯಾಕ್ಟರ್ ಪೆರೇಡ್‌ನಲ್ಲಿ ಹಿಂಸಾಚಾರ ನಡೆದಿತ್ತು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು