ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Budget 2021: ಮೂಲಸೌಕರ್ಯ, ಆರೋಗ್ಯ ಕ್ಷೇತ್ರಕ್ಕೆ ಉತ್ತೇಜನ: ನಿರ್ಮಲಾ ಸೀತಾರಾಮನ್

Last Updated 1 ಫೆಬ್ರುವರಿ 2021, 10:58 IST
ಅಕ್ಷರ ಗಾತ್ರ

ನವದೆಹಲಿ: 2021–22ನೇ ಹಣಕಾಸು ವರ್ಷದ ಕೇಂದ್ರ ಬಜೆಟ್ ಸೋಮವಾರ ಮಂಡಿಸಿರುವ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್, ಮೂಲಸೌಕರ್ಯ ಹಾಗೂ ಆರೋಗ್ಯ ಕ್ಷೇತ್ರಕ್ಕೆ ಉತ್ತೇಜನ ನೀಡಲು ಹೆಚ್ಚಿನ ಆದ್ಯತೆ ನೀಡಲಾಗಿದೆ ಎಂದು ತಿಳಿಸಿದರು.

ಸಂಸತ್ತಿನಲ್ಲಿ ಬಜೆಟ್ ಮಂಡಿಸಿದ ಬಳಿಕ ಸುದ್ದಿಗೋಷ್ಠಿಯಲ್ಲಿ ಈ ಕುರಿತು ಪ್ರಶ್ನೆಗಳಿಗೆ ಉತ್ತರಿಸಿದ ನಿರ್ಮಲಾ ಸೀತಾರಾಮನ್, ನಾವೆಲ್ಲರೂ ಆರ್ಥಿಕತೆಗೆ ಉತ್ತೇಜನ ನೀಡಲು ಬಯಸಿದ ಈ ಸಂದರ್ಭದಲ್ಲಿ ಬಜೆಟ್ ಮಂಡನೆಯಾಗಿದೆ. ಮೂಲಸೌಕರ್ಯ ವೃದ್ಧಿ ಮೇಲೆ ಹೆಚ್ಚಿನ ಆದ್ಯತೆ ಕೊಡಲಾಗಿದೆ ಎಂದು ತಿಳಿಸಿದರು.

ಕೇಂದ್ರ ಬಜೆಟ್ 2021 ಲೈವ್ ಅಪ್‌ಡೇಟ್‌ಗಾಗಿ ಇಲ್ಲಿ ಕ್ಲಿಕ್ಕಿಸಿ

ಕೇಂದ್ರ ಬಜೆಟ್ ಪ್ರಮುಖಾಂಶಗಳ ಮೇಲೆ ಮೆಲುಕು ಹಾಕಿದ ವಿತ್ತ ಸಚಿವೆ, ನಾವು ರಸ್ತೆ, ವಿದ್ಯುತ್ ಉತ್ಪಾದನೆ, ಸೇತುವೆ, ಬಂದರು ನಿರ್ಮಾಣ ಸೇರಿದಂತೆ ಇನ್ನಿತರ ಪ್ರದೇಶಗಳಲ್ಲಿ ವ್ಯಾಪಿಸಿರುವ ಮೂಲಸೌಕರ್ಯಗಳ ಮೇಲೆ ಹೆಚ್ಚು ಅನುದಾನ ನೀಡಿದ್ದೇವೆ ಎಂದು ತಿಳಿಸಿದರು.

ಎರಡನೇಯದಾಗಿ ನಾವು ಆರೋಗ್ಯ ಕ್ಷೇತ್ರಕ್ಕೆ ಹೆಚ್ಚಿನ ಒತ್ತು ಕೊಟ್ಟಿದ್ದೇವೆ. ಕಳೆದ ವರ್ಷ ನಾವು ಎದುರಿಸಿದ ಸಮಸ್ಯೆಯಿಂದ ಈ ಕ್ಷೇತ್ರದಲ್ಲಿ ಆಗಾಧ ಸಾಮರ್ಥ್ಯವಿದೆ ಎಂಬುದನ್ನು ಮನಗಂಡಿದ್ದೇವೆ ಎಂದು ಹೇಳಿದರು.

ಕೇಂದ್ರ ಬಜೆಟ್ 2021 ವಿಶೇಷ ಪುಟಕ್ಕಾಗಿ ಇಲ್ಲಿ ಕ್ಲಿಕ್ಕಿಸಿ

ಅದೇ ಹೊತ್ತಿಗೆ ಕೃಷಿ ಮೂಲಸೌಕರ್ಯ ಸೆಸ್‌ನ ಹೆಚ್ಚಳದ ಹೊರತಾಗಿಯೂ ಜನ ಸಾಮಾನ್ಯರ ಜೇಬಿಗೆ ಕತ್ತರಿ ಬೀಳುವುದಿಲ್ಲ. ಅಲ್ಲದೆ ಪೆಟ್ರೋಲ್-ಡೀಸೆಲ್‌ಗಾಗಿ ಗ್ರಾಹಕರು ಹೆಚ್ಚುವರಿ ಹಣವನ್ನು ಖರ್ಚು ಮಾಡುವ ಅಗತ್ಯವಿಲ್ಲ ಎಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಸ್ಪಷ್ಟಪಡಿಸಿದರು.

ಸರ್ಕಾರದ ಖರ್ಚು ಹಾಗೂ ಆದಾಯದ ಲೇವಾದೇವಿ ಈಗ ಹೆಚ್ಚು ಪಾರದರ್ಶಕವಾಗಿದೆ ಎಂದವರು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT