Union Budget 2021: ಆದಾಯ ತೆರಿಗೆ ಮಿತಿ ಯಥಾಸ್ಥಿತಿ

ನವದೆಹಲಿ: ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿರುವ 2020–21ನೇ ಸಾಲಿನ ಬಜೆಟ್ನಲ್ಲಿ, ಆದಾಯ ತೆರಿಗೆ ಮಿತಿಯಲ್ಲಿ ಯಥಾಸ್ಥಿತಿ ಕಾಯ್ದುಕೊಳ್ಳಲಾಗಿದೆ. ಈ ಸಲದ ಬಜೆಟ್ನಲ್ಲಿ ಆದಾಯ ತೆರಿಗೆಯಲ್ಲಿ ವಿನಾಯಿತಿ ನೀಡಲಾಗುತ್ತದೆ ಎಂಬ ಮಧ್ಯಮ ವರ್ಗದ ತೆರಿಗೆದಾರರ ನಿರೀಕ್ಷೆ ಹುಸಿಯಾಗಿದೆ.
ಕಳೆದ ಹಣಕಾಸು ವರ್ಷದ ಆದಾಯ ತೆರಿಗೆ ಮಿತಿ ಪ್ರಕಾರ, ವರ್ಷಕ್ಕೆ ₹ 5 ಲಕ್ಷದವರೆಗಿನ ಆದಾಯಕ್ಕೆ ತೆರಿಗೆ ವಿನಾಯಿತಿ ಇದೆ.
75 ವರ್ಷ ಹಾಗೂ ಮೇಲ್ಪಟ್ಟ ಹಿರಿಯ ನಾಗರಿಕರು ಪಿಂಚಣಿ ಖಾತೆ ಮತ್ತು ಎಫ್ಡಿಯನ್ನು ಒಂದೇ ಬ್ಯಾಂಕ್ ಶಾಖೆಯಲ್ಲಿ ಹೊಂದಿರುವವರು ಏಪ್ರಿಲ್ 1 ರಿಂದ ಐಟಿ ರಿಟರ್ನ್ ಸಲ್ಲಿಸುವ ಅವಶ್ಯಕತೆ ಇಲ್ಲ. ಬ್ಯಾಂಕುಗಳೇ ಸಂಬಂಧಿಸಿದ ತೆರಿಗೆಯನ್ನು ಕಡಿತ ಮಾಡಲಿವೆ ಎಂದು ಬಜೆಟ್ನಲ್ಲಿ ಘೋಷಿಸಲಾಗಿದೆ.
‘ದೇಶ ಈ ವರ್ಷ 75ನೇ ಸ್ವಾತಂತ್ರ್ಯೋತ್ಸವದ ಸಂಭ್ರಮದಲ್ಲಿದೆ. ಹಿರಿಯರು ದೇಶ ಕಟ್ಟುವ ಕಾರ್ಯಕ್ಕೆ ಮಹತ್ತರ ಕೊಡುಗೆ ನೀಡಿದ್ದಾರೆ. ಹೀಗಾಗಿ 75 ವರ್ಷದ ಹಾಗೂ ಮೇಲ್ಪಟ್ಟ ಹಿರಿಯ ನಾಗರಿಕರ ಮೇಲಿನ ಹೊರೆಯನ್ನು ಕಡಿಮೆ ಮಾಡುವ ಸಲುವಾಗಿ ಈ ವಿನಾಯಿತಿ ಘೋಷಿಸಲಾಗಿದೆ’ ಎಂದು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದರು.
ಇವುಗಳನ್ನೂ ಓದಿ...
ಬಜೆಟ್ ಮಂಡಿಸಿದ್ದು ನಿರ್ಮಲಾ; ಟ್ರೆಂಡ್ ಆಗಿದ್ದು ರಾಹುಲ್!
Union Budget 2021| ಬಜೆಟ್ನಲ್ಲಿ ಏರಿದ್ದೇನು? ಇಳಿದಿದ್ದೇನು? ಇಲ್ಲಿದೆ ಪಟ್ಟಿ
Union Budget 2021 Live Updates| ಕೇಂದ್ರ ಬಜೆಟ್ನ ಸಂಪೂರ್ಣ ಮಾಹಿತಿ
ಸ್ವಾವಲಂಬಿ ಭಾರತ ನಿರ್ಮಾಣ ದೃಷ್ಟಿಕೋನದ ಬಜೆಟ್: ಪ್ರಧಾನಿ ಮೋದಿ ಅಭಿಮತ
Union Budget 2021 | ಕೇಂದ್ರದಿಂದ ನಿರಾಶಾದಾಯಕ ಬಜೆಟ್: ಕಾಂಗ್ರೆಸ್ ಟೀಕೆ
Union Budget 2021 | ಸ್ವಾವಲಂಬಿ ಭಾರತಕ್ಕೆ ಪೂರಕ ಬಜೆಟ್: ಅಮಿತ್ ಶಾ
Budget 2021: ದೇಶಾದ್ಯಂತ ಒಂದೇ ಪಡಿತರ ಕಾರ್ಡ್ ಯೋಜನೆ ಶೀಘ್ರದಲ್ಲೇ ಜಾರಿ
Budget 2021: ದೇಶದ ವಿವಿಧೆಡೆ 7 ಜವಳಿ ಪಾರ್ಕ್ ಸ್ಥಾಪನೆ
ಬಜೆಟ್ 2021: ಯಾವುದರ ದರ ಏರಿತು, ಯಾವುದಕ್ಕೆ ಇಳಿಯಿತು?
Budget 2021: ನಗರ ಸಾರ್ವಜನಿಕ ಸಾರಿಗೆ ವ್ಯವಸ್ಥೆ ಉನ್ನತೀಕರಣ, ₹ 18 ಸಾವಿರ ಕೋಟಿ
Union Budget 2021: ಬೆಂಗಳೂರು ಮೆಟ್ರೋ ಯೋಜನೆಗೆ ₹14,788 ಕೋಟಿ ಘೋಷಣೆ
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.