Budget 2021: ದೇಶದ ಮೊದಲ ಡಿಜಿಟಲ್ ಜನಗಣತಿಗೆ ₹3,768 ಕೋಟಿ

ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು 2021-22ನೇ ಆರ್ಥಿಕ ಸಾಲಿನ ಕೇಂದ್ರ ಬಜೆಟ್ ಅನ್ನು ಸಂಸತ್ತಿನಲ್ಲಿ ಮಂಡಿಸುತ್ತಿದ್ದಾರೆ.
ಈ ಸಂದರ್ಭದಲ್ಲಿ ದೇಶದ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿಯನ್ನು ಘೋಷಣೆ ಮಾಡಿದ್ದರು.
ಕೇಂದ್ರ ಬಜೆಟ್ 2021 ಲೈವ್ ಅಪ್ಡೇಟ್ಗಾಗಿ ಇಲ್ಲಿ ಕ್ಲಿಕ್ಕಿಸಿ
ಅಷ್ಟೇ ಅಲ್ಲದೆ ಡಿಜಿಟಲ್ ಜನಗಣತಿಗೆ ₹3,768 ಕೋಟಿ ಮೀಸಲಿಡುವುದಾಗಿ ತಿಳಿಸಿದರು.
The forthcoming census would be the first digital census in the history of India. For this monumental task, I have allocated 3,768 crores in this year 2021-22: FM Nirmala Sitharaman. pic.twitter.com/o9lcLxs3XE
— ANI (@ANI) February 1, 2021
ಸಂಸತ್ತಿನಲ್ಲಿ ಬಜೆಟ್ ಭಾಷಣದಲ್ಲಿ ಪ್ರತಿಕ್ರಿಯಿಸಿದ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್, ಭಾರತದ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ ನಡೆಯಲಿದೆ. ಈ ಐತಿಹಾಸಿಕ ಕಾರ್ಯಕ್ಕಾಗಿ 3,768 ಕೋಟಿ ರೂ.ಗಳನ್ನು ಮೀಸಲಿಡುತ್ತೇನೆ ಎಂದು ತಿಳಿಸಿದರು.
ಕೇಂದ್ರ ಬಜೆಟ್ 2021 ವಿಶೇಷ ಪುಟಕ್ಕಾಗಿ ಇಲ್ಲಿ ಕ್ಲಿಕ್ಕಿಸಿ
ಭಾರತ ಪ್ರಜಾಪ್ರಭುತ್ವದಲ್ಲಿ ಇದೇ ಮೊದಲ ಬಾರಿಗೆ ಕಾಗದರಹಿತ ಡಿಜಿಟಲ್ ಬಜೆಟ್ ಅನ್ನು ನಿರ್ಮಲಾ ಸೀತಾರಾಮನ್ ಮಂಡಿಸಿದರು.
ಕೋವಿಡ್-19 ನಿಮಯಗಳು ಜಾರಿಯಲ್ಲಿರುವುದರಿಂದ ಬಜೆಟ್ ಪ್ರತಿಗಳನ್ನು ಮುದ್ರಿಸಲಾಗುತ್ತಿಲ್ಲ. ನಿರ್ಮಲಾ ಸೀತಾರಾಮನ್ ಬಜೆಟ್ ಮಂಡನೆಯ ಬಳಿಕ ಸಾಫ್ಟ್ ಕಾಪಿಗಳನ್ನು ಸಂಸದರಿಗೆ ಹಂಚಲಾಗುವುದು. ಸಾರ್ವಜನಿಕರು ಆ್ಯಪ್ ಮೂಲಕವೂ ಬಜೆಟ್ ಪ್ರತಿಗಳನ್ನು ಡೌನ್‌ಲೋಡ್ ಮಾಡಬಹುದಾಗಿದೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.