ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Union Budget 2022: ಡಿಜಿಟಲ್ ಬಜೆಟ್‌ನಲ್ಲಿ ಡಿಜಿಟಲ್‌ಗೆ ಒತ್ತು – ಏನೇನು ಘೋಷಣೆ?

Last Updated 1 ಫೆಬ್ರುವರಿ 2022, 9:20 IST
ಅಕ್ಷರ ಗಾತ್ರ

ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಈ ಬಾರಿಯೂ ಕಾಗದರಹಿತ, ಡಿಜಿಟಲ್ ಬಜೆಟ್ ಮಂಡಿಸಿದ್ದಾರೆ. ಬಜೆಟ್‌ನಲ್ಲಿ ಡಿಜಿಟಲ್ ಕ್ಷೇತ್ರಕ್ಕೆ ಹೆಚ್ಚು ಒತ್ತು ನೀಡಲಾಗಿದೆ.

ಡಿಜಿಟಲ್ ಬ್ಯಾಂಕಿಂಗ್, ರೂಪಾಯಿ, ವಿಶ್ವವಿದ್ಯಾಲಯ, ಅಂಚೆಕಚೇರಿಗಳಿಗೆ ಡಿಜಿಟಲ್ ಸೌಕರ್ಯ, ಸ್ಥಳೀಯ ಭಾಷೆಗಳಲ್ಲೂ ಡಿಜಿಟಲ್ ಕಲಿಕೆ ಸೇರಿದಂತೆ ಹಲವು ಯೋಜನೆಗಳನ್ನು ಘೋಷಿಸಲಾಗಿದೆ.

ಸ್ವಾತಂತ್ರ್ಯೋತ್ಸವದ 75ನೇ ವರ್ಷಾಚರಣೆ ಪ್ರಯುಕ್ತ ದೇಶಾದ್ಯಂತ 75 ಜಿಲ್ಲೆಗಳಲ್ಲಿ 75 ಡಿಜಿಟಲ್ ಬ್ಯಾಂಕಿಂಗ್ ಘಟಕಗಳನ್ನು ಸ್ಥಾಪಿಸಲು ನಿರ್ಧರಿಸಲಾಗಿದೆ. ಡಿಜಿಟಲ್ ಬ್ಯಾಂಕಿಂಗ್ ಗ್ರಾಹಕ ಸ್ನೇಹಿಯಾಗಿ ದೇಶದ ಮೂಲೆ ಮೂಲೆಗಳಿಗೆ ಪ್ರಯೋಜನ ನೀಡಲಿದೆ ಎಂದು ಬಜೆಟ್‌ನಲ್ಲಿ ಉಲ್ಲೇಖಿಸಲಾಗಿದೆ.

ಬ್ಲಾಕ್‌ಚೈನ್ ಮತ್ತು ಇತರ ತಂತ್ರಜ್ಞಾನಗಳನ್ನು ಬಳಸಿಕೊಂಡು 2022-23ರಲ್ಲಿ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ (ಆರ್‌ಬಿಐ) ಡಿಜಿಟಲ್ ರೂಪಾಯಿಯನ್ನು ಚಾಲ್ತಿಗೆ ತರಲಿದೆ. ಇದರಿಂದ ಆರ್ಥಿಕತೆಗೆ ದೊಡ್ಡಮಟ್ಟಿನ ಉತ್ತೇಜನ ದೊರೆಯಲಿದೆ ಎಂದು ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.

ಕೋವಿಡ್ ಸಾಂಕ್ರಾಮಿಕದಿಂದಾಗಿ ಕಳೆದ ಎರಡು ವರ್ಷಗಳಿಂದ ಗ್ರಾಮೀಣ ಪ್ರದೇಶಗಳ ಮಕ್ಕಳ ಶಿಕ್ಷಣಕ್ಕೆ ತೊಡಕಾಗಿದೆ. ಹೀಗಾಗಿ ‘ಪ್ರಧಾನಮಂತ್ರಿ ಇ–ವಿದ್ಯಾ’ ಯೋಜನೆ ಅಡಿಯಲ್ಲಿ ‘ಒನ್ ಕ್ಲಾಸ್ ಒನ್ ಟಿವಿ’ ಆರಂಭಿಸಲಾಗುವುದು. ‘ಒನ್ ಕ್ಲಾಸ್ ಒನ್ ಟಿವಿ ಚಾನೆಲ್’ ಯೋಜನೆ ಅಡಿಯಲ್ಲಿ ಟಿವಿ ಚಾನೆಲ್‌ಗಳ ಸಂಖ್ಯೆಯನ್ನು 12ರಿಂದ 200ಕ್ಕೆ ಹೆಚ್ಚಿಸಲಾಗುವುದು. ಇದು 1ರಿಂದ 12ನೇ ತರಗತಿವರೆಗಿನ ವಿದ್ಯಾರ್ಥಿಗಳಿಗೆ ಪ್ರಾದೇಶಿಕ ಭಾಷೆಗಳಲ್ಲಿ ಶಿಕ್ಷಣ ನೀಡಲು ರಾಜ್ಯಗಳಿಗೆ ನೆರವಾಗಲಿದೆ ಎಂದು ಬಜೆಟ್‌ನಲ್ಲಿ ತಿಳಿಸಲಾಗಿದೆ.

ಡಿಜಿಟಲ್ ವಿಶ್ವವಿದ್ಯಾಲಯವನ್ನು ಸ್ಥಾಪಿಸುವ ಬಗ್ಗೆಯೂ ಈ ಬಾರಿಯ ಬಜೆಟ್‌ನಲ್ಲಿ ಯೋಜನೆಯೊಂದನ್ನು ಘೋಷಿಸಲಾಗಿದೆ. ಡಿಜಿಟಲ್ ವಿಶ್ವವಿದ್ಯಾನಿಲಯವು ದೇಶಾದ್ಯಂತ ವಿದ್ಯಾರ್ಥಿಗಳಿಗೆ ವಿಶ್ವ ದರ್ಜೆಯ ಶಿಕ್ಷಣಕ್ಕೆ ಪ್ರವೇಶವನ್ನು ಒದಗಿಸಲಿದೆ ಎಂದು ಸರ್ಕಾರ ಹೇಳಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT