ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆದಾಯ ತೆರಿಗೆ ಮಿತಿಯಲ್ಲಿ ಯಥಾಸ್ಥಿತಿ, ತೆರಿಗೆ ನೀತಿಯಲ್ಲಿ ಏನೇನು ಬದಲಾವಣೆ?

Last Updated 1 ಫೆಬ್ರುವರಿ 2022, 8:50 IST
ಅಕ್ಷರ ಗಾತ್ರ

ನವದೆಹಲಿ: ಆದಾಯ ತೆರಿಗೆ ಮಿತಿಯಲ್ಲಿ 2022-23ನೇ ಸಾಲಿನ ಬಜೆಟ್‌ನಲ್ಲಿ ಯಾವುದೇ ಬದಲಾವಣೆ ಮಾಡಲಾಗಿಲ್ಲ. ಆದರೆ, ಐಟಿ ರಿಟರ್ನ್ಸ್ ಸಲ್ಲಿಕೆ ವೇಳೆ ಆಗಿರುವ ಲೋಪವನ್ನು ಸರಿಪಡಿಸಿ, ನವೀಕೃತ ರಿಟರ್ನ್ಸ್ ಸಲ್ಲಿಸಲು ಮೌಲ್ಯಮಾಪನ ವರ್ಷದಿಂದ 2 ವರ್ಷಗಳವರೆಗೆ ಕಾಲಾವಕಾಶ ನೀಡಲಾಗಿದೆ.

ಕೇಂದ್ರ ಮತ್ತು ರಾಜ್ಯ ಸರ್ಕಾರಿ ನೌಕರರ ತೆರಿಗೆ ಕಡಿತದ ಮಿತಿಯನ್ನು ಶೇ 10ರಿಂದ ಶೇ 14ಕ್ಕೆ ಹೆಚ್ಚಿಸುವ ನಿರ್ಧಾರ ಕೈಗೊಳ್ಳಲಾಗಿದೆ. ಈ ಮೂಲಕ ರಾಜ್ಯ ಸರ್ಕಾರಿ ನೌಕರರ ಸಾಮಾಜಿಕ ಭದ್ರತಾ ಪ್ರಯೋಜನಗಳನ್ನು ಕೇಂದ್ರ ಸರ್ಕಾರಿ ನೌಕರರಿಗೆ ಸರಿಸಮಾನವಾಗಿ ರೂಪಿಸಲು ಸಹಾಯವಾಗಲಿದೆ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.

ಇತರ ಬದಲಾವಣೆಗಳು...

* ವರ್ಚುವಲ್, ಡಿಜಿಟಲ್ ಸ್ವತ್ತುಗಳಿಗೆ ತೆರಿಗೆ

* ವರ್ಚುವಲ್‌ ಡಿಜಿಟಲ್‌ ಸ್ವತ್ತು, ಕ್ರಿಪ್ಟೊಕರೆನ್ಸಿಗಳ ಮೂಲಕ ಗಳಿಸುವ ಆದಾಯದ ಮೇಲೆ ಶೇ 30ರಷ್ಟು ತೆರಿಗೆಯನ್ನು ವಿಧಿಸಲಾಗುವುದು.

* ಸ್ವಾಧೀನದ ವೆಚ್ಚವನ್ನು ಹೊರತುಪಡಿಸಿ ಇತರ ಯಾವುದೇ ಕಡಿತಕ್ಕೆ ಅನುಮತಿ ಇಲ್ಲ

* ವರ್ಚುವಲ್ ಸ್ವತ್ತುಗಳ ಉಡುಗೊರೆ ಸ್ವೀಕರಿಸುವವರಿಗೆ ತೆರಿಗೆ

ಬಜೆಟ್ ಕುರಿತ ಸಮಗ್ರ ಅಪ್‌ಡೇಟ್‌ಗೆ ಕ್ಲಿಕ್ ಮಾಡಿ:ಬಜೆಟ್ 2022

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT