ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Budget 2022: ಆರ್ಥಿಕ ಬೆಳವಣಿಗೆಗಾಗಿ ಹೂಡಿಕೆ ಹೆಚ್ಚಳಕ್ಕೆ ಉತ್ತೇಜನ ಸಾಧ್ಯತೆ

Last Updated 1 ಫೆಬ್ರುವರಿ 2022, 3:09 IST
ಅಕ್ಷರ ಗಾತ್ರ

ನವದೆಹಲಿ: ಆರ್ಥಿಕ ಬೆಳವಣಿಗೆಗಾಗಿ ಈ ಬಾರಿಯ ಬಜೆಟ್‌ನಲ್ಲಿ ಮೂಲಸೌಕರ್ಯ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಹೂಡಿಕೆ ಹೆಚ್ಚಿಸುವ ಸಾಧ್ಯತೆ ಇದೆ ಎನ್ನಲಾಗಿದೆ.

ಕೋವಿಡ್ ಸಾಂಕ್ರಾಮಿಕ ಹಾಗೂ ಹಣದುಬ್ಬರ ಒತ್ತಡವನ್ನು ನಿಭಾಯಿಸುವ ಸಲುವಾಗಿ ವೆಚ್ಚ ಹೆಚ್ಚಿಸಲು ಒತ್ತು ನೀಡುವ ಸಾಧ್ಯತೆ ಇದೆ. ರಸ್ತೆ, ರೈಲು ಮೂಲಸೌಕರ್ಯ ಅಭಿವೃದ್ಧಿಗೆ ಹೂಡಿಕೆ ಹೆಚ್ಚಳ, ಸಾಂಕ್ರಾಮಿಕದಿಂದಾಗಿ ಸಂಕಷ್ಟಕ್ಕೀಡಾಗಿರುವ ಜನರಿಗೆ ಹೆಚ್ಚು ಸಬ್ಸಿಡಿಗಳನ್ನು ನೀಡುವ ಮೂಲಕ ನೆರವಾಗುವ ಸಾಧ್ಯತೆ ಇದೆ ಎಂದು ಮೂಲಗಳು ಹೇಳಿವೆ.

ಬಜೆಟ್ ಕುರಿತ ಸಮಗ್ರ ಅಪ್‌ಡೇಟ್‌ಗೆ ಕ್ಲಿಕ್ ಮಾಡಿ:ಬಜೆಟ್ 2022

ಈ ಮಧ್ಯೆ, ಕಚ್ಚಾ ತೈಲ ಬೆಲೆ ಏರಿಕೆಯೂ ಸೇರಿದಂತೆ ಜಾಗತಿಕ ಹಣದುಬ್ಬರವು ದೇಶದ ಆರ್ಥಿಕ ಬೆಳವಣಿಗೆಗೆ ಹೊಡೆತ ನೀಡಬಹುದು ಎಂದು ಸರ್ಕಾರದ ವರದಿಯೂ ಅಂದಾಜಿಸಿದೆ. ಏಪ್ರಿಲ್‌ನಲ್ಲಿ ಆರಂಭವಾಗಲಿರುವ ಮುಂದಿನ ಹಣಕಾಸು ವರ್ಷದಲ್ಲಿ ದೇಶವು ಶೇ 8ರಿಂದ 8.5 ರಷ್ಟು ಆರ್ಥಿಕ ಬೆಳವಣಿಗೆ ಸಾಧಿಸಬಹುದು ಎಂದು ಸೋಮವಾರ ಮಂಡನೆಯಾದ ಆರ್ಥಿಕ ಸಮೀಕ್ಷೆಯಲ್ಲಿ ಉಲ್ಲೇಖಿಸಲಾಗಿತ್ತು.

ಪ್ರಸಕ್ತ ಹಣಕಾಸು ವರ್ಷದಲ್ಲಿ ಶೇ 9.2 ರಷ್ಟು ಆರ್ಥಿಕ ಬೆಳವಣಿಗೆ ಅಂದಾಜಿಸಲಾಗಿತ್ತು. ಆದರೆ ಮುಂದಿನ ವರ್ಷದ ಆರ್ಥಿಕ ಬೆಳವಣಿಗೆ ಪ್ರಮಾಣ ಇದಕ್ಕಿಂತ ಕಡಿಮೆಯಾಗಿರಲಿದೆ. ಹಿಂದಿನ ಹಣಕಾಸು ವರ್ಷದಲ್ಲಿ ಶೇ 6.6ರ ಬೆಳವಣಿಗೆ ನಿರೀಕ್ಷಿಸಲಾಗಿತ್ತು.

ಉತ್ತರ ಪ್ರದೇಶ ಸೇರಿದಂತೆ ಪಂಚ ರಾಜ್ಯಗಳ ಚುನಾವಣೆ ಸಂದರ್ಭದಲ್ಲೇ ಬಜೆಟ್ ಮಂಡನೆಯಾಗುತ್ತಿರುವುದು ಮತ್ತಷ್ಟು ಕುತೂಹಲ ಮೂಡಿಸಿದೆ. ನಿರ್ಮಲಾ ಸೀತಾರಾಮನ್ ಅವರು ಆಹಾರ, ರಸಗೊಬ್ಬರ ಸಬ್ಸಿಡಿ ಹೆಚ್ಚಿಸುವ ಹಾಗೂ ಗ್ರಾಮೀಣ ಪ್ರದೇಶಗಳಿಗೆ ಹೆಚ್ಚಿನ ಕೊಡುಗೆ ಘೋಷಿಸುವ ಸಾಧ್ಯತೆ ಇದೆ ಎಂದು ಆರ್ಥಿಕ ತಜ್ಞರು ಅಭಿಪ್ರಾಯಪಟ್ಟಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT