ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Union budget 2022: ಬೇಕಿದೆ ಭತ್ಯೆಗಳ ಬೂಸ್ಟರ್ ಡೋಸ್ – ಕಿರಣ್ ಮಜುಂದಾರ್ ಶಾ

Last Updated 1 ಫೆಬ್ರುವರಿ 2022, 4:13 IST
ಅಕ್ಷರ ಗಾತ್ರ

ನವದೆಹಲಿ: ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು 11 ಗಂಟೆಗೆ 2022-23 ನೇ ಸಾಲಿನ ಬಜೆಟ್ ಮಂಡನೆ ಮಾಡಲಿದ್ದಾರೆ. ಕೋವಿಡ್ ಸಾಂಕ್ರಾಮಿಕದಿಂದ ಹಿನ್ನಡೆ ಅನುಭವಿಸುತ್ತಿರುವ ಆರ್ಥಿಕತೆಗೆ ಉತ್ತೇಜನ ನೀಡಲು ಅವರು ಹಲವು ಕ್ರಮಗಳನ್ನು ಬಜೆಟ್‌ನಲ್ಲಿ ಘೋಷಿಸುವ ನಿರೀಕ್ಷೆ ಇದೆ.

ಕೋವಿಡ್ ಪರಿಣಾಮದಿಂದ ಹೊರಬರಲು ಬೇಕಿದೆ ಭತ್ಯೆಗಳ ಬೂಸ್ಟರ್ ಡೋಸ್ ಎಂದು ಬಯೋಕಾನ್ ಅಧ್ಯಕ್ಷೆ ಕಿರಣ್ ಮಜುಂದಾರ್ ಶಾ ಹೇಳಿದ್ದಾರೆ.

ಬಜೆಟ್ ಕುರಿತ ಸಮಗ್ರ ಅಪ್‌ಡೇಟ್‌ಗೆ ಕ್ಲಿಕ್ ಮಾಡಿ:ಬಜೆಟ್ 2022

ಬಜೆಟ್ ಕುರಿತ ನಿರೀಕ್ಷೆಗಳನ್ನು ಟ್ವೀಟ್ ಮಾಡಿರುವ ಅವರು, ‘ಕೋವಿಡ್ ಸಾಂಕ್ರಾಮಿಕವು ನಮ್ಮ ಆರ್ಥಿಕತೆ ಮೇಲೆ ಬೀರಿರುವ ಪರಿಣಾಮದಿಂದ ಹೊರಬರಲು ಹಣಕಾಸು ಸಚಿವರು ಭತ್ಯೆಗಳ ಬೂಸ್ಟರ್ ಡೋಸ್ ನೀಡಬಹುದೆಂಬ ನಿರೀಕ್ಷೆಯಲ್ಲಿದ್ದೇನೆ. ನಾವು ಖರೀದಿಯನ್ನು ಉತ್ತೇಜಿಸಬೇಕಿದೆ. ಪ್ರಯಾಣ, ಪ್ರವಾಸೋದ್ಯಮ ಮತ್ತು ಹೋಟೆಲ್‌ ಉದ್ಯಮ ಕ್ಷೇತ್ರವನ್ನೂ ಪುನರುಜ್ಜೀವನಗೊಳಿಸಬೇಕಾಗಿದೆ. ಹಣದುಬ್ಬರ ಎದುರಿಸಲು ಜನಸಾಮಾನ್ಯರಿಗೆ ಹೆಚ್ಚು ಆದಾಯದ ಅಗತ್ಯವಿದೆ’ ಎಂದು ಉಲ್ಲೇಖಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT