Budget 2023| ಏಕಲವ್ಯ ವಸತಿ ಶಾಲೆಗಳಿಗೆ 38,800 ಶಿಕ್ಷಕರು, ಸಿಬ್ಬಂದಿ ನೇಮಕ

ನವದೆಹಲಿ: ಏಕಲವ್ಯ ಮಾದರಿ ವಸತಿ ಶಾಲೆಗಳಿಗೆ 38,800 ಶಿಕ್ಷಕಕರು, ಸಿಬ್ಬಂದಿಯನ್ನು ನೇಮಿಸುವುದಾಗಿ ಕೇಂದ್ರ ಸರ್ಕಾರ ಘೋಷಿಸಿದೆ.
2023-24ರ ಕೇಂದ್ರ ಬಜೆಟ್ ಮಂಡನೆ ವೇಳೆ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಈ ಘೋಷಣೆ ಮಾಡಿದ್ದಾರೆ.
'3.5 ಲಕ್ಷ ಬುಡಕಟ್ಟು ವಿದ್ಯಾರ್ಥಿಗಳಿಗೆ ಸೇವೆ ಸಲ್ಲಿಸುತ್ತಿರುವ ದೇಶದ 740 ಏಕಲವ್ಯ ಮಾದರಿ ವಸತಿ ಶಾಲೆಗಳಿಗೆ ಕೇಂದ್ರ ಸರ್ಕಾರವು ಮುಂದಿನ ಮೂರು ವರ್ಷಗಳಲ್ಲಿ 38,800 ಶಿಕ್ಷಕರು ಮತ್ತು ಸಹಾಯಕ ಸಿಬ್ಬಂದಿಯನ್ನು ನೇಮಿಸಿಕೊಳ್ಳಲಿದೆ’ ಎಂದು ಅವರು ಹೇಳಿದರು.
ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ಕ್ರಿಯಾ ಯೋಜನೆಯಡಿ ಮುಂದಿನ ಮೂರು ವರ್ಷಗಳಲ್ಲಿ ‘ದುರ್ಬಲ ಬುಡಕಟ್ಟು ಗುಂಪುಗಳ ಅಭಿವೃದ್ಧಿ ಮಿಷನ್’ ಅನ್ನು ಕಾರ್ಯಗತಗೊಳಿಸಲು ₹15,000 ಕೋಟಿ ನೀಡಲಾಗುವುದು ಎಂದೂ ಇದೇ ವೇಳೆ ನಿರ್ಮಲಾ ತಿಳಿಸಿದರು.
ಇವುಗಳನ್ನೂ ಓದಿ
Union Budget 2023: ರಕ್ಷಣಾ ವಲಯಕ್ಕೆ ₹5.94 ಲಕ್ಷ ಕೋಟಿ ಅನುದಾನ
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.