ಗುರುವಾರ , ಮಾರ್ಚ್ 23, 2023
30 °C

Union Budget 2023: ಯಾವುದು ದುಬಾರಿ? ಯಾವುದು ಅಗ್ಗ? 

ಪ್ರಜಾವಾಣಿ ವೆಬ್ ಡೆಸ್ಕ್ Updated:

ಅಕ್ಷರ ಗಾತ್ರ : | |

ನವದೆಹಲಿ: ನರೇಂದ್ರ ಮೋದಿ ಸರ್ಕಾರದ ಎರಡನೇ ಅವಧಿಯ ಕೊನೆಯ ಪೂರ್ಣಾವಧಿ ಬಜೆಟ್ ಅನ್ನು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಇಂದು (ಬುಧವಾರ) ಮಂಡಿಸಿದರು. 

ಎನ್‌ಡಿಎ ಸರ್ಕಾರದ ಎರಡನೇ ಅವಧಿಯ ಪೂರ್ಣ ಪ್ರಮಾಣದ ಬಜೆಟ್‌ ಇದಾಗಿದೆ. ಈ ಬಾರಿಯ ಬಜೆಟ್‌ನಲ್ಲಿ ಜನಸಾಮಾನ್ಯರು ಬಳಸುವ ಕೆಲವು ಸರಕುಗಳ ಮೇಲಿನ ತೆರಿಗೆಯನ್ನು ಹೆಚ್ಚಿಸಿದ್ದರೆ, ಇನ್ನು ಹಲವು ಸರಕುಗಳ ಮೇಲಿನ ಸುಂಕವನ್ನು ಕಡಿಮೆ ಮಾಡಲಾಗಿದೆ. 

ಬಜೆಟ್ 2023: ನಿಮ್ಮ ಆದಾಯ ತೆರಿಗೆ ಲೆಕ್ಕಾಚಾರ ಹಾಕಲು ಇಲ್ಲಿ ಕ್ಲಿಕ್ ಮಾಡಿ

ಬೆಲೆ ಏರಿಕೆಯಾದ ಸರಕುಗಳ ವಿವರ: ಸಿಗರೇಟ್, ಎಲೆಕ್ಟ್ರಿಕ್ ಚಿಮಣಿ, ಆಮದು ಮಾಡಿಕೊಂಡ ರಬ್ಬರ್, ಚಿನ್ನ, ಬೆಳ್ಳಿ, ಬ್ರಾಂಡೆಡ್ ಬಟ್ಟೆಗಳು, ಪ್ಲಾಟಿನಮ್, ಎಕ್ಸ್​ರೇ, ಹೆಡ್​ಫೋನ್, ಇಯರ್ ಫೋನ್, ವೈದ್ಯಕೀಯ ಉತ್ಪನ್ನಗಳು ದುಬಾರಿಯಾಗಲಿವೆ.

ಬೆಲೆ ಕಡಿಮೆಯಾದ ಸರಕುಗಳ ವಿವರ: ಮೊಬೈಲ್ ಫೋನ್, ಲ್ಯಾಪ್‌ಟಾಪ್‌, ಸೈಕಲ್, ಎಲ್​ಇಡಿ ಟಿವಿ, ಟಿವಿ ಪ್ಯಾನಲ್, ಆಟೊಮೊಬೈಲ್, ಜವಳಿ, ಎಲೆಕ್ಟ್ರಿಕ್ ವಾಹನ, ಕ್ಯಾಮೆರಾ ಲೆನ್ಸ್, ಜೈವಿಕ ಅನಿಲ ಆಧಾರಿತ ಉತ್ಪನ್ನಗಳು.

ಇವನ್ನೂ ಓದಿ... 

Union Budget 2023 Live | ಕೇಂದ್ರ ಬಜೆಟ್‌ನ ಸಂಪೂರ್ಣ ಮಾಹಿತಿ 

Union Budget 2023 highlights: ಆದಾಯ ತೆರಿಗೆ ವಿನಾಯಿತಿ ಮಿತಿ ಹೆಚ್ಚಳ 

Union Budget 2023: ಯಾವುದು ದುಬಾರಿ? ಯಾವುದು ಅಗ್ಗ?  

Union Budget 2023: ಧೂಮಪಾನಿಗಳ ಜೇಬಿಗೆ ಬಿಸಿ ಮುಟ್ಟಿಸಿದ ‘ಅಮೃತಕಾಲದ ಬಜೆಟ್’

ಜಗತ್ತು ಭಾರತವನ್ನು ಪ್ರಜ್ವಲಿಸುವ ನಕ್ಷತ್ರದಂತೆ ನೋಡುತ್ತಿದೆ: ನಿರ್ಮಲಾ ಸೀತಾರಾಮನ್ 

ಭದ್ರಾ ಮೇಲ್ದಂಡೆ ಯೋಜನೆಗೆ ಅನುದಾನ: ಸಿಎಂ ಬಸವರಾಜ ಬೊಮ್ಮಾಯಿ ಸಂತಸ

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು