ಶುಕ್ರವಾರ, ಮಾರ್ಚ್ 24, 2023
30 °C

‘ಪೊಲ್ಯುಟಿಂಗ್’ ಪದದ ಬದಲು ‘ಪೊಲಿಟಿಕಲ್’ ಎಂದ ನಿರ್ಮಲಾ: ನಗೆಗಡಲಲ್ಲಿ ತೇಲಿದ ಸಂಸತ್

ಪ್ರಜಾವಾಣಿ ವೆಬ್ ಡೆಸ್ಕ್ Updated:

ಅಕ್ಷರ ಗಾತ್ರ : | |

ನವದೆಹಲಿ: ‌2023-24ನೇ ಸಾಲಿನ ಕೇಂದ್ರ ಬಜೆಟ್ ಅನ್ನು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಸಂಸತ್ತಿನಲ್ಲಿ ಬುಧವಾರ ಮಂಡಿಸಿದ್ದಾರೆ. 

ಹಳೇ ಸರ್ಕಾರಿ ವಾಹನಗಳ ಬದಲಾವಣೆಗೆ ಕ್ರಮದ ಬಗ್ಗೆ ಪ್ರಸ್ತಾಪಿಸಿ ಮಾತನಾಡಿದ ಅವರು ಹೆಚ್ಚಿನ ಮಾಲಿನ್ಯ ಉಂಟು ಮಾಡುವ ಹಳೇ ಸರ್ಕಾರಿ ವಾಹನಗಳ ಬದಲಾವಣೆಗೆ ಅಗತ್ಯ ಕ್ರಮ ತೆಗೆದುಕೊಳ್ಳುವುದಾಗಿ ಹೇಳಿದರು.

ರಾಜ್ಯ ಸರ್ಕಾರಗಳ ಸುಪರ್ದಿಯಲ್ಲಿರುವ ಹಳೇ ವಾಹನಗಳು ಮತ್ತು ಆಂಬುಲೆನ್ಸ್​ಗಳ ಬದಲಾವಣೆಗೆ ಕೇಂದ್ರ ಸರ್ಕಾರ ನೆರವು ಒದಗಿಸಲಿದೆ ಎಂದು ತಿಳಿಸಿದರು.

ಇದೇ ವೇಳೆ ಸಚಿವರು ಮಾಲಿನ್ಯ (ಪೊಲ್ಯುಟಿಂಗ್) ಎಂದು ಹೇಳುವ ಬದಲು ರಾಜಕೀಯ (ಪೊಲಿಟಿಕಲ್) ಎಂದು ಹೇಳಿದರು. ಕೂಡಲೇ ಎಚ್ಚೆತ್ತ ಅವರು ಓಹ್ ಕ್ಷಮಿಸಿ ಎಂದು ಮುಗುಳ್ನಕ್ಕರು. ನಿರ್ಮಲಾ ಮಾತಿಗೆ ಇಡೀ ಸಂಸತ್  ಒಂದು ಕ್ಷಣ ನಗೆಗಡಲಲ್ಲಿ ತೇಲಿತು. 

‘ಹಳೇ ಮಾಲಿನ್ಯಕಾರಕಗಳನ್ನು ಬದಲಿಸಬೇಕು, ನಾನು ಹೇಳಿದ್ದು ಸರಿ ಅಲ್ಲವೇ’ ಎಂದು ನಿರ್ಮಲಾ ಪ್ರತಿಪಕ್ಷಗಳಿಗೆ ತಿರುಗೇಟು ನೀಡಿದರು.

ಇವನ್ನೂ ಓದಿ... 

Union Budget 2023 Live | ಕೇಂದ್ರ ಬಜೆಟ್‌ನ ಸಂಪೂರ್ಣ ಮಾಹಿತಿ 

Union Budget 2023 highlights: ಆದಾಯ ತೆರಿಗೆ ವಿನಾಯಿತಿ ಮಿತಿ ಹೆಚ್ಚಳ 

Union Budget 2023: ಯಾವುದು ದುಬಾರಿ? ಯಾವುದು ಅಗ್ಗ?  

Union Budget 2023: ಧೂಮಪಾನಿಗಳ ಜೇಬಿಗೆ ಬಿಸಿ ಮುಟ್ಟಿಸಿದ ‘ಅಮೃತಕಾಲದ ಬಜೆಟ್’

ಜಗತ್ತು ಭಾರತವನ್ನು ಪ್ರಜ್ವಲಿಸುವ ನಕ್ಷತ್ರದಂತೆ ನೋಡುತ್ತಿದೆ: ನಿರ್ಮಲಾ ಸೀತಾರಾಮನ್ 

ಭದ್ರಾ ಮೇಲ್ದಂಡೆ ಯೋಜನೆಗೆ ಅನುದಾನ: ಸಿಎಂ ಬಸವರಾಜ ಬೊಮ್ಮಾಯಿ ಸಂತಸ

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು