ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Union Budget 2023: ದುರ್ಬಲ ಬುಡಕಟ್ಟು ಗುಂಪುಗಳ ಅಭಿವೃದ್ಧಿಗೆ ₹15,000 ಕೋಟಿ

Last Updated 1 ಫೆಬ್ರುವರಿ 2023, 11:28 IST
ಅಕ್ಷರ ಗಾತ್ರ

ನವದೆಹಲಿ: ನಿರ್ದಿಷ್ಟ ದುರ್ಬಲ ಬುಡಕಟ್ಟು ಗುಂಪುಗಳ (ಪಿವಿಟಿಜಿ) ಸಾಮಾಜಿಕ-ಆರ್ಥಿಕ ಪರಿಸ್ಥಿತಿ ಸುಧಾರಣೆಗಾಗಿ ಪ್ರಧಾನ ಮಂತ್ರಿ ಪಿವಿಟಿಜಿ ಅಭಿವೃದ್ಧಿ ಮಿಷನ್ ಪ್ರಾರಂಭಿಸುವುದಾಗಿ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಬುಧವಾರ ಮಂಡಿಸಿರುವ ಕೇಂದ್ರ ಬಜೆಟ್‌ನಲ್ಲಿ ಘೋಷಿಸಿದ್ದಾರೆ.

ಮುಂದಿನ ಮೂರು ವರ್ಷಗಳಲ್ಲಿ ಈ ಯೋಜನೆ ಅನುಷ್ಠಾನಕ್ಕಾಗಿ ಪರಿಶಿಷ್ಟರಿಗಾಗಿ ಅಭಿವೃದ್ಧಿ ಕ್ರಿಯಾ ಯೋಜನೆಯಡಿಯಲ್ಲಿ ₹15,000 ಕೋಟಿ ಮೀಸಲು ಇಡಲಾಗುವುದು.

ಬಜೆಟ್ ಕುರಿತು ಸಮಗ್ರ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ: ಕೇಂದ್ರ ಬಜೆಟ್ 2023

ಈ ಮೂಲಕ ಪಿವಿಟಿಜಿ ವಿಭಾಗದವರಿಗೆ ಸುರಕ್ಷಿತ ವಸತಿ, ಶುದ್ಧ ಕುಡಿಯುವ ನೀರು, ನೈರ್ಮಲ್ಯ, ಶಿಕ್ಷಣ, ಆರೋಗ್ಯ, ಪೋಷಣೆಯಂತಹ ಮೂಲಭೂತ್ವ ಸೌಲಭ್ಯ ಮತ್ತು ರಸ್ತೆ, ದೂರ ಸಂಪರ್ಕ ಮತ್ತು ಸುಸ್ಥಿರ ಜೀವನೋಪಾಯದ ಬೇಡಿಕೆಗಳನ್ನು ಈಡೇರಿಸಲಾಗುವುದು.

ಇನ್ನಷ್ಟು ಸುದ್ದಿಗಳು:





ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT