Union Budget 2023: ಪ್ರವಾಸೋದ್ಯಮ ಉತ್ತೇಜನಕ್ಕೆ ಆ್ಯಪ್ ಅಭಿವೃದ್ಧಿ

ನವದೆಹಲಿ: ಪ್ರವಾಸೋದ್ಯಮಕ್ಕೆ ಉತ್ತೇಜನ ನೀಡುವ ಸಲುವಾಗಿ ವಿವಿಧ ಯೋಜನೆಗಳಿಗೆ ಚಾಲನೆ ನೀಡಲಾಗುತ್ತದೆ. ಇದಕ್ಕಾಗಿ ಆ್ಯಪ್ ಅಭಿವೃದ್ಧಿಪಡಿಸಲಾಗಿದೆ.
ಕನಿಷ್ಠ 50 ಪ್ರವಾಸಿ ತಾಣಗಳಿಗೆ ಸಂಬಂಧಿಸಿದ ಮಾಹಿತಿ ಈ ಆ್ಯಪ್‌ನಲ್ಲಿ ಸಿಗಲಿದೆ. ಈ ತಾಣಗಳನ್ನು ಭೌತಿಕವಾಗಿಯಾಗಲಿ ಅಥವಾ ವರ್ಚುವಲ್ ಮೂಲಕವಾಗಲಿ ಸಂಪರ್ಕಿಸುವ ಅವಕಾಶ ಇರಲಿದೆ. ಜೊತೆಗೆ, ಪ್ರವಾಸಿ ಮಾರ್ಗದರ್ಶಕರು, ಈ ತಾಣಗಳಲ್ಲಿ ಸಿಗುವ ಉತ್ತಮ ಗುಣಮಟ್ಟದ ಆಹಾರ, ಪ್ರವಾಸಿಗರ ಸುರಕ್ಷತೆ ಸೇರಿದಂತೆ ಉತ್ತಮ ಪ್ರವಾಸದ ಅನುಭೂತಿ ಸಿಗುವಂತೆ ಮಾಡುವುದೇ ಈ ಕಾರ್ಯಕ್ರಮದ ಉದ್ದೇಶವಾಗಿದೆ.
ಪ್ರತಿಯೊಂದು ಪ್ರವಾಸಿ ತಾಣವನ್ನು ಕೇಂದ್ರವನ್ನಾಗಿಟ್ಟುಕೊಂಡು, ಅಲ್ಲಿ ಎಲ್ಲ ಸೌಲಭ್ಯಗಳು ಸಿಗುವಂತೆ ಅಭಿವೃದ್ಧಿಪಡಿಸಲಾಗುತ್ತದೆ.
ದೇಶದ ಮಧ್ಯಮ ವರ್ಗದ ಜನರು ಅಂತರರಾಷ್ಟ್ರೀಯ ಪ್ರವಾಸಕ್ಕಿಂತ ದೇಶದಲ್ಲಿಯೇ ಇರುವ ಅದ್ಭುತ ತಾಣಗಳಿಗೆ ಪ್ರವಾಸ ಕೈಗೊಳ್ಳಬೇಕು. ಆ ಮೂಲಕ ದೇಶೀಯ ಪ್ರವಾಸೋದ್ಯಮ ಬೆಳೆಸಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಮನವಿ ಮಾಡಿದ್ದರು.
ಈ ಹಿನ್ನೆಲೆಯಲ್ಲಿ, ಘೋಷಿಸಲಾಗಿರುವ ‘ದೇಖೋ ಅಪ್ನಾ ದೇಶ್’ ಎಂಬ ಕಾರ್ಯಕ್ರಮದ ಉದ್ದೇಶ ಈಡೇರಿಸಲು ಪ್ರವಾಸಿ ತಾಣಗಳನ್ನು ಅಭಿವೃದ್ಧಿಪಡಿಸಲಾಗುತ್ತದೆ.
‘ರಾಜ್ಯಗಳ ಸಕ್ರಿಯ ಸಹಭಾಗಿತ್ವದಲ್ಲಿ ಪ್ರವಾಸೋದ್ಯಮದ ಪ್ರಚಾರ ಕಾರ್ಯ ಕೈಗೊಳ್ಳಲಾಗುತ್ತದೆ’ ಎಂದು ನಿರ್ಮಲಾ ಸೀತಾರಾಮನ್ ಅವರು ತಮ್ಮ ಬಜೆಟ್ ಭಾಷಣದಲ್ಲಿ ತಿಳಿಸಿದ್ದಾರೆ.
‘ದೇಶೀಯ ಹಾಗೂ ವಿದೇಶಿ ಪ್ರವಾಸಿಗರನ್ನು ಹೆಚ್ಚಿನ ಸಂಖ್ಯೆಯಲ್ಲಿ ಆಕರ್ಷಿಸಲಾಗುತ್ತದೆ. ಪ್ರವಾಸೋದ್ಯಮ ವಲಯವು ಯುವಕರಿಗೆ ದೊಡ್ಡ ಸಂಖ್ಯೆಯಲ್ಲಿ ಉದ್ಯೋಗವಕಾಶ ಕಲ್ಪಿಸಲಿದೆ. ಸರ್ಕಾರಿ ಹಾಗೂ ಖಾಸಗಿ ಸಹಭಾಗಿತ್ವದಲ್ಲಿ ಪ್ರವಾಸೋದ್ಯಮದ ಪ್ರಚಾರ ಕಾರ್ಯವನ್ನು ತ್ವರಿತಗೊಳಿಸಲಾಗುತ್ತದೆ’ ಎಂದಿದ್ದಾರೆ.
ಇವನ್ನೂ ಓದಿ...
ಅಮೃತ ಕಾಲದ ಬಜೆಟ್ಗೆ 'ಸಪ್ತರ್ಷಿ' ಮಾರ್ಗದರ್ಶನ: ಏನಿದು? ಇಲ್ಲಿದೆ ವಿವರಣೆ
Union Budget 2023 Live | ಕೇಂದ್ರ ಬಜೆಟ್‌ನ ಸಂಪೂರ್ಣ ಮಾಹಿತಿ
Union Budget 2023 highlights: ಆದಾಯ ತೆರಿಗೆ ವಿನಾಯಿತಿ ಮಿತಿ ಹೆಚ್ಚಳ
Union Budget 2023: ಯಾವುದು ದುಬಾರಿ? ಯಾವುದು ಅಗ್ಗ?
Union Budget 2023: ಧೂಮಪಾನಿಗಳ ಜೇಬಿಗೆ ಬಿಸಿ ಮುಟ್ಟಿಸಿದ ‘ಅಮೃತಕಾಲದ ಬಜೆಟ್’
ಜಗತ್ತು ಭಾರತವನ್ನು ಪ್ರಜ್ವಲಿಸುವ ನಕ್ಷತ್ರದಂತೆ ನೋಡುತ್ತಿದೆ: ನಿರ್ಮಲಾ ಸೀತಾರಾಮನ್
ಭದ್ರಾ ಮೇಲ್ದಂಡೆ ಯೋಜನೆಗೆ ಅನುದಾನ: ಸಿಎಂ ಬಸವರಾಜ ಬೊಮ್ಮಾಯಿ ಸಂತಸ
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.