ಶುಕ್ರವಾರ, 17 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Union Budget: ಗರ್ಭಕಂಠದ ಕ್ಯಾನ್ಸರ್ ತಡೆಗೆ 9-14ರ ವಯಸ್ಸಿನ ಬಾಲಕಿಯರಿಗೂ ಲಸಿಕೆ

Published 1 ಫೆಬ್ರುವರಿ 2024, 9:43 IST
Last Updated 1 ಫೆಬ್ರುವರಿ 2024, 9:43 IST
ಅಕ್ಷರ ಗಾತ್ರ
ADVERTISEMENT

ನವದೆಹಲಿ: ಗರ್ಭಕಂಠದ ಕ್ಯಾನ್ಸರ್ ತಡೆಗಟ್ಟುವ ನಿಟ್ಟಿನಲ್ಲಿ 9ರಿಂದ 14 ವಯಸ್ಸಿನ ಬಾಲಕಿಯರಿಗೂ ಲಸಿಕೆ ನೀಡಲು ಬಜೆಟ್‌ನಲ್ಲಿ ಅನುದಾನ ಮೀಸಲಿಟ್ಟಿರುವುದಾಗಿ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.

ಕಳೆದ ತಿಂಗಳು ಕೇಂದ್ರ ಆರೋಗ್ಯ ಸಚಿವಾಲಯವು, ಗರ್ಭಕಂಠದ ಕ್ಯಾನ್ಸರ್‌ ಕುರಿತು ಸೂಕ್ಷ್ಮವಾಗಿ ಗಮನಹರಿಸಲಾಗುತ್ತಿದೆ. ಜತೆಗೆ ಎಲ್ಲಾ ರಾಜ್ಯ ಮತ್ತು ಆರೋಗ್ಯ ಇಲಾಖೆಯೊಂದಿಗ ನಿರಂತರ ಸಂಪರ್ಕದಲ್ಲಿದ್ದೇವೆ ಎಂದು ತಿಳಿಸಿತ್ತು.

ಪ್ರಸ್ತುತ, ಭಾರತದ ಸೀರಮ್‌ ಇನ್‌ಸ್ಟಿಟ್ಯೂಟ್‌ ತಯಾರಿಸಿದ CERVAVAC ಲಸಿಕೆ ಖಾಸಗಿಯಾಗಿ ಮಾರುಕಟ್ಟೆಯಲ್ಲಿ ದೊರೆಯುತ್ತಿದೆ. ಇದರ ಬೆಲೆ ಒಂದು ಡೋಸ್‌ಗೆ ₹2 ಸಾವಿರ ಆಗಿದೆ.

ಗರ್ಭಕಂಠದ ಕ್ಯಾನ್ಸರ್ ಪ್ರಕರಣಗಳು ಜಾಗತಿಕ ಮಟ್ಟಕ್ಕೆ ಹೋಲಿಸಿದಲ್ಲಿ ಭಾರತದಲ್ಲಿ ತುಸು ಹೆಚ್ಚು. ಗರ್ಭಕಂಠ ಕ್ಯಾನ್ಸರ್‌ನಿಂದ ಸಾವು ಸಂಭವಿಸುವ ಪ್ರಮಾಣ ಜಾಗತಿಕ ಮಟ್ಟದಲ್ಲಿ ಶೇ 1ರಷ್ಟಿದ್ದರೆ, ಭಾರತದಲ್ಲಿ ಅದು ಶೇ 1.6ರಷ್ಟು

ಇತ್ತೀಚಿನ ವರದಿ ಪ್ರಕಾರ, ಭಾರತದಲ್ಲಿ ಪ್ರತಿ ವರ್ಷ 80 ಸಾವಿರ ಮಹಿಳೆಯರು ಗರ್ಭಕಂಠದ ಕ್ಯಾನ್ಸರ್‌ಗೆ ತುತ್ತಾಗುತ್ತಿದ್ದಾರೆ, 35 ಸಾವಿರ ಮಹಿಳೆಯರು ಇದರಿಂದ ಮೃತಪಡುತ್ತಿದ್ದಾರೆ. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT