ಸೋಮವಾರ, ಫೆಬ್ರವರಿ 24, 2020
19 °C

ಕೇಂದ್ರ ಬಜೆಟ್‌ 2020 | ರೈತ ಮಹಿಳೆಗೆ ‘ಧಾನ್ಯಲಕ್ಷ್ಮಿ’

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಮಹಿಳಾ ಸ್ವಸಹಾಯ ಗುಂಪುಗಳು ಮತ್ತು ರೈತ ಮಹಿಳೆಯರಿಗೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ‘ಧಾನ್ಯಲಕ್ಷ್ಮಿ’ ಯೋಜನೆ ಜಾರಿ ಮಾಡಲಾಗುವುದು. 

ಬೀಜ ಸಂರಕ್ಷಣೆಗೆ ಮುಂದಾಗುವ ಮಹಿಳಾ ಸ್ವಸಹಾಯ ಸಂಘಗಳಿಗೆ ಈ ಯೋಜನೆಯಡಿ ಧನಸಹಾಯ ಮಾಡಲಾಗುವುದು. ‘ರೈತ ಮಹಿಳೆ ಧಾನ್ಯಲಕ್ಷ್ಮಿ ಇದ್ದಂತೆ. ಹಾಗಾಗಿ, ಯೋಜನೆಗೆ ಈ ಹೆಸರು ಇಡಲಾಗಿದೆ. ಬೀಜ ಸಂರಕ್ಷಣೆಗೆ ಮುಂದೆ ಬರುವ ಯುವ ಮಹಿಳಾ ಉದ್ಯಮಿಗಳಿಗೆ ನಬಾರ್ಡ್ ಮತ್ತು ಮುದ್ರಾ ಯೋಜನೆಯಡಿ ನೆರವು ನೀಡಲಾಗುವುದು’ ಎಂದು ನಿರ್ಮಲಾ ಹೇಳಿದರು.

2022ರ ವೇಳೆಗೆ ಕೃಷಿ ಆದಾಯ ದ್ವಿಗುಣಗೊಳಿಸಲು ಸರ್ಕಾರ ಬದ್ಧವಾಗಿದೆ. ಆರ್ಥಿಕ ಒಳಗೊಳ್ಳುವಿಕೆಯ ಮೂಲಕ ರೈತರ ಆದಾಯ ದ್ವಿಗುಣ ಸಾಧ್ಯ. ಇದರಲ್ಲಿ ರೈತ ಮಹಿಳೆಯರ ಪಾತ್ರ ಮುಖ್ಯವಾಗಿದ್ದು, ಕೃಷಿಯಲ್ಲಿ ಮಹಿಳೆಯರ ಪಾಲ್ಗೊಳ್ಳುವಿಕೆಯನ್ನು ಉತ್ತೇಜಿಸುವ ನಿಟ್ಟಿನಲ್ಲಿ ‘ಧಾನ್ಯಲಕ್ಷ್ಮಿ’ ಯೋಜನೆ ಜಾರಿಗೆ ತರಲಾಗುವುದು. 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು