Union Budget 2021 | ಮಹಾರಾಷ್ಟ್ರ ಮರೆತ ಬಜೆಟ್: ಶಿವಸೇನಾ ಟೀಕೆ

ನಾಗಪುರ/ಮುಂಬೈ: ಪ್ರಸಕ್ತ ಸಾಲಿನ ಕೇಂದ್ರ ಬಜೆಟ್ನಲ್ಲಿ ಮಹಾರಾಷ್ಟ್ರವನ್ನು ಕಡೆಗಣಿಸಲಾಗಿದೆ ಎಂದು ಆಡಳಿತಾರೂಢ ಪಕ್ಷ ಶಿವಸೇನಾ ಆರೋಪಿಸಿದರೆ, ಸರ್ಕಾರದ ಭಾಗವಾಗಿರುವ ಮತ್ತೊಂದು ಪಕ್ಷ ಎನ್ಸಿಪಿ, ‘ಇದೊಂದು ನಿರಾಶಾದಾಯಕ ಬಜೆಟ್ ಆಗಿದ್ದು, ಖಾಸಗೀಕರಣಕ್ಕೆ ಹೆಚ್ಚು ಒತ್ತು ನೀಡಲಾಗಿದೆ‘ ಎಂದು ಟೀಕಿಸಿದೆ.
ಮತ್ತೊಂದೆಡೆ ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಮತ್ತು ಹಿರಿಯ ಬಿಜೆಪಿ ನಾಯಕ ದೇವೇಂದ್ರ ಫಡಣವೀಸ್ ಅವರು, ‘ಬಜೆಟ್ನಲ್ಲಿ ನಾಸಿಕ್ ಮತ್ತು ನಾಗಪುರ ನಗರಗಳಲ್ಲಿ ಮೆಟ್ರೊ ರೈಲು ಯೋಜನೆಗೆ ಅವಕಾಶ ನೀಡಿರುವುದನ್ನು ಸ್ವಾಗತಿಸಿದ್ದಾರೆ.
'ಕೇಂದ್ರ ಸರ್ಕಾರ ಮಂಡಿಸಿರುವ ಬಜೆಟ್ನಲ್ಲಿ ಶ್ರೀಸಾಮಾನ್ಯರನ್ನು ನಿರ್ಲಕ್ಷಿಸಲಾಗಿದೆ. ರೈತರ ಪರವಾಗಿ ಯಾವುದೇ ಸೂಕ್ತ ನಿರ್ಧಾರವನ್ನು ಉಲ್ಲೇಖಿಸಿಲ್ಲ‘ ಎಂದು ಗೃಹ ಸಚಿವ ಮತ್ತು ಎನ್ಸಿಪಿ ಹಿರಿಯ ನಾಯಕ ಅನಿಲ್ ದೇಶಮುಖ್ ನಾಗಪುರದಲ್ಲಿ ಸುದ್ದಿಗಾರರಿಗೆ ತಿಳಿಸಿದರು.
‘ಕೊರೊನಾ ಸಾಂಕ್ರಾಮಿಕದ ನಡುವೆ ಬಜೆಟ್ ಮೇಲೆ ಜನರು ಬಹಳ ನಿರೀಕ್ಷೆಗಳನ್ನು ಇಟ್ಟುಕೊಂಡಿದ್ದರು. ಅವುಗಳನ್ನು ಪೂರೈಸುವಲ್ಲಿ ಬಜೆಟ್ ವಿಫಲವಾಗಿದೆ‘ ಎಂದು ಅವರು ಅಭಿಪ್ರಾಯಪಟ್ಟರು.
ಮತ್ತೊಬ್ಬ ಎನ್ಸಿಪಿ ನಾಯಕ ಮತ್ತು ವಸತಿ ಸಚಿವ ಜಿತೇಂದ್ರ ಅವಾದ್ ‘ಸರಳವಾಗಿ ಹೇಳುವುದಾದರೆ, ಈ ಬಜೆಟ್ ಭಾರತವನ್ನು ಮಾರಾಟಕ್ಕಿಟ್ಟಂತೆ ಕಾಣುತ್ತದೆ‘ ಎಂದು # ಇಂಡಿಯಾ_ಫಾರ್_ಸೇಲ್ ಹ್ಯಾಷ್ಟ್ಯಾಗ್ನಲ್ಲಿ ಟ್ವೀಟ್ ಮಾಡಿದ್ದಾರೆ.
या वर्षीच्या अर्थसंकल्पाचा सरळ आणि सोपा अर्थ...
देश विकायला काढलायं... #India_For_Sale
— Dr.Jitendra Awhad (@Awhadspeaks) February 1, 2021
ಎನ್ಸಿಪಿಯ ಮುಖ್ಯ ವಕ್ತಾರ ಮಹೇಶ್ ತಪಾಸೆ, ‘ಖಾಸಗೀಕರಣದ ನಿಜವಾದ ಉದ್ದೇಶವನ್ನು ಮರೆಮಾಚಲು ಕೇಂದ್ರ ಹಣಕಾಸು ಸಚಿವ ನಿರ್ಮಲಾ ಸೀತಾರಾಮನ್ ತಮ್ಮ ಬಜೆಟ್ ಭಾಷಣದಲ್ಲಿ ಅಲಂಕಾರಿಕ ಪದಗಳನ್ನು ಬಳಸಿದ್ದಾರೆ‘ ಎಂದು ಅವರು ದೂರಿದರು. ನಿರುದ್ಯೋಗ ಸಮಸ್ಯೆ ನಿವಾರಣೆಗೆ ಬಜೆಟ್ನಲ್ಲಿ ಯಾವುದೇ ನಿರ್ದಿಷ್ಟ ಮಾರ್ಗಸೂಚಿ ಒದಗಿಸಿಲ್ಲ ಎಂದು ಅವರು ಟೀಕಿಸಿದರು.
ಇವುಗಳನ್ನೂ ಓದಿ...
Union Budget 2021 Live Updates| ಕೇಂದ್ರ ಬಜೆಟ್ನ ಸಂಪೂರ್ಣ ಮಾಹಿತಿ
Budget 2021: ದೇಶಾದ್ಯಂತ ಒಂದೇ ಪಡಿತರ ಕಾರ್ಡ್ ಯೋಜನೆ ಶೀಘ್ರದಲ್ಲೇ ಜಾರಿ
Budget 2021: ದೇಶದ ವಿವಿಧೆಡೆ 7 ಜವಳಿ ಪಾರ್ಕ್ ಸ್ಥಾಪನೆ
ಬಜೆಟ್ 2021: ಯಾವುದರ ದರ ಏರಿತು, ಯಾವುದಕ್ಕೆ ಇಳಿಯಿತು?
Budget 2021: ನಗರ ಸಾರ್ವಜನಿಕ ಸಾರಿಗೆ ವ್ಯವಸ್ಥೆ ಉನ್ನತೀಕರಣ, ₹ 18 ಸಾವಿರ ಕೋಟಿ
Union Budget 2021: ಬೆಂಗಳೂರು ಮೆಟ್ರೋ ಯೋಜನೆಗೆ ₹14,788 ಕೋಟಿ ಘೋಷಣೆ
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.