ನವದೆಹಲಿ: ಕರ್ನಾಟಕದಲ್ಲಿ ಹೊಸ ರೈಲು ಮಾರ್ಗಗಳ ನಿರ್ಮಾಣ, ಜೋಡಿ ಹಳಿ ಹಾಗೂ ಗೇಜ್ ಪರಿವರ್ತನೆ ಸೇರಿದಂತೆ ವಿವಿಧ ಮೂಲಸೌಕರ್ಯ ಕಾಮಗಾರಿಗಳಿಗೆ ಕೇಂದ್ರ ಬಜೆಟ್ನಲ್ಲಿ ₹7,748 ಕೋಟಿ ಹಂಚಿಕೆ ಮಾಡಲಾಗಿದೆ.

‘2009-14ರ ಅವಧಿಯಲ್ಲಿ ರಾಜ್ಯದ ರೈಲ್ವೆ ಯೋಜನೆಗಳಿಗೆ ವಾರ್ಷಿಕ ₹835 ಕೋಟಿ ಅನುದಾನ ನೀಡಲಾಗುತ್ತಿತ್ತು. ಈಗ ಅನುದಾನ ಬಿಡುಗಡೆ ಪ್ರಮಾಣ ಒಂಬತ್ತು ಪಟ್ಟು ಹೆಚ್ಚಾಗಿದೆ’ ಎಂದು ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ತಿಳಿಸಿದರು.

ಬೆಂಗಳೂರು ಉಪನಗರ ರೈಲು ಮಾರ್ಗಕ್ಕೆ ಕಳೆದ ವರ್ಷ ₹350 ಕೋಟಿ ಹಂಚಿಕೆ ಮಾಡಲಾಗಿತ್ತು. ಈ ಸಲ ₹500 ಕೋಟಿ ಕೊಡಲಾಗಿದೆ ಎಂದು ಅವರು ತಿಳಿಸಿದರು.

ಮೂಲಸೌಕರ್ಯ ವ್ಯವಸ್ಥೆ ಬಲಪಡಿಸಲು ಬೆಂಗಳೂರು–ಚೆನ್ನೈ, ಬೆಂಗಳೂರು–ಹೈದರಾಬಾದ್ ಸೇರಿದಂತೆ ಏಳು ಹೈಸ್ಪೀಡ್ ರೈಲು ಕಾರಿಡಾರ್ಗಳನ್ನು ಸ್ಥಾಪಿಸುವುದಾಗಿ ಬಜೆಟ್ನಲ್ಲಿ ಘೋಷಿಸಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.