Karnataka Budget 2021| ಒಕ್ಕಲಿಗ ಅಭಿವೃದ್ಧಿ ನಿಗಮ ಸ್ಥಾಪನೆ: 500 ಕೋಟಿ ಅನುದಾನ

ಬೆಂಗಳೂರು: ಒಕ್ಕಲಿಗರ ಅಭಿವೃದ್ಧಿ ನಿಗಮ ಸ್ಥಾಪನೆ ಮಾಡುವುದಾಗಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಬಜೆಟ್‌ನಲ್ಲಿ ಘೋಷಿಸಿದ್ದಾರೆ.
2021-22ನೇ ಸಾಲಿನ ಅಯವ್ಯಯವನ್ನು ಸೋಮವಾರ ಮಂಡಿಸಿದ ಮುಖ್ಯಮಂತ್ರಿ ಈ ವಿಚಾರ ಘೋಷಣೆ ಮಾಡಿದರು.
'ಲಿಂಗಾಯತ ಅಭಿವೃದ್ಧಿ ನಿಗಮವನ್ನು ಈಗಾಗಲೇ ಘೋಷಣೆ ಮಾಡಿ ₹500 ಅನುದಾನವನ್ನೂ ನಿಗದಿ ಮಾಡಲಾಗಿದೆ. ಅದರಂತೆಯೇ ಒಕ್ಕಲಿಗರ ಅಭಿವೃದ್ಧಿ ನಿಗಮವನ್ನೂ ಸ್ಥಾಪಿಸಲಾಗುತ್ತಿದೆ. ಅದಕ್ಕಾಗಿ ₹500 ಕೋಟಿ ನೀಡಲಾಗುತ್ತಿದೆ,‘ ಎಂದು ಘೋಷಿಸಿದರು.
ಮುಖ್ಯಮಂತ್ರಿ ಈ ಘೋಷಣೆ ಮಾಡುತ್ತಲೇ ವಿಧಾನಸಭೆ ಸದಸ್ಯರು ಮೇಜು ತಟ್ಟಿ ಸ್ವಾಗತಿಸಿದರು.
ಇದೇ ವೇಳೆ ಅಲ್ಪ ಸಂಖ್ಯಾತರ ಕಲ್ಯಾಣಕ್ಕಾಗಿ ₹1500 ಕೋಟಿ ನೀಡುವುದಾಗಿಯೂ ಅವರು ತಿಳಿಸಿದ್ದಾರೆ.
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.