ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಿರ್ಮಲಾ ಸೀತಾರಾಮನ್‌ ಬಜೆಟ್‌ನಲ್ಲಿ ಯುವಜನತೆಗೆ ಸಿಕ್ಕಿದ್ದೆಷ್ಟು?

Last Updated 1 ಫೆಬ್ರುವರಿ 2023, 11:39 IST
ಅಕ್ಷರ ಗಾತ್ರ

2023–24 ನೇ ಸಾಲಿನ ಮುಂಗಡಪತ್ರವನ್ನು ಅಮೃತ ಕಾಲದ ಮೊದಲ ಬಜೆಟ್ ಎಂದು ಬಣ್ಣಿಸಿರುವ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್, ಸರ್ಕಾರ ಪ್ರಮುಖವಾಗಿ ಪರಿಗಣಿಸಿರುವ ವಲಯಗಳಲ್ಲಿ ಯುವಜನತೆಗೂ ಪ್ರಾಮುಖ್ಯತೆ ನೀಡಿದ್ದಾರೆ. ಈ ಮೂಲಕ ವಿತ್ತ ಸಚಿವರು ಮುಂಬರುವ ಚುನಾವಣೆಯಲ್ಲಿ ದೇಶದ ಯುವ ಸಮೂಹವನ್ನು ತಮ್ಮತ್ತ ಸೆಳೆಯುವ ಯತ್ನ ಮಾಡಿದ್ದಾರೆ.

ದೇಶದ ಯುವ ಸಮೂಹ, ನಿರುದ್ಯೋಗ ಸಮಸ್ಯೆ ಮತ್ತು ತಂತ್ರಜ್ಞಾನವನ್ನು ಗಮನದಲ್ಲಿಟ್ಟುಕೊಂಡು ಸರ್ಕಾರ ಯುವಕರಿಗಾಗಿಯೇ ಕೆಲ ಪ್ರಮುಖ ಯೋಜನೆಗಳನ್ನು ಈ ಸಲದ ಬಜೆಟ್‌ನಲ್ಲಿ ಘೋಷಿಸಿದೆ.

ಸ್ಕಿಲ್ ಡಿಜಿಟಲ್ ಇಂಡಿಯಾ ವೇದಿಕೆ: ಅಂತರರಾಷ್ಟ್ರೀಯ ಅವಕಾಶಗಳಿಗಾಗಿ ಯುವಕರನ್ನು ಸಿದ್ಧಪಡಿಸಲು ವಿವಿಧ ರಾಜ್ಯಗಳಲ್ಲಿ ಸ್ಕಿಲ್ ಇಂಡಿಯಾ ಅಂತರರಾಷ್ಟ್ರೀಯ ಕೇಂದ್ರಗಳನ್ನು ಸ್ಥಾಪನೆಯನ್ನು ಘೋಷಿಸಲಾಗಿದೆ.

ಕೃತಕ ಬುದ್ಧಿಮತ್ತೆಗಾಗಿ ಶ್ರೇಷ್ಠತಾ ಕೇಂದ್ರಗಳು: ಸೈಬರ್ ಮತ್ತು ಕೃತಕ ಬುದ್ಧಿಮತ್ತೆ ವಲಯದಲ್ಲಿ ಸಾಮರ್ಥ್ಯ ಹೆಚ್ಚಿಸುವ ನಿಟ್ಟಿನಲ್ಲಿ ಗಮನ ಹರಿಸಲಾಗಿದೆ. ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಕೃತಕ ಬುದ್ಧಿಮತ್ತೆಗಾಗಿ ಮೂರು ಶ್ರೇಷ್ಠತಾ ಕೇಂದ್ರಗಳನ್ನು ಸ್ಥಾಪನೆ ಘೋಷಿಸಿದೆ.

ರಾಷ್ಟ್ರೀಯ ಅಪ್ರೆಂಟಿಸ್‌ಶಿಪ್ ಉತ್ತೇಜನಾ ಯೋಜನೆ: ಮೂರು ವರ್ಷಗಳಲ್ಲಿ 47 ಲಕ್ಷ ಯುವಕರಿಗೆ ಸ್ಟೈಫಂಡ್ ನೀಡುವ ರಾಷ್ಟ್ರವ್ಯಾಪಿ ಯೋಜನೆ ಘೋಷಣೆ.

ಪ್ರಧಾನ ಮಂತ್ರಿ ಕೌಶಲ್ ವಿಕಾಸ್ ಯೋಜನೆ 4.0: ಹೊಸ ತಲೆಮಾರಿನ ವೃತ್ತಿ ಮತ್ತು ತಂತ್ರಜ್ಞಾನ ಕೋರ್ಸ್‌ಗಳನ್ನು ಒದಗಿಸುವ ಯೋಜನೆ ಇದಾಗಿದೆ.

ಇವನ್ನೂ ಓದಿ..

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT