ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಫಿಲಂ ಸಿಟಿ ನಿರ್ಮಾಣ ಎಲ್ಲಿ, ಬಜೆಟ್‌ನಲ್ಲಿ ಸಿಕ್ಕ ಅನುದಾನವೆಷ್ಟು?

Last Updated 5 ಮಾರ್ಚ್ 2020, 8:27 IST
ಅಕ್ಷರ ಗಾತ್ರ

ಬೆಂಗಳೂರು: ಚಿತ್ರರಂಗದ ಬಹುದಿನಗಳ ಬೇಡಿಕೆಯಾಗಿರುವ ಫಿಲಂ ಸಿಟಿ ನಿರ್ಮಾಣಕ್ಕೆ ಸರ್ಕಾರ ಅನುದಾನ ಘೋಷಿಸಿದೆ. ಬೆಂಗಳೂರಿನಲ್ಲಿ ಸ್ಥಾಪಿಸುವುದಾಗಿ ತಿಳಿಸಿದೆ.

500 ಕೋಟಿ ವೆಚ್ಚದಲ್ಲಿ ಫಿಲಂ ಸಿಟಿ ನಿರ್ಮಿಸಲು ಸರ್ಕಾರ ನಿರ್ಧಿರಿಸಿದೆ. ಬೆಂಗಳೂರಿನಲ್ಲಿ ಫಿಲಂ ಸಿಟಿ ತಲೆ ಎತ್ತಲಿದೆ ಎಂದು ಹೇಳಲಾಗಿದೆಯಾದರೂ, ನಿರ್ದಿಷ್ಟವಾಗಿ ಎಲ್ಲಿ ಎಂಬುದು ಬಜೆಟ್‌ನಲ್ಲಿ ಸ್ಪಷ್ಟವಾಗಿಲ್ಲ.

ಅಲ್ಲಿಂದ ಇಲ್ಲಿಗೆ, ಇಲ್ಲಿಂದ ಅಲ್ಲಿಗೆ!

ಸಿದ್ದರಾಮಯ್ಯ ಸರ್ಕಾರ ಮೈಸೂರಿನಲ್ಲಿ ಫಿಲಂ ಸಿಟಿ ನಿರ್ಮಿಸುವುದಾಗಿ ಹೇಳಿ ಅನುದಾನವನ್ನೂ ಘೋಷಿಸಿತ್ತು. ಎಚ್‌.ಡಿ ಕುಮಾರಸ್ವಾಮಿ ನೇತೃತ್ವದ ಮೈತ್ರಿ ಸರ್ಕಾರ ಮೈಸೂರಿನಿಂದ ರಾಮನಗರಕ್ಕೆ ಫಿಲಂ ಸಿಟಿಯನ್ನು ಸ್ಥಳಾಂತರ ಮಾಡಿತ್ತು. ಬಿ.ಎಸ್‌ ಯಡಿಯೂರಪ್ಪ ಸರ್ಕಾರ ರಾಮನಗರದಿಂದ ಬೆಂಗಳೂರು ಹೊರವಲಯದ ರೋರಿಚ್‌ ಎಸ್ಟೇಟ್‌ನಲ್ಲಿ ಫಿಲಂ ಸಿಟಿ ನಿರ್ಮಾಣ ಮಾಡುವುದಾಗಿ ಹೇಳಿತ್ತಾದರೂ, ಅದಕ್ಕೆ ರಾಜಕೀಯ ಮತ್ತು ಪರಿಸರ ವಲಯದಿಂದ ಭಾರಿ ವಿರೋಧ ವ್ಯಕ್ತವಾಗಿತ್ತು. ಅದರೊಂದಿಗೆ ಫಿಲಂ ಸಿಟಿ ನಿರ್ಮಾಣದ ವಿಚಾರದಲ್ಲಿ ಅನಿಶ್ಚಿತತೆ ಮನೆ ಮಾಡಿತ್ತು.

ಇನ್ನಷ್ಟು

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT