ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

20 ದಿನದಲ್ಲಿ ₹ 1 ಲಕ್ಷ ಕೋಟಿ ಹೊರಹರಿವು

Last Updated 22 ಮಾರ್ಚ್ 2020, 19:45 IST
ಅಕ್ಷರ ಗಾತ್ರ

ನವದೆಹಲಿ (ಪಿಟಿಐ): ಕೊರೊನಾ ಸೋಂಕು ತೀವ್ರವಾಗಿ ಹರಡುತ್ತಿರುವುದರಿಂದ ಹೂಡಿಕೆದಾರರು ಷೇರುಗಳು ಮತ್ತು ಸಾಲಪತ್ರಗಳನ್ನು ಮಾರಾಟ ಮಾಡಿ ನಗದು ಸಂಗ್ರಹಿಸಿ ಇಟ್ಟುಕೊಳ್ಳುವುದರತ್ತ ಹೆಚ್ಚು ಗಮನ ನೀಡುತ್ತಿದ್ದಾರೆ.

ಮಾರ್ಚ್‌ 1 ರಿಂದ 20ರವರೆಗೆ ನಡೆದಿರುವ ವಹಿವಾಟಿನಲ್ಲಿ ಹೂಡಿಕೆದಾರರು ಬಂಡವಾಳ ಮಾರುಕಟ್ಟೆಯಿಂದ ₹ 1 ಲಕ್ಷ ಕೋಟಿ ಹಿಂದಕ್ಕೆ ಪಡೆದಿದ್ದಾರೆ.ಹೂಡಿಕೆದಾರರು ₹ 56,247 ಕೋಟಿ ಮೌಲ್ಯದ ಷೇರುಗಳನ್ನು ಮತ್ತು ₹ 52,449 ಕೋಟಿ ಮೌಲ್ಯದ ಸಾಲಪತ್ರಗಳನ್ನು ಮಾರಾಟ ಮಾಡಿದ್ದಾರೆ.

ಷೇರುಪೇಟೆಗಳಲ್ಲಿ ಹೂಡಿಕೆ ಮಾಡುವುದಕ್ಕಿಂತಲೂ ಹೆಚ್ಚು ಸುರಕ್ಷಿತ ಮಾರ್ಗಗಳಾದ ಚಿನ್ನ ಮತ್ತು ಅದಕ್ಕೆ ಸಂಬಂಧಿತ ಹೂಡಿಕೆಗಳಲ್ಲಿ ಬಂಡವಾಳ ತೊಡಗಿಸಲು ವಿದೇಶಿ ಹೂಡಿಕೆದಾರರು ನಿರ್ಧರಿಸಿದ್ದಾರೆ ಎಂದು ತಜ್ಞರು ಹೇಳಿದ್ದಾರೆ.

ಸೋಂಕು ಹರಡುವುದನ್ನು ನಿಯಂತ್ರಿಸಲು ಕೈಗೊಳ್ಳುತ್ತಿರುವ ನಿರ್ಬಂಧಿತ ಕ್ರಮಗಳು ಆರ್ಥಿಕ ಚಟುವಟಿಕೆಯ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದ್ದು, ಹೂಡಿಕೆ ಪ್ರಮಾಣವನ್ನು ಗಮನಾರ್ಹವಾಗಿ ತಗ್ಗಿಸುತ್ತಿವೆ ಎಂದೂ ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT