ಬುಧವಾರ, ಏಪ್ರಿಲ್ 8, 2020
19 °C

20 ದಿನದಲ್ಲಿ ₹1 ಲಕ್ಷ ಕೋಟಿ ಹೊರಹರಿವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ (ಪಿಟಿಐ): ಕೊರೊನಾ ಸೋಂಕು ತೀವ್ರವಾಗಿ ಹರಡುತ್ತಿರುವುದರಿಂದ ಹೂಡಿಕೆದಾರರು ಷೇರುಗಳು ಮತ್ತು ಸಾಲಪತ್ರಗಳನ್ನು ಮಾರಾಟ ಮಾಡಿ ನಗದು ಸಂಗ್ರಹಿಸಿ ಇಟ್ಟುಕೊಳ್ಳುವುದರತ್ತ ಹೆಚ್ಚು ಗಮನ ನೀಡುತ್ತಿದ್ದಾರೆ.

ಮಾರ್ಚ್‌ 1 ರಿಂದ 20ರವರೆಗೆ ನಡೆದಿರುವ ವಹಿವಾಟಿನಲ್ಲಿ ಹೂಡಿಕೆದಾರರು ಬಂಡವಾಳ ಮಾರುಕಟ್ಟೆಯಿಂದ ₹ 1 ಲಕ್ಷ ಕೋಟಿ ಹಿಂದಕ್ಕೆ ಪಡೆದಿದ್ದಾರೆ. ಹೂಡಿಕೆದಾರರು ₹ 56,247 ಕೋಟಿ ಮೌಲ್ಯದ ಷೇರುಗಳನ್ನು ಮತ್ತು ₹ 52,449 ಕೋಟಿ ಮೌಲ್ಯದ ಸಾಲಪತ್ರಗಳನ್ನು ಮಾರಾಟ ಮಾಡಿದ್ದಾರೆ.

ಷೇರುಪೇಟೆಗಳಲ್ಲಿ ಹೂಡಿಕೆ ಮಾಡುವುದಕ್ಕಿಂತಲೂ ಹೆಚ್ಚು ಸುರಕ್ಷಿತ ಮಾರ್ಗಗಳಾದ ಚಿನ್ನ ಮತ್ತು ಅದಕ್ಕೆ ಸಂಬಂಧಿತ ಹೂಡಿಕೆಗಳಲ್ಲಿ ಬಂಡವಾಳ ತೊಡಗಿಸಲು ವಿದೇಶಿ ಹೂಡಿಕೆದಾರರು ನಿರ್ಧರಿಸಿದ್ದಾರೆ ಎಂದು ತಜ್ಞರು ಹೇಳಿದ್ದಾರೆ.

ಸೋಂಕು ಹರಡುವುದನ್ನು ನಿಯಂತ್ರಿಸಲು ಕೈಗೊಳ್ಳುತ್ತಿರುವ ನಿರ್ಬಂಧಿತ ಕ್ರಮಗಳು ಆರ್ಥಿಕ ಚಟುವಟಿಕೆಯ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದ್ದು, ಹೂಡಿಕೆ ಪ್ರಮಾಣವನ್ನು ಗಮನಾರ್ಹವಾಗಿ ತಗ್ಗಿಸುತ್ತಿವೆ ಎಂದೂ ಹೇಳಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು