ಬುಧವಾರ, ಸೆಪ್ಟೆಂಬರ್ 29, 2021
20 °C

ಕೆಐಒಸಿಎಲ್‌ಗೆ ₹12 ಕೋಟಿ ಲಾಭ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಮಂಗಳೂರು: ಕುದುರೆಮುಖ ಕಬ್ಬಿಣ ಮತ್ತು ಅದಿರು ಕಂಪನಿ (ಕೆಐಒಸಿಎಲ್‌) 2020-21ರ ಮೊದಲ ತ್ರೈಮಾಸಿಕದಲ್ಲಿ ಒಟ್ಟು ₹436.71 ಕೋಟಿ ಆದಾಯ ಗಳಿಸಿದೆ. ತೆರಿಗೆ ಸಹಿತ ₹18.97 ಕೋಟಿ ಮತ್ತು ತೆರಿಗೆ ನಂತರ ₹12.02 ಕೋಟಿ ಲಾಭ ಗಳಿಸಿದೆ.

ಬೆಂಗಳೂರಿನ ಮುಖ್ಯ ಕಚೇರಿಯಲ್ಲಿ ವಿಡಿಯೊ ಕಾನ್ಫೆರನ್ಸ್ ಮೂಲಕ ನಡೆದ ನಿರ್ದೇಶಕ ಮಂಡಳಿಯ ಸಭೆಯಲ್ಲಿ ತ್ರೈಮಾಸಿಕ ಆರ್ಥಿಕ ಫಲಿತಾಂಶ ಘೋಷಿಸಲಾಗಿದೆ.

ಆಂತರಿಕ ಹಾಗೂ ವಿದೇಶಿ ಮಾರುಕಟ್ಟೆಗೆ ಅದಿರು ಉಂಡೆ ಮಾರಾಟವು 4.5 ಲಕ್ಷ ಟನ್‌ನಿಂದ 5.68 ಲಕ್ಷ ಟನ್‌ಗೆ ಏರಿಕೆಯಾಗಿದೆ. 5.21 ಲಕ್ಷ ಟನ್ ರಫ್ತು ಮಾಡಿದ್ದು, 0.47 ಲಕ್ಷ ಟನ್ ಸ್ಥಳೀಯವಾಗಿ ಮಾರಾಟ ಮಾಡಲಾಗಿದೆ.

ಕೋವಿಡ್-19 ಸಂದರ್ಭದಲ್ಲಿ ಬೇಕಾದ ಮುಂಜಾಗ್ರತಾ ಕ್ರಮಗಳನ್ನು ಅಳವಡಿಸಿಕೊಂಡು ಅದಿರು ಉಂಡೆ ಉತ್ಪಾದನೆ ಮತ್ತು ಖನಿಜ ಶೋಧನಾ ಚಟುವಟಿಕೆಗಳನ್ನು ನಿರಂತರವಾಗಿ ನಡೆಸಲಾಗುತ್ತಿದೆ ಎಂದು ಕಂಪನಿಯ ಅಧ್ಯಕ್ಷ, ವ್ಯವಸ್ಥಾಪಕ ನಿರ್ದೇಶಕ ಎಂ.ವಿ. ಸುಬ್ಬರಾವ್ ತಿಳಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು