ನವದೆಹಲಿ: ‘₹ 2,000 ಮುಖಬೆಲೆಯ ನೋಟುಗಳನ್ನು ಚಲಾವಣೆಯಿಂದ ಹಿಂದೆ ತೆಗೆದುಕೊಳ್ಳುವುದಿಲ್ಲ’ ಎಂದು ಹಣಕಾಸು ರಾಜ್ಯ ಸಚಿವ ಅನುರಾಗ್ ಠಾಕೂರ್ ಅವರು ಲೋಕಸಭೆಗೆ ತಿಳಿಸಿದ್ದಾರೆ.

‘ಹಲವಾರು ಬ್ಯಾಂಕ್‌ಗಳ ಎಟಿಎಂಗಳಿಂದ ಈ ನೋಟುಗಳನ್ನು ವಿತರಿಸಲಾಗುತ್ತಿದೆ’ ಎಂದು ಲಿಖಿತ ಉತ್ತರದಲ್ಲಿ ತಿಳಿಸಿದ್ದಾರೆ. ಇತ್ತೀಚಿನ ದಿನಗಳಲ್ಲಿ ಮಾರುಕಟ್ಟೆಯಲ್ಲಿ ₹ 2,000 ಬೆಲೆಯ ನೋಟುಗಳ ಚಲಾವಣೆ ಕಡಿಮೆಯಾಗಿದ್ದರಿಂದ ಸರ್ಕಾರ ಅವುಗಳನ್ನು ಹಂತ ಹಂತವಾಗಿ ಹಿಂದೆ ಪಡೆಯಲಿದೆ ಎನ್ನುವ ಗಾಳಿ ಸುದ್ದಿಗಳು ಹರಡಿದ್ದವು.

‘ಈ ನೋಟುಗಳಿಗೆ ಸುಲಭವಾಗಿ ಚಿಲ್ಲರೆ ದೊರೆಯದ ಕಾರಣಕ್ಕೆ ಎಟಿಎಂಗಳಿಂದ ₹ 200 ಮತ್ತು ₹ 500 ಮುಖಬೆಲೆಯ ನೋಟುಗಳನ್ನು ಹೆಚ್ಚಾಗಿ ವಿತರಿಸಲು ಬ್ಯಾಂಕ್‌ಗಳು ಕ್ರಮ ಕೈಗೊಂಡಿವೆ’ ಎಂದು ಠಾಕೂರ್ ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.