ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಣದುಬ್ಬರ ತಗ್ಗಿಸಲು ಹೊಂದಾಣಿಕೆ ನೀತಿ ಅಗತ್ಯ: ಆರ್‌ಬಿಐ ಎಂಪಿಸಿ ಸದಸ್ಯ

Last Updated 28 ಅಕ್ಟೋಬರ್ 2022, 21:16 IST
ಅಕ್ಷರ ಗಾತ್ರ

ನವದೆಹಲಿ: ‘ಇಂಧನ ಮತ್ತು ಆಹಾರ ವಸ್ತುಗಳ ದರ ಹೆಚ್ಚಾಗಿರುವುದರ ಪರಿಣಾಮವಾಗಿ ಕಳೆದ ಮೂರು ತ್ರೈಮಾಸಿಕಗಳಿಂದ ಹಣದುಬ್ಬರ ದರವು ಗರಿಷ್ಠ ಮಟ್ಟದಲ್ಲಿಯೇ ಇದೆ. ಇದನ್ನು ನಿಯಂತ್ರಿಸಲು ಹೊಂದಾಣಿಕೆಯ ನೀತಿಯ ಅಗತ್ಯ ಇದೆ’ ಎಂದು ಭಾರತೀಯ ರಿಸರ್ವ್‌ ಬ್ಯಾಂಕ್‌ನ (ಆರ್‌ಬಿಐ) ಹಣಕಾಸು ನೀತಿ ಸಮಿತಿ (ಎಂಪಿಸಿ) ಸದಸ್ಯ ಶಶಾಂಕ್‌ ಭಿಡೆ ಹೇಳಿದ್ದಾರೆ.

‘ಸದ್ಯ ಹಣದುಬ್ಬರದ ಒತ್ತಡವು ತೀವ್ರವಾಗಿರುವುದರಿಂದ ದೇಶದ ಹಣದುಬ್ಬರದ ಗುರಿ ನಿಗದಿಪಡಿಸುವುದಕ್ಕೆ ದೊಡ್ಡ ಪರೀಕ್ಷೆಯಾಗಿದೆ’ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ಗ್ರಾಹಕರ ದರ ಸೂಚ್ಯಂಕ (ಸಿಪಿಐ) ಆಧರಿಸಿದ ಚಿಲ್ಲರೆ ಹಣದುಬ್ಬರವು 2022ರ ಜನವರಿಯಿಂದ ಈಚೆಗೆ ಶೇ 6 ಕ್ಕಿಂತಲೂ ಹೆಚ್ಚಿಗೆ ಇದೆ. ಸೆಪ್ಟೆಂಬರ್‌ನಲ್ಲಿ ಶೇ 7.41ರಷ್ಟು ಆಗಿದೆ. ಹಣಕಾಸು ನೀತಿಯಲ್ಲಿ ಬಡ್ಡಿದರದ ನಿರ್ಧಾರ ತೆಗೆದುಕೊಳ್ಳಲು ಆರ್‌ಬಿಐ ಚಿಲ್ಲರೆ ಹಣದುಬ್ಬರವನ್ನು ಪರಿಗಣಿಸುತ್ತದೆ. ಕೇಂದ್ರ ಸರ್ಕಾರ ನೀಡಿರುವ ಸೂಚನೆಯ ಪ್ರಕಾರ, ಆರ್‌ಬಿಐ ಚಿಲ್ಲರೆ ಹಣದುಬ್ಬರವನ್ನು ಶೇ 6ರ ಒಳಗೆ ನಿಯಂತ್ರಿಸಬೇಕಿದೆ.

‘ಬೆಲೆ ಏರಿಕೆಯು ಆರ್ಥಿಕತೆಯ ಇತರ ವಲಯಗಳ ಮೇಲೆ ಪರಿಣಾಮ ಬೀರದಂತೆ ತಡೆಯುವುದು ಬಹಳ ಮುಖ್ಯ’ ಎಂದು ಅವರು ಹೇಳಿದ್ದಾರೆ.

‘ಹಣದುಬ್ಬರದ ಒತ್ತಡ ಮತ್ತು ಆರ್ಥಿಕ ಬೆಳವಣಿಗೆಗೆ ಸದ್ಯದ ಜಾಗತಿಕ ಆರ್ಥಿಕ ಪರಿಸ್ಥಿತಿಯು ಸವಾಲಾಗಿದೆ. ವೈವಿಧ್ಯಮಯ ಆರ್ಥಿಕ ತಳಹದಿ ಮತ್ತು ದೂರದೃಷ್ಟಿಯಿಂದ ಕೂಡಿದ ಹಣಕಾಸು ನೀತಿಗಳಿಂದಾಗಿ ಭಾರತವು ಈ ಸವಾಲುಗಳನ್ನು ಎದುರಿಸುವ ಸಾಮರ್ಥ್ಯ ಹೊಂದಿದೆ.

‘ಹಣದುಬ್ಬರವು ಗರಿಷ್ಠ ಮಟ್ಟದಲ್ಲಿ ಇದ್ದರೆ ಖರೀದಿ ಸಾಮರ್ಥ್ಯ ಮತ್ತು ಹೂಡಿಕೆಯ ಮೇಲೆ ಪ್ರತಿಕೂಲ ಪರಿಣಾಮ ಉಂಟಾಗಲಿದೆ. ಹೀಗಾಗಿ ಹಣಕಾಸು ನೀತಿಯನ್ನು ಬಿಗಿಗೊಳಿಸುವ ಮೂಲಕ ಹಣದುಬ್ಬರದ ಒತ್ತಡವನ್ನು ಕಡಿಮೆ ಮಾಡಲುಆರ್‌ಬಿಐ ಮುಂದಾಗಿದೆ’ ಎಂದು ಅವರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT