ಮುಂಬೈ (ಪಿಟಿಐ): ಕೇಂದ್ರ ಸರ್ಕಾರದ ಸಂಸ್ಥೆಗಳು ಹಿಂಗಾರು ಹಂಗಾಮಿನಲ್ಲಿ 3 ಲಕ್ಷ ಟನ್ ಈರುಳ್ಳಿ ಖರೀದಿಸಲಿವೆ ಎಂದು ಕೇಂದ್ರ ಗ್ರಾಹಕ ವ್ಯವಹಾರಗಳ ಸಚಿವ ಪೀಯೂಷ್ ಗೋಯಲ್ ಗುರುವಾರ ಹೇಳಿದ್ದಾರೆ.
ಕಳೆದ ವರ್ಷ ಇದೇ ಅವಧಿಯಲ್ಲಿ 2.5 ಲಕ್ಷ ಟನ್ ಈರುಳ್ಳಿ ಖರೀದಿಸಲಾಗಿತ್ತು ಎಂದು ಅವರು ಮಾಹಿತಿ ನೀಡಿದ್ದಾರೆ. ರೈತರಿಗೆ ನ್ಯಾಯೋಚಿತ ಬೆಲೆ ಸಿಗುವಂತೆ ಮಾಡುವ ಉದ್ದೇಶದಿಂದ 3 ಲಕ್ಷ ಟನ್ ಈರುಳ್ಳಿ ಖರೀದಿಸುವಂತೆ ಈಗಾಗಲೇ ಸೂಚನೆ ನೀಡಲಾಗಿದೆ ಎಂದು ಅವರು ಸುದ್ದಿಗಾರರಿಗೆ ತಿಳಿಸಿದ್ದಾರೆ.
ಕಳೆದ ತಿಂಗಳಿನಿಂದ ಈರುಳ್ಳಿ ಬೆಲೆ ಭಾರಿ ಇಳಿಕೆ ಕಾಣುತ್ತಿರುವುದರಿಂದ ಮಹಾರಾಷ್ಟ್ರದ ಬೆಳೆಗಾರರು ಪ್ರತಿಭಟನೆ ನಡೆಸುತ್ತಿದ್ದಾರೆ.
ಏಪ್ರಿಲ್–ಜೂನ್ ಅವಧಿಯಲ್ಲಿ ಹಿಂಗಾರು ಬೆಳೆ ಬೆಳೆಯಲಾಗುತ್ತದೆ. ದೇಶಿ ಬೇಡಿಕೆಯ ಶೇಕಡ 65ರಷ್ಟು ಈರುಳ್ಳಿಯನ್ನು ಅಕ್ಟೋಬರ್–ನವೆಂಬರ್‌ನ ಮುಂಗಾರು ಅವಧಿಯಲ್ಲಿ ಬೆಳೆಯಲಾಗುತ್ತದೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.