ನವದೆಹಲಿ: ‘ಲಾಕ್‌ಡೌನ್ ಜಾರಿಯಾದಾಗಿನಿಂದ ಆಗಸ್ಟ್ 31ರವರೆಗೆ ಕಾರ್ಮಿಕರ ಭವಿಷ್ಯ ನಿಧಿ ಸಂಘಟನೆಯ (ಇಪಿಎಫ್‌ಒ) 38.71 ಲಕ್ಷ ಸದಸ್ಯರು ಒಟ್ಟು ₹ 44,054 ಕೋಟಿ ಹಿಂದಕ್ಕೆ ಪಡೆದಿದ್ದಾರೆ’ ಎಂದು ಕಾರ್ಮಿಕ ಸಚಿವ ಸಂತೋಷ್ ಗಂಗ್ವಾರ್ ರಾಜ್ಯಸಭೆಗೆ ಮಾಹಿತಿ ನೀಡಿದ್ದಾರೆ.

‘ಕೋವಿಡ್–19’ ಪಿಡುಗಿನ ಪರಿಣಾಮವಾಗಿ ಎದುರಾಗಬಹುದಾದ ಹಣಕಾಸಿನ ತುರ್ತು ಅಗತ್ಯಗಳನ್ನು ಪೂರೈಸಿಕೊಳ್ಳಲು ಭವಿಷ್ಯ ನಿಧಿ (ಪಿಎಫ್) ಖಾತೆಯಲ್ಲಿನ ಹಣ ಹಿಂದೆ ಪಡೆಯಲು ಕಾರ್ಮಿಕ ಸಚಿವಾಲಯವು ವಿಶೇಷ ಸೌಲಭ್ಯ ಕಲ್ಪಿಸಿದೆ. ಈ ಸೌಲಭ್ಯದ ಅನ್ವಯ, ಸದಸ್ಯರು ತಮ್ಮ ಪಿಎಫ್ ಖಾತೆಯಲ್ಲಿನ ಶೇಕಡ 75ರಷ್ಟು ಅಥವಾ ತಮ್ಮ ಮೂಲ ವೇತನ ಮತ್ತು ತುಟ್ಟಿ ಭತ್ಯೆಯ ಮೂರು ತಿಂಗಳ ಮೊತ್ತದಲ್ಲಿ ಯಾವುದು ಕಡಿಮೆಯೋ ಅದನ್ನು ಹಿಂದೆ ಪಡೆಯಲು ಅವಕಾಶ ಇದೆ.

ಸದಸ್ಯರು ಈ ಮಿತಿಗಿಂತ ಕಡಿಮೆ ಮೊತ್ತಕ್ಕೂ ಅರ್ಜಿ ಸಲ್ಲಿಸಬಹುದಾಗಿದೆ. ಹೀಗೆ ಪಡೆದ ಮೊತ್ತವನ್ನು ಪಿಎಫ್ ಖಾತೆಗೆ ಮರುಪಾವತಿಸುವ ಅಗತ್ಯ ಇಲ್ಲ. ಈ ಮೊತ್ತಕ್ಕೆ ಆದಾಯ ತೆರಿಗೆ ಅನ್ವಯವಾಗುವುದಿಲ್ಲ. ಹಣ ಹಿಂದೆ ಪಡೆಯಲು ಸದಸ್ಯರು ಆನ್‌ಲೈನ್ ಮೂಲಕವೇ ಅರ್ಜಿ ಸಲ್ಲಿಸಬಹುದು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.