ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಿಲಯನ್ಸ್ ಪ್ರತಿಷ್ಠಾನದಿಂದ 5 ಸಾವಿರ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ

Published 24 ಮೇ 2023, 14:13 IST
Last Updated 24 ಮೇ 2023, 14:13 IST
ಅಕ್ಷರ ಗಾತ್ರ

ಬೆಂಗಳೂರು: 27 ರಾಜ್ಯಗಳು ಹಾಗೂ ನಾಲ್ಕು ಕೇಂದ್ರಾಡಳಿತ ಪ್ರದೇಶಗಳ ಒಟ್ಟು ಐದು ಸಾವಿರ ಪದವಿ ವಿದ್ಯಾರ್ಥಿಗಳಿಗೆ ರಿಲಯನ್ಸ್ ಪ್ರತಿಷ್ಠಾನದ 2022–23ನೇ ಸಾಲಿನ ವಿದ್ಯಾರ್ಥಿವೇತನ ನೀಡಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.

ವಿದ್ಯಾರ್ಥಿ ವೇತನವಾಗಿ ₹2 ಲಕ್ಷ ನೆರವು ನೀಡಲಾಗುತ್ತದೆ. ‘ವಿದ್ಯಾರ್ಥಿ ವೇತನ ಪಡೆದವರಲ್ಲಿ ವಿದ್ಯಾರ್ಥಿಗಳು ಹಾಗೂ ವಿದ್ಯಾರ್ಥಿನಿಯರ ಸಂಖ್ಯೆ ಸರಿಸಮವಾಗಿದೆ’ ಎಂದು ರಿಲಯನ್ಸ್ ಪ್ರತಿಷ್ಠಾನದ ಸಿಇಒ ಜಗನ್ನಾಥ ಕುಮಾರ್ ಹೇಳಿದ್ದಾರೆ.

ರಿಲಯನ್ಸ್ ಪ್ರತಿಷ್ಠಾನವು ಈ ವಿದ್ಯಾರ್ಥಿ ವೇತನವನ್ನು ವಿದ್ಯಾರ್ಥಿಯ ಅಗತ್ಯ ಹಾಗೂ ವಿದ್ಯಾರ್ಥಿಯ ಪ್ರತಿಭೆಯನ್ನು ಮಾನದಂಡವಾಗಿ ಇರಿಸಿಕೊಂಡು ನೀಡುತ್ತದೆ. ಈ ವರ್ಷ ವಿದ್ಯಾರ್ಥಿ ವೇತನಕ್ಕೆ ಆಯ್ಕೆಯಾದ ವಿದ್ಯಾರ್ಥಿಗಳು ಎಂಜಿನಿಯರಿಂಗ್, ವಿಜ್ಞಾನ, ವೈದ್ಯಕೀಯ ವಿಜ್ಞಾನ, ವಾಣಿಜ್ಯ, ಕಲೆ, ವ್ಯವಹಾರ ನಿರ್ವಹಣೆ, ಕಂಪ್ಯೂಟರ್ ಅ‍ಪ್ಲಿಕೇಷನ್, ಕಾನೂನು, ಶಿಕ್ಷಣ, ಆತಿಥ್ಯ ಮತ್ತು ಇತರ ವೃತ್ತಿಪರ ಕೋರ್ಸ್‌ಗಳನ್ನು ಅಧ್ಯಯನ ಮಾಡುತ್ತಿದ್ದಾರೆ ಎಂದು ಪ್ರತಿಷ್ಠಾನದ ‍ಪ್ರಕಟಣೆಯಲ್ಲಿ ವಿವರಿಸಲಾಗಿದೆ.

ಮುಂದಿನ ಹತ್ತು ವರ್ಷಗಳಲ್ಲಿ ಒಟ್ಟು 50 ಸಾವಿರ ಜನರಿಗೆ ವಿದ್ಯಾರ್ಥಿ ವೇತನ ನೀಡುವುದಾಗಿ ಪ್ರತಿಷ್ಠಾನವು ಡಿಸೆಂಬರ್‌ನಲ್ಲಿ ಹೇಳಿದೆ. ಹೆಚ್ಚಿನ ಮಾಹಿತಿಗೆ www.reliancefoundation.org ವೆಬ್‌ಸೈಟ್‌ಗೆ ಭೇಟಿ ನೀಡಬಹುದು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT