ಬುಧವಾರ, ಸೆಪ್ಟೆಂಬರ್ 22, 2021
29 °C

ಎಂಆರ್‌ಪಿಎಲ್‌: ₹ 85 ಕೋಟಿ ನಷ್ಟ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮಂಗಳೂರು: ಮಂಗಳೂರು ರಿಫೈನರಿ ಆ್ಯಂಡ್ ಪೆಟ್ರೊಕೆಮಿಕಲ್ಸ್ ಲಿಮಿಟೆಡ್ (ಎಂಆರ್‌ಪಿಎಲ್) ಪ್ರಸಕ್ತ ಆರ್ಥಿಕ ವರ್ಷದ ಮೊದಲ ತ್ರೈಮಾಸಿಕದಲ್ಲಿ ₹ 85.80 ಕೋಟಿ ನಷ್ಟ ಅನುಭವಿಸಿದೆ. ಮಾರ್ಚ್ 31ಕ್ಕೆ ಕೊನೆಗೊಂಡ ಕಳೆದ ಆರ್ಥಿಕ ವರ್ಷದಲ್ಲಿ ಸಂಸ್ಥೆಯು ₹ 238.46 ಕೋಟಿ ನಷ್ಟ ಅನುಭವಿಸಿತ್ತು.

‘ಮೊದಲ ತ್ರೈಮಾಸಿಕದಲ್ಲಿ ಸಂಸ್ಥೆಯು ಒಟ್ಟು ₹ 15,148.19 ಕೋಟಿ ವಹಿವಾಟು ನಡೆಸಿದೆ. ಕಳೆದ ವರ್ಷದ ಇದೇ ಅವಧಿಯಲ್ಲಿ ₹ 6,408.47 ಕೋಟಿ ವಹಿವಾಟು ನಡೆಸಿತ್ತು. ಕಳೆದ ವರ್ಷದ ಮೊದಲ ತ್ರೈಮಾಸಿಕದಲ್ಲಿ ಕಂಪನಿಯು ₹526.58 ಕೋಟಿ ನಷ್ಟ ಅನುಭವಿಸಿತ್ತು. ಕಳೆದ ವರ್ಷಕ್ಕೆ ಹೋಲಿಸಿದಲ್ಲಿ, ಸಂಸ್ಥೆಯ ನಷ್ಟದ ಪ್ರಮಾಣ ಈ ವರ್ಷ ತಗ್ಗಿದೆ’ ಎಂದು ಕಂಪನಿಯ ಹಣಕಾಸು ನಿರ್ದೇಶಕ ಪೋಮಿಲಾ ಜಸ್ಪಾಲ್ ತಿಳಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು