ನವದೆಹಲಿ: 87 ಅಕ್ರಮ ಸಾಲದ ಆ್ಯಪ್ಗಳನ್ನು ನಿರ್ಬಂಧಿಸಲಾಗಿದೆ ಎಂದು ಕೇಂದ್ರ ಸರ್ಕಾರ ಸೋಮವಾರ ತಿಳಿಸಿದೆ. ಅಗತ್ಯ ಪರಿಶೀಲನೆಗಳನ್ನು ನಡೆಸಿ ಈ ಕ್ರಮ ತೆಗೆದುಕೊಳ್ಳಲಾಗಿದೆ ಎಂದು ಸರ್ಕಾರ ಹೇಳಿದೆ.
.ಕಾರ್ಪೊರೇಟ್ ಸಾಲ ಉತ್ತಮ ನಿರೀಕ್ಷೆ: ಎಸ್ಬಿಐ.
‘ಮಾಹಿತಿ ತಂತ್ರಜ್ಞಾನ ಕಾಯ್ದೆ 2000ರ ಸೆಕ್ಷನ್ 69A ಅಡಿಯಲ್ಲಿ ಸಾರ್ವಜನಿಕ ಮಾಹಿತಿಯನ್ನು ನಿರ್ಬಂಧಿಸಲು ನಿರ್ದೇಶನಗಳನ್ನು ನೀಡುವ ಅಧಿಕಾರ ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯಕ್ಕಿದೆ.

‘ಇಲ್ಲಿಯವರೆಗೆ, ಸೂಕ್ತ ಪ್ರಕ್ರಿಯೆಯನ್ನು ಅನುಸರಿಸಿ ಮಾಹಿತಿ ತಂತ್ರಜ್ಞಾನ ಕಾಯ್ದೆ 2000ರ ಸೆಕ್ಷನ್ 69A ಅಡಿಯಲ್ಲಿ ಒಟ್ಟು 87 ಅಕ್ರಮ ಸಾಲದ ಆ್ಯಪ್ಗಳನ್ನು ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯ ನಿರ್ಬಂಧಿಸಿದೆ’ ಎಂದು ಕಾರ್ಪೊರೇಟ್ ವ್ಯವಹಾರಗಳ ರಾಜ್ಯ ಸಚಿವ ಹರ್ಷ ಮಲ್ಹೋತ್ರಾ ಸೋಮವಾರ ಲೋಕಸಭೆಗೆ ಮಾಹಿತಿ ನೀಡಿದ್ದಾರೆ.
.ಅತಿ ಹೆಚ್ಚು ಸಾಲ ಮಾಡಿದ ಕೀರ್ತಿ ಕಾಂಗ್ರೆಸ್ ಸರ್ಕಾರಕ್ಕೆ: ನಿಖಿಲ್ ಟೀಕೆ.
ಆ್ಯಪ್ಗಳ ಮೂಲಕ ಆನ್ಲೈನ್ ಸಾಲ ಚಟುವಟಿಕೆಗಳಲ್ಲಿ ತೊಡಗಿರುವ ಕಂಪನಿಗಳ ವಿರುದ್ಧ ವಿಚಾರಣೆ, ಲೆಕ್ಕಪತ್ರ ಪುಸ್ತಕಗಳ ಪರಿಶೀಲನೆ ಮತ್ತು ಕಂಪನಿ ಕಾಯ್ದೆ 2013ರ ಅಡಿಯಲ್ಲಿ ತನಿಖೆಗಾಗಿ ನಿಯಂತ್ರಕ ಕ್ರಮಗಳನ್ನು ಕಾಲಕಾಲಕ್ಕೆ ತೆಗೆದುಕೊಳ್ಳಲಾಗುತ್ತದೆ ಎಂದು ಅವರು ಸಂಸತ್ತಿಗೆ ನೀಡಿದ ಲಿಖಿತ ಉತ್ತರದಲ್ಲಿ ಹೇಳಿದ್ದಾರೆ.

‘ಕಂಪನಿ ಕಾಯ್ದೆ 2013ರ ಅಡಿಯಲ್ಲಿ ಯಾವುದೇ ಉಲ್ಲಂಘನೆ ಕಂಡುಬಂದಾಗಲೆಲ್ಲಾ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ’ ಎಂದು ಅವರು ಹೇಳಿದ್ದಾರೆ.
.ಪ್ರಶ್ನೋತ್ತರ: ವೈಯಕ್ತಿಕ ಸಾಲ ಅಥವಾ ಗೃಹಸಾಲ; ಯಾವುದು ಸೂಕ್ತ?.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.