ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾಂಗ್ರೆಸ್‌ ಬಂಡಾಯ ಅಭ್ಯರ್ಥಿ ಕಣದಿಂದ ಹಿಂದಕ್ಕೆ

ರಮೇಶ ಬಂಡಿಸಿದ್ದೇಗೌಡಗೆ ಬೆಂಬಲ ಘೋಷಣೆ
Last Updated 28 ಏಪ್ರಿಲ್ 2018, 12:30 IST
ಅಕ್ಷರ ಗಾತ್ರ

ಶ್ರೀರಂಗಪಟ್ಟಣ: ಕಾಂಗ್ರೆಸ್‌ ಪಕ್ಷದ ‘ಬಿ’ ಫಾರಂಗೆ ಅರ್ಜಿ ಸಲ್ಲಿಸಿ ವಿಫಲರಾಗಿ ಬಂಡಾಯ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದ ಪಿ.ಎಚ್‌.ಚಂದ್ರಶೇಖರ್‌ ಶುಕ್ರವಾರ ತಮ್ಮ ಉಮೇದುವಾರಿಕೆ ವಾಪಸ್‌ ಪಡೆದರು.

ಕಾಂಗ್ರೆಸ್‌ ಜಿಲ್ಲಾ ಘಟಕದ ಅಧ್ಯಕ್ಷ ಸಿ.ಡಿ.ಗಂಗಾಧರ್‌, ಬ್ಲಾಕ್‌ ಕಾಂಗ್ರೆಸ್‌ ಮಾಜಿ ಅಧ್ಯಕ್ಷ ಎನ್‌.ಗಂಗಾಧರ್‌ ಇತರರ ಮಧ್ಯಸ್ಥಿಕೆಯಲ್ಲಿ ನಡೆದ ಸಂಧಾನ ಸಭೆಯ ಬಳಿಕ ಅವರು ಚುನಾವಣಾಧಿಕಾರಿಯನ್ನು ಭೇಟಿ ಮಾಡಿ ತಮ್ಮ ನಾಮಪತ್ರವನ್ನು ಹಿಂಪಡೆದರು.

‘ಕಾಂಗ್ರೆಸ್‌ ಪಕ್ಷದ ಅಧಿಕೃತ ಅಭ್ಯರ್ಥಿ ರಮೇಶ ಬಂಡಿಸಿದ್ದೇಗೌಡ ಅವರಿಗೆ ಬೆಂಬಲ ನೀಡುತ್ತೇವೆ’ ಎಂದು ಘೋಷಿಸಿದರು. ಚಂದ್ರಶೇಖರ್‌ ಅವರ ಬೆಂಬಲಿಗರಾದ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ನೆಲಮನೆ ಸಿದ್ದಲಿಂಗೇಗೌಡ, ಮರಳಾಗಾಲ ಎಂ.ಸಿ.ಧನಂಜಯ, ದರಸಗುಪ್ಪೆ ಎಂ. ಗೋಪಾಲ್‌ ಇತರ ನೂರಾರು ಮಂದಿ ಕಾಂಗ್ರೆಸ್‌ ಜಿಲ್ಲಾ ಘಟಕ ಅಧ್ಯಕ್ಷ ಸಿ.ಡಿ.ಗಂಗಾಧರ್‌ ಸಮ್ಮುಖದಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ರಮೇಶ ಬಂಡಿಸಿದ್ದೇಗೌಡ ಅವರಿಗೆ ಬೆಂಬಲ ಘೋಷಿಸಿದರು.

ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದ ಎಂ.ಸಿ. ಚಿದಂಬರ ನಾಮಪತ್ರ ವಾಪಸ್‌ ಪಡೆದಿದ್ದು, ಕಾಂಗ್ರೆಸ್‌ ಅಭ್ಯರ್ಥಿ ಪರ ಕೆಲಸ ಮಾಡುತ್ತೇನೆ ಎಂದು ಘೋಷಿಸಿದರು. ಚಿದಂಬರ ಅವರನ್ನು ರಮೇಶ ಬಂಡಿಸಿದ್ದೇಗೌಡ ಕಾಂಗ್ರೆಸ್‌ಗೆ ಬರಮಾಡಿಕೊಂಡರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT