ಸೋಮವಾರ, ಅಕ್ಟೋಬರ್ 18, 2021
25 °C

ಬ್ಲಾಕ್‌ಚೈನ್‌, ಕೃತಕ ಬುದ್ಧಿಮತ್ತೆ ಬಗ್ಗೆ ಕಾರ್ಯಕ್ರಮ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಆಚಾರ್ಯ ಬೆಂಗಳೂರು ಬಿ ಸ್ಕೂಲ್‌, ಬ್ಲಾಕ್‌ಚೈನ್‌ ತಂತ್ರಜ್ಞಾನ ಮತ್ತು ಸೇವಾ ವಲಯದಲ್ಲಿ ಕೃತಕ ಬುದ್ಧಿಮತ್ತೆ ಬಗ್ಗೆ ‘ಎಐಸಿಟಿಇ ಅಟಲ್’ ಆನ್‌ಲೈನ್‌ ಎಫ್‌ಡಿಪಿ ಕಾರ್ಯಕ್ರಮವನ್ನು ಸೋಮವಾರದಿಂದ ಶುಕ್ರವಾರದವರೆಗೆ ನಡೆಸಲಿದೆ.

ಐಐಎಂ, ಐಐಟಿ, ಐಎಸ್‌ಎಂ–ಇಂಡಿಯಾ ಹಾಗೂ ಇತರ ಮುಂಚೂಣಿ ಸಂಸ್ಥೆಗಳು, ಉದ್ಯಮದ ತಜ್ಞರು ಉಪನ್ಯಾಸ ನೀಡಲಿದ್ದಾರೆ. ಆಸಕ್ತರು https://aicte-india.org/atalacademy/login ವೆಬ್‌ ಕೊಂಡಿ ಮೂಲಕ ಹೆಸರು ನೋಂದಾಯಿಸಿಕೊಳ್ಳಬಹುದು ಎಂದು ಪ್ರಕಟಣೆ ತಿಳಿಸಿದೆ.

ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಶುಲ್ಕ ಪಾವತಿಸಬೇಕಿಲ್ಲ. ಕಾರ್ಯಕ್ರಮದಲ್ಲಿ ಪಾಲ್ಗೊಂಡವರಿಗೆ ‘ಎಐಸಿಟಿಇ ಅಟಲ್‌’ ಕಡೆಯಿಂದ ಪ್ರಮಾಣಪತ್ರ ನೀಡಲಾಗುತ್ತದೆ. ಹೆಚ್ಚಿನ ಮಾಹಿತಿಗೆ ಡಾ.ಸಿ.ಸೆಂಗೊಟ್ಟುವೇಲು (dr.sengottuvelu@acharyabbs.ac.in) ಅವರನ್ನು ಸಂಪರ್ಕಿಸಬಹುದು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.