ಬುಧವಾರ, ಜನವರಿ 19, 2022
26 °C
ರಾಜ್ಯಗಳಿಗೆ ಬರಬೇಕಿರುವ ಮೊತ್ತ ₹51798 ಕೋಟಿ

ಕರ್ನಾಟಕಕ್ಕೆ ₹ 3,528 ಕೋಟಿ ಜಿಎಸ್‌ಟಿ ಪರಿಹಾರ ಬಾಕಿ ಉಳಿಸಿಕೊಂಡ ಕೇಂದ್ರ!

ಪಿಟಿಐ Updated:

ಅಕ್ಷರ ಗಾತ್ರ : | |

ನವದೆಹಲಿ: ಕೇಂದ್ರ ಸರ್ಕಾರವು ವಿವಿಧ ರಾಜ್ಯಗಳಿಗೆ ಬಾಕಿ ಉಳಿಸಿಕೊಂಡಿರುವ ಜಿಎಸ್‌ಟಿ ಪರಿಹಾರ ಮೊತ್ತದಲ್ಲಿ ಕರ್ನಾಟಕ ರಾಜ್ಯಕ್ಕೆ ₹ 3,528 ಕೋಟಿ ಬರಬೇಕಿದೆ. ಅತಿ ಹೆಚ್ಚಿನ ಬಾಕಿ ಮಹಾರಾಷ್ಟ್ರಕ್ಕೆ ಬರಬೇಕಿದೆ.

ಸೆಪ್ಟೆಂಬರ್‌ ತಿಂಗಳ ಅಂತ್ಯದವರೆಗಿನ ಮಾಹಿತಿಯ ಪ್ರಕಾರ, ಕೇಂದ್ರ ಸರ್ಕಾರವು ರಾಜ್ಯಗಳಿಗೆ ನೀಡಬೇಕಿರುವ ಜಿಎಸ್‌ಟಿ ಪರಿಹಾರದ ಬಾಕಿ ಮೊತ್ತವು ಒಟ್ಟು₹ 51,798 ಕೋಟಿಗಳಷ್ಟಿದೆ ಎಂದು ಕೇಂದ್ರ ಹಣಕಾಸು ಖಾತೆ ರಾಜ್ಯ ಸಚಿವ ಪಂಕಜ್‌ ಚೌಧರಿ ಅವರು ಲೋಕಸಭೆಗೆ ಮಾಹಿತಿ ನೀಡಿದ್ದಾರೆ.

2020–21ರಲ್ಲಿ ₹ 1.10 ಲಕ್ಷ ಕೋಟಿ ಹಾಗೂ 2021–22ರಲ್ಲಿ ₹ 1.59 ಲಕ್ಷ ಕೋಟಿ ಜಿಎಸ್‌ಟಿ ಪರಿಹಾರ ಮೊತ್ತವನ್ನು ರಾಜ್ಯಗಳಿಗೆ ಬಿಡುಗಡೆ ಮಾಡಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಕೋವಿಡ್‌ ಸಾಂಕ್ರಾಮಿಕದಿಂದಾಗಿ ಜಿಎಸ್‌ಟಿ ಸಂಗ್ರಹ ಕಡಿಮೆ ಆಗಿದ್ದರಿಂದ ಹೆಚ್ಚಿನ ಪ್ರಮಾಣದ ಜಿಎಸ್‌ಟಿ ಪರಿಹಾರ ಮೊತ್ತದ ಅಗತ್ಯ ಎದುರಾಗಿದೆ. ಇದೇ ವೇಳೆ ಜಿಎಸ್‌ಟಿ ಪರಿಹಾರ ಸೆಸ್‌ ಸಂಗ್ರಹವೂ ಕಡಿಮೆ ಆಗಿದೆ ಎಂದು ಹೇಳಿದ್ದಾರೆ.

ಪ್ರಮುಖ ರಾಜ್ಯಗಳಿಗೆ ಬರಬೇಕಿರುವುದು (₹ ಕೋಟಿಗಳಲ್ಲಿ)

ಮಹಾರಾಷ್ಟ್ರ; 13,153

ಉತ್ತರ ಪ್ರದೇಶ; 5,441

ತಮಿಳುನಾಡು; 4,943

ದೆಹಲಿ; 4,647

ಕರ್ನಾಟಕ; 3,528

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು