ಮಂಗಳವಾರ, ನವೆಂಬರ್ 29, 2022
21 °C

ರಾಜಸ್ಥಾನದಲ್ಲಿ ₹65 ಸಾವಿರ ಕೋಟಿ ಹೂಡಿಕೆ: ಗೌತಮ್‌ ಅದಾನಿ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಜೈಪುರ: ರಾಜಸ್ಥಾನದಲ್ಲಿ ಮುಂದಿನ ಐದರಿಂದ ಏಳು ವರ್ಷಗಳಲ್ಲಿ ₹65 ಸಾವಿರ ಕೋಟಿ ಹೂಡಿಕೆ ಮಾಡುವುದಾಗಿ ಉದ್ಯಮಿ ಗೌತಮ್‌ ಅದಾನಿ ಶುಕ್ರವಾರ ತಿಳಿಸಿದ್ದಾರೆ.

10 ಸಾವಿರ ಮೆಗಾವಾಟ್‌ ಸಾಮರ್ಥ್ಯದ ಸೌರ ವಿದ್ಯುತ್‌ ಉತ್ಪಾದನಾ ಘಟಕ ಸ್ಥಾಪನೆಗಾಗಿ ₹50 ಸಾವಿರ ಕೋಟಿ ಹೂಡಿಕೆ ಮಾಡಲಾಗುತ್ತಿದೆ. ಸಿಮೆಂಟ್‌ ತಯಾರಿಕಾ ಸಾಮರ್ಥ್ಯವನ್ನು ದುಪ್ಪ‍ಟ್ಟು ಮಾಡಲು ₹7 ಸಾವಿರ ಕೋಟಿ ಹೂಡಿಕೆ ಮಾಡಲಾಗುವುದು ಎಂದು ಅವರು ವಿವರಿಸಿದರು.

ಜೈಪುರದ ವಿಮಾನನಿಲ್ದಾಣ ಮೇಲ್ದರ್ಜೆಗೇರಿಸಲು, ವಾಹನಗಳಿಗೆ ಸಿಎನ್‌ಜಿ ಪೂರೈಕೆ ಮಾಡಲು ಅಗತ್ಯವಾದ ಮೂಲಸೌಕರ್ಯ ಅಭಿವೃದ್ಧಿಪಡಿಸಲು ಹಾಗೂ ಮನೆಗಳಿಗೆ ಮತ್ತು ಕೈಗಾರಿಕೆಗಳಿಗೆ ಕೊಳವೆ ಮಾರ್ಗದ ಮೂಲಕ ಅನಿಲ ಪೂರೈಕೆ ಮಾಡುವ ನಿಟ್ಟಿನಲ್ಲಿಯೂ ಹೂಡಿಕೆ ಮಾಡಲಾಗುವುದು ಎಂದರು.

ರಾಜಸ್ಥಾನ ಹೂಡಿಕೆ ಸಮಾವೇಶದಲ್ಲಿ ಮಾತನಾಡಿದ ಅವರು, ಅದಾನಿ ಸಮೂಹವು ಈಗಾಗಲೇ ರಾಜ್ಯದಲ್ಲಿ ಬಲವಾಗಿ ನೆಲೆಯೂರಿದೆ. ಉಷ್ಣ ವಿದ್ಯುತ್‌ ಸ್ಥಾವರ ಹೊಂದಿದೆ. ಸೋಲಾರ್‌ ಪಾರ್ಕ್‌ ಸ್ಥಾಪಿಸಲಾಗಿದೆ. ರಾಜ್ಯದ ವಿದ್ಯುತ್‌ ಉತ್ಪಾದನಾ ಘಟಕಗಳಿಗೆ ಕಲ್ಲಿದ್ದಲು ಪೂರೈಕೆ ಮಾಡಲಾಗುತ್ತಿದೆ ಎಂದು ತಿಳಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು