ಬೆಂಗಳೂರು: ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಆಡಳಿತಾಧಿಕಾರಿಗಳನ್ನು ಭೇಟಿಯಾಗಿರುವ ಅದಾನಿ ಸಮೂಹದ ಪ್ರತಿನಿಧಿಗಳು ಅಧ್ಯಕ್ಷ ಗೌತಮ್ ಅದಾನಿ ವಿರುದ್ಧ ಅಮೆರಿಕದ ನ್ಯಾಯಾಲಯದಲ್ಲಿ ದಾಖಲಾಗಿರುವ ಸಾಗರೋತ್ತರ ಲಂಚ ಪ್ರಕರಣದ ಆರೋಪಗಳನ್ನು ವಜಾಗೊಳಿಸುವಂತೆ ಕೋರಿದ್ದಾರೆ ಎಂದು ಬ್ಲೂಮ್ಬರ್ಗ್ ನ್ಯೂಸ್ ವರದಿ ಉಲ್ಲೇಖಿಸಿ ಸುದ್ದಿಸಂಸ್ಥೆ ರಾಯಿಟರ್ಸ್ ವರದಿ ಮಾಡಿದೆ.

ಅದಾನಿ, ಅವರ ಅಣ್ಣನ ಮಗ ಸಾಗರ್ ಅದಾನಿ ಅವರು ಸೌರ ವಿದ್ಯುತ್ ಗುತ್ತಿಗೆ ಪಡೆಯಲು ಭಾರತದಲ್ಲಿ ಸರ್ಕಾರಿ ಅಧಿಕಾರಿಗಳಿಗೆ ಲಂಚ ನೀಡಿದ್ದಾರೆ. ಅಲ್ಲದೆ ತಪ್ಪು ಮಾಹಿತಿ ನೀಡಿ ಅಮೆರಿಕದ ಹೂಡಿಕೆದಾರರಿಂದ ಬಂಡವಾಳ ಸಂಗ್ರಹಿಸಲಾಗಿದೆ ಎಂದು ಕಳೆದ ನವೆಂಬರ್ ತಿಂಗಳಿನಲ್ಲಿ ಅಮೆರಿಕದ ನ್ಯಾಯಾಲಯದಲ್ಲಿ ಲಂಚ ಪ್ರಕರಣ ಕುರಿತು ಆರೋಪ ಸಲ್ಲಿಕೆಯಾಗಿತ್ತು.

ಅದಾನಿ ಸಮೂಹದ ಪ್ರತಿನಿಧಿಗಳು, ಅಮೆರಿಕದ ನ್ಯಾಯಾಂಗ ಇಲಾಖೆ ವಕ್ತಾರರು ಮತ್ತು ಶ್ವೇತಭವನವು ಈ ಕುರಿತು ಯಾವುದೇ ಪ್ರತಿಕ್ರಿಯೆ ನೀಡಿಲ್ಲ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.