ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜಿಡಿಪಿ ಅಂದಾಜು ತಗ್ಗಿಸಿದ ಎಡಿಬಿ

Last Updated 20 ಜುಲೈ 2021, 16:31 IST
ಅಕ್ಷರ ಗಾತ್ರ

ನವದೆಹಲಿ: ‍ಪ್ರಸಕ್ತ ಹಣಕಾಸು ವರ್ಷದಲ್ಲಿ ಭಾರತದ ಆರ್ಥಿಕ ಬೆಳವಣಿಗೆ ದರದ ಅಂದಾಜನ್ನು ಏಷ್ಯಾ ಅಭಿವೃದ್ಧಿ ಬ್ಯಾಂಕ್ (ಎಡಿಬಿ) ತಗ್ಗಿಸಿದೆ. ದೇಶದ ಅರ್ಥ ವ್ಯವಸ್ಥೆಯು ಶೇಕಡ 11ರ ದರದಲ್ಲಿ ಬೆಳವಣಿಗೆ ಕಾಣಲಿದೆ ಎಂದು ಈ ಮೊದಲು ಅಂದಾಜಿಸಿದ್ದ ಎಡಿಬಿ, ಈಗ ಅದನ್ನು ಶೇ 10ಕ್ಕೆ ಇಳಿಕೆ ಮಾಡಿದೆ.

‘ಕೊರೊನಾ ವೈರಾಣುವಿನ ಎರಡನೆಯ ಅಲೆಯ ಕಾರಣದಿಂದಾಗಿ ಹಲವು ರಾಜ್ಯ ಸರ್ಕಾರಗಳು ಕಠಿಣ ನಿರ್ಬಂಧಗಳನ್ನು ಜಾರಿಗೆ ತಂದವು. ದೇಶದಲ್ಲಿ ಮೇ ಆರಂಭದಲ್ಲಿ ಪ್ರತಿನಿತ್ಯ ವರದಿಯಾಗುವ ಕೋವಿಡ್ ಪ್ರಕರಣಗಳ ಸಂಖ್ಯೆಯು 4 ಲಕ್ಷವನ್ನು ದಾಟಿತ್ತು. ಇದು ಜುಲೈ ವೇಳೆಗೆ 40 ಸಾವಿರದ ಮಟ್ಟಕ್ಕೆ ಇಳಿದಿದೆ. ನಿರ್ಬಂಧಗಳು ತೆರವಾದ ತಕ್ಷಣದಲ್ಲಿ ಆರ್ಥಿಕ ಚಟುವಟಿಕೆಗಳು ಪುನರಾರಂಭ ಆಗಿವೆ’ ಎಂದು ಎಡಿಬಿ ಹೇಳಿದೆ.

2022–23ರಲ್ಲಿ ದೇಶದ ಅರ್ಥ ವ್ಯವಸ್ಥೆಯು ಶೇ 7.5ರಷ್ಟು ಬೆಳವಣಿಗೆ ಸಾಧಿಸುವ ನಿರೀಕ್ಷೆ ಇದೆ ಎಂದು ಅದು ಹೇಳಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT