ನವದೆಹಲಿ (ಪಿಟಿಐ): 2024–25ನೇ ಆರ್ಥಿಕ ವರ್ಷದಲ್ಲಿ ಭಾರತದ ಜಿಡಿಪಿಯು ಶೇ 7ರಷ್ಟು ಪ್ರಗತಿ ಸಾಧಿಸಲಿದೆ ಎಂದು ಏಷ್ಯಾ ಅಭಿವೃದ್ಧಿ ಬ್ಯಾಂಕ್ (ಎಡಿಬಿ) ತಿಳಿಸಿದೆ.
‘ದೇಶದ ಕೃಷಿ ಉತ್ಪಾದನೆಯಲ್ಲಿ ಹೆಚ್ಚಳವಾಗಲಿದೆ. ಜೊತೆಗೆ, ಕೇಂದ್ರ ಸರ್ಕಾರವು ಸಾರ್ವಜನಿಕ ವೆಚ್ಚದ ಪ್ರಮಾಣವನ್ನು ಹೆಚ್ಚಿಸಲಿದೆ. ಇದು ಆರ್ಥಿಕ ಚಟುವಟಿಕೆಗೆ ಬಲ ನೀಡಲಿದೆ’ ಎಂದು ಬುಧವಾರ ಬಿಡುಗಡೆಯಾಗಿರುವ ಆರ್ಥಿಕ ಮುನ್ನೋಟದ ವರದಿ ತಿಳಿಸಿದೆ.
2025–26ನೇ ಆರ್ಥಿಕ ವರ್ಷದಲ್ಲಿ ಜಿಡಿಪಿಯು ಶೇ 7.2ರಷ್ಟು ಬೆಳವಣಿಗೆ ಕಾಣಲಿದೆ ಎಂದು ಅಂದಾಜಿಸಿದೆ.
‘ಜಾಗತಿಕ ಬಿಕ್ಕಟ್ಟಿನ ನಡುವೆಯೂ ಭಾರತದ ಆರ್ಥಿಕ ಸ್ಥಿತಿಯು ಚೇತರಿಕೆ ಕಂಡಿದ್ದು, ಸ್ಥಿರ ಬೆಳವಣಿಗೆ ಸಾಧಿಸಿದೆ’ ಎಂದು ಎಡಿಬಿಯ ಭಾರತದ ನಿರ್ದೇಶಕ ಮಿಯೋ ಓಕಾ ತಿಳಿಸಿದ್ದಾರೆ.