ಶನಿವಾರ, ಜನವರಿ 23, 2021
18 °C

ಬೆಂಗಳೂರಿನ ವಿದ್ಯುತ್ ಪೂರೈಕೆ ಸುಧಾರಿಸಲು ಎಡಿಬಿಯಿಂದ ₹730 ಕೋಟಿ ಸಾಲ: ಕೇಂದ್ರ

ಪಿಟಿಐ Updated:

ಅಕ್ಷರ ಗಾತ್ರ : | |

ನವದೆಹಲಿ: ಬೆಂಗಳೂರು ನಗರದ ವಿದ್ಯುತ್ ವಿತರಣಾ ವ್ಯವಸ್ಥೆಯ ಆಧುನೀಕರಣಕ್ಕೆ ಏಷ್ಯಾ ಅಭಿವೃದ್ಧಿ ಬ್ಯಾಂಕ್‌ (ಎಡಿಬಿ) ಒಟ್ಟು ₹ 730 ಕೋಟಿ ಸಾಲವನ್ನು ನೀಡಲಿದೆ ಎಂದು ಕೇಂದ್ರ ಹಣಕಾಸು ಸಚಿವಾಲಯದ ಪ್ರಕಟಣೆ ತಿಳಿಸಿದೆ.

ಈ ಸಾಲ ಮಾತ್ರವೇ ಅಲ್ಲದೆ, ಎಡಿಬಿಯು ಬೆಂಗಳೂರು ವಿದ್ಯುತ್‌ ಸರಬರಾಜು ಕಂಪನಿಗೆ (ಬೆಸ್ಕಾಂ) ₹ 657 ಕೋಟಿ ಸಾಲವನ್ನು ಕೂಡ ನೀಡಲಿದೆ. ‘ಬೆಂಗಳೂರಿನ ವಿದ್ಯುತ್ ಪೂರೈಕೆಯ ಗುಣಮಟ್ಟ ಹಾಗೂ ವಿಶ್ವಾಸಾರ್ಹತೆಯನ್ನು ಹೆಚ್ಚಿಸುವ ಉದ್ದೇಶದಿಂದ ವ್ಯವಸ್ಥೆಯ ಆಧುನೀಕರಣಕ್ಕೆ ₹ 730 ಕೋಟಿ ಸಾಲ ಪಡೆಯುವ ಒಪ್ಪಂದಕ್ಕೆ ಕೇಂದ್ರ ಸರ್ಕಾರ ಮತ್ತು ಎಡಿಬಿ ಸಹಿ ಹಾಕಿವೆ’ ಎಂದು ಪ್ರಕಟಣೆಯಲ್ಲಿ ಹೇಳಲಾಗಿದೆ.

ವಿದ್ಯುತ್ ವಿತರಣಾ ಕೇಬಲ್‌ಗಳನ್ನು ನೆಲದ ಅಡಿಯಲ್ಲಿ ಅಳವಡಿಸಲಾಗುವುದು. ಇದರಿಂದಾಗಿ ಸೋರಿಕೆಯಲ್ಲಿ ಶೇಕಡ 30ರಷ್ಟನ್ನು ಕಡಿಮೆ ಮಾಡಬಹುದು. ಸ್ಮಾರ್ಟ್ ಮೀಟರ್ ವ್ಯವಸ್ಥೆಗಾಗಿ ಫೈಬರ್ ಆಪ್ಟಿಕಲ್ ಕೇಬಲ್ ಬಳಸಲಾಗುವುದು ಎಂದು ಪ್ರಕಟಣೆಯಲ್ಲಿ ವಿವರಿಸಲಾಗಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು