ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

2024ರ ವೇಳೆಗೆ ಹಳಿಗೆ ಮರಳದೆ ಅಭಿವೃದ್ಧಿ ಹೊಂದಿದ ಆರ್ಥಿಕತೆ: ಗೀತಾ ಗೋಪಿನಾಥ್‌

ಐಎಂಎಫ್‌ನ ಒಂದನೇ ಉಪ ವ್ಯವಸ್ಥಾಪಕ ನಿರ್ದೇಶಕಿ
Last Updated 25 ಮೇ 2022, 13:53 IST
ಅಕ್ಷರ ಗಾತ್ರ

ದಾವೋಸ್‌: ಅಭಿವೃದ್ಧಿ ಹೊಂದಿದ ಆರ್ಥಿಕತೆಗಳು 2024ರ ವೇಳೆಗೆ ಹಳಿಗೆ ಮರಳಲಿವೆ. ಆದರೆ, ಅಭಿವೃದ್ಧಿಶೀಲ ದೇಶಗಳ ಆರ್ಥಿಕ ಬೆಳವಣಿಗೆಯು ಕೋವಿಡ್‌ಗೂ ಮುಂಚಿನ ಮಟ್ಟಕ್ಕಿಂತ ಶೇಕಡ 5ರಷ್ಟು ಕಡಿಮೆ ಇರಲಿದೆ ಎಂದು ಅಂತರರಾಷ್ಟ್ರೀಯ ಹಣಕಾಸು ನಿಧಿಯ (ಐಎಂಎಫ್‌) ಒಂದನೇ ಉಪ ವ್ಯವಸ್ಥಾಪಕ ನಿರ್ದೇಶಕಿ ಗೀತಾ ಗೋಪಿನಾಥ್‌ ಹೇಳಿದ್ದಾರೆ.

ಕೋವಿಡ್‌ ಸಾಂಕ್ರಾಮಿಕದಿಂದಾಗಿ ಜಾಗತಿಕ ಆರ್ಥಿಕತೆಗಳ ಮೇಲೆ ಪ್ರತಿಕೂಲ ಪರಿಣಾಮ ಉಂಟಾಗಿದ್ದು, ಈಗ ನಿಧಾನವಾಗಿ ಚೇತರಿಕೆ ಹಾದಿಗೆ ಮರಳುತ್ತಿವೆ. ರಷ್ಯಾ–ಉಕ್ರೇನ್‌ ಸಂಘರ್ಷವು ಜಾಗತಿಕ ಆರ್ಥಿಕ ಚೇತರಿಕೆಗೆ ಅತಿದೊಡ್ಡ ಹಿನ್ನಡೆ ಆಗಿದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ವಿಶ್ವ ಆರ್ಥಿಕ ವೇದಿಕೆಯ ವಾರ್ಷಿಕ ಸಭೆಯಲ್ಲಿ, ಜಾಗತಿಕ ಬೆಳವಣಿಗೆಯ ಕುರಿತಾದ ವಿಶೇಷ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು. ಗರಿಷ್ಠ ಮಟ್ಟದಲ್ಲಿರುವ ಹಣದುಬ್ಬರವನ್ನು ನಿಯಂತ್ರಿಸುವ ಪ್ರಯತ್ನದ ಭಾಗವಾಗಿ ಕೇಂದ್ರೀಯ ಬ್ಯಾಂಕ್‌ಗಳು ಬಡ್ಡಿದರ ಹೆಚ್ಚಿಸುತ್ತಿವೆ. ಅದರ ಅಗತ್ಯವೂ ಇದೆ. ಆದರೆ, ಜಾಗತಿಕ ಹಣಕಾಸು ಮತ್ತು ವ್ಯಾಪಾರದ ಮೇಲೆ ಬಡ್ಡಿದರ ಏರಿಕೆಯು ಪರಿಣಾಮ ಉಂಟುಮಾಡುತ್ತಿದೆ ಎಂದು ಅವರು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT