ಬುಧವಾರ, 8 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತೈಲ ಬೆಲೆ ಹೆಚ್ಚಳ

Last Updated 11 ಜೂನ್ 2021, 15:45 IST
ಅಕ್ಷರ ಗಾತ್ರ

ನವದೆಹಲಿ: ಪೆಟ್ರೋಲ್‌ ಬೆಲೆಯು ₹ 100ರ ಗಡಿ ದಾಟಿದ ನಂತರ ರಾಜಸ್ಥಾನದಲ್ಲಿ ಈಗ ಡೀಸೆಲ್ ಬೆಲೆಯು ಲೀಟರಿಗೆ ₹ 100ರ ಗಡಿಯನ್ನು ಸಮೀಪಿಸಿದೆ. ಸರ್ಕಾರಿ ಸ್ವಾಮ್ಯದ ತೈಲ ಮಾರಾಟ ಕಂಪನಿಗಳು ಶುಕ್ರವಾರ ಪೆಟ್ರೋಲ್ ಬೆಲೆಯನ್ನು 29 ಪೈಸೆ ಹಾಗೂ ಡೀಸೆಲ್ ಬೆಲೆಯನ್ನು 28 ಪೈಸೆ ಹೆಚ್ಚಿಸಿವೆ.

ರಾಜಸ್ಥಾನದ ಶ್ರೀಗಂಗಾನಗರ ಜಿಲ್ಲೆಯಲ್ಲಿ ಡೀಸೆಲ್ ಬೆಲೆಯು ₹ 99.80ಕ್ಕೆ ತಲುಪಿದೆ. ಪ್ರೀಮಿಯಂ ಡೀಸೆಲ್ ದರ ಇಲ್ಲಿ ಈಗಾಗಲೇ ₹ 103.47 ಆಗಿದೆ. ಬೆಂಗಳೂರಿನಲ್ಲಿ ಪೆಟ್ರೋಲ್ ಬೆಲೆ ₹ 99.11, ಡೀಸೆಲ್ ಬೆಲೆ ₹ 92.03 ಆಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT